ಸಂಸತ್ತಿನ ಸೆಂಟ್ರಲ್ ಹಾಲ್ ನಲ್ಲಿ ನಡೆದ ಸಂವಿಧಾನ ದಿನ ಕಾರ್ಯಕ್ರಮ 
ದೇಶ

ಸಂಸತ್ತಿನ ಸೆಂಟ್ರಲ್ ಹಾಲ್ ನಲ್ಲಿ 71ನೇ ಸಂವಿಧಾನ ದಿನ ಆಚರಣೆ: 'ಸಂವಿಧಾನ ಭಗವದ್ಗೀತೆಯ ಆಧುನಿಕ ಆವೃತ್ತಿಯಂತೆ' ಎಂದ ಲೋಕಸಭಾಧ್ಯಕ್ಷ

ಸಂಸತ್ತಿನ ಕೇಂದ್ರ ಸಭಾಂಗಣದಲ್ಲಿ ಇಂದು ಶುಕ್ರವಾರ ಸಂವಿಧಾನ ದಿನ(ನ.26)ವನ್ನು ಹಮ್ಮಿಕೊಳ್ಳಲಾಗಿತ್ತು.

ನವದೆಹಲಿ: ಸಂಸತ್ತಿನ ಕೇಂದ್ರ ಸಭಾಂಗಣದಲ್ಲಿ ಇಂದು ಶುಕ್ರವಾರ ಸಂವಿಧಾನ ದಿನ(ನ.26)ವನ್ನು ಹಮ್ಮಿಕೊಳ್ಳಲಾಗಿತ್ತು. ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್, ಉಪ ರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರ ಮೋದಿ, ಲೋಕಸಭಾ ಸ್ಪೀಕರ್ ಓಂ ಬಿರ್ಲಾ, ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಈ ವೇಳೆ ಮಾತನಾಡಿದ ಲೋಕಸಭಾ ಸ್ಪೀಕರ್ ಓಂ ಬಿರ್ಲಾ, ಭಗವದ್ಗೀತೆಯ ಆಧುನಿಕ ಆವೃತ್ತಿಯಂತೆ ಭಾರತದ ಸಂವಿಧಾನವು ನಮ್ಮನ್ನು ರಾಷ್ಟ್ರದ ಪರವಾಗಿ ಕೆಲಸ ಮಾಡಲು ಪ್ರೇರೇಪಿಸುತ್ತದೆ. ನಾವು ಪ್ರತಿಯೊಬ್ಬರೂ ದೇಶದ ಪರವಾಗಿ ಕೆಲಸ ಮಾಡಲು ಬದ್ಧರಾಗಿದ್ದರೆ ಒಂದೇ ಭಾರತ, ಶ್ರೇಷ್ಠ ಭಾರತವನ್ನು ನಿರ್ಮಾಣ ಮಾಡಲು ಸಾಧ್ಯ ಎಂದರು.

ಇದಕ್ಕೂ ಮುನ್ನ ಸಂವಿಧಾನದ ಪೀಠಿಕೆಯನ್ನು ಓದಲಾಯಿತು. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸಂವಿಧಾನ ಪೀಠಿಕೆಯನ್ನು ಓದಿದರು. ನಂತರ ಅದನ್ನು ಎಲ್ಲರೂ ಪುನರುಚ್ಛರಿಸಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಂಗ್ರೆಸ್‌ನ ಆಂತರಿಕ ಕಲಹದಿಂದ 'ಮೂರನೇ ಮುಖ್ಯಮಂತ್ರಿ' ಬಂದರೂ ಅಚ್ಚರಿ ಇಲ್ಲ: ಬಿ.ವೈ ವಿಜಯೇಂದ್ರ; Video

ಸುಪ್ರೀಂಕೋರ್ಟ್​ಗೆ ನನ್ನ ಬಗ್ಗೆ ತಪ್ಪು ಮಾಹಿತಿ: ಸರ್ಕಾರದ ವಿರುದ್ಧ ಡಿಜಿಪಿ ಅಲೋಕ್ ಕುಮಾರ್ ಅಸಮಾಧಾನ!

ಯುವ ಜನತೆಯ ಆಕ್ರೋಶ ತಡೆಯಲು ಸಾಧ್ಯವಿಲ್ಲ, ಇಡೀ ದೇಶ ಜಂತರ್ ಮಂತರ್ ಆಗಲಿದೆ: ಪ್ರಕಾಶ್ ರಾಜ್

ಸೆಪ್ಟೆಂಬರ್‌ನಲ್ಲಿ ನಿರೀಕ್ಷೆ ಮೀರಿ ಹೆಚ್ಚಿದ ಭಾರತದ ಸಗಟು ಹಣದುಬ್ಬರ: ಶೇ.11.4ಕ್ಕೆ ಏರಿಕೆ

'ಅಧರ್ಮ ಎಸಗಿದವರಿಗೆ ಶಿಕ್ಷೆ ನೀಡುವುದೂ ಧರ್ಮವೇ'; ಮೀರತ್ ಹತ್ಯೆ ಪ್ರಕರಣ ಶಿಕ್ಷೆ ಪ್ರಕಟ ವೇಳೆ ನ್ಯಾಯಾಧೀಶರಿಂದ ಭಗವದ್ಗೀತೆ ಉಲ್ಲೇಖ!