ದೇಶ

ಸಂಸತ್ ಚಳಿಗಾಲದ ಅಧಿವೇಶನದ ಮೊದಲ ದಿನ ಪ್ರತಿಪಕ್ಷಗಳ ನಾಯಕರ ಸಭೆ ಕರೆದ ಕಾಂಗ್ರೆಸ್

Lingaraj Badiger

ನವದೆಹಲಿ: ಮುಂಬರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ತಮ್ಮ ನಡುವೆ ಏಕತೆ ಮತ್ತು ಹೊಂದಾಣಿಕೆಯನ್ನು ಖಚಿತಪಡಿಸಿಕೊಳ್ಳಲು ಪ್ರಮುಖ ಪ್ರತಿಪಕ್ಷ ಕಾಂಗ್ರೆಸ್ ನವೆಂಬರ್ 29 ರಂದು ಬೆಳಗ್ಗೆ ಇತರ ವಿರೋಧ ಪಕ್ಷಗಳ ನಾಯಕರ ಸಭೆ ಕರೆದಿದೆ.

ಸಂಸತ್ತಿನ ಚಳಿಗಾಲದ ಅಧಿವೇಶನ ನವೆಂಬರ್ 29 ರಂದು ಆರಂಭವಾಗಲಿದ್ದು, ಡಿಸೆಂಬರ್ 23 ರವರೆಗೆ ನಡೆಯಲಿದೆ.

ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಲೋಕಸಭೆ ಮತ್ತು ರಾಜ್ಯಸಭೆಯ ವಿವಿಧ ರಾಜಕೀಯ ಪಕ್ಷಗಳ ನಾಯಕರಿಗೆ ಈ  ಸಂಬಂಧ ಶುಕ್ರವಾರ ಪತ್ರ ಬರೆದಿದ್ದು, ಮುಂಬರುವ ಸಂಸತ್ ಅಧಿವೇಶನದಲ್ಲಿ ಕೈಗೊಳ್ಳಬೇಕಾದ ವಿಷಯಗಳ ಬಗ್ಗೆ ಚರ್ಚಿಸಲು ಪ್ರತಿಪಕ್ಷ ನಾಯಕರು ಸಭೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದ್ದಾರೆ.

"ನವೆಂಬರ್ 29, 2021 ರಿಂದ ಪ್ರಾರಂಭವಾಗುವ ಚಳಿಗಾಲದ ಅಧಿವೇಶನದಲ್ಲಿ ಪ್ರಮುಖ ವಿಷಯಗಳನ್ನು ಪ್ರಸ್ತಾಪಿಸಲು ನಮಗೆಲ್ಲರಿಗೂ ಬಹಳ ನಿರ್ಣಾಯಕವಾಗಿದೆ. ನಾನು ರಾಜ್ಯಸಭೆ ಮತ್ತು ಲೋಕಸಭೆಯ ಎಲ್ಲಾ ವಿರೋಧ ಪಕ್ಷಗಳ ನಾಯಕರ ಸಭೆಯನ್ನು ನವೆಂಬರ್ 29, 2021 ರಂದು ಸೋಮವಾರ ಕರೆಯುತ್ತಿದ್ದೇನೆ. ಸಂಸತ್ ಭವನದ ನನ್ನ ಕೊಠಡಿಯಲ್ಲಿ ಬೆಳಗ್ಗೆ 9.45ಕ್ಕೆ ಸಭೆ ನಿಗದಿಯಾಗಿದೆ’’ ಎಂದು ಖರ್ಗೆ ಇತರ ಪಕ್ಷಗಳ ಮುಖಂಡರಿಗೆ ಪತ್ರದ ಮೂಲಕ ತಿಳಿಸಿದ್ದಾರೆ.

SCROLL FOR NEXT