ದೇಶ

ಡಿ.15 ರಿಂದ ಅಂತಾರಾಷ್ಟ್ರೀಯ ವಿಮಾನಯಾನ ಪುನರಾರಂಭ: ನಾಗರಿಕ ವಿಮಾನಯಾನ ಸಚಿವಾಲಯ

Lingaraj Badiger

ನವದೆಹಲಿ: ಭಾರತ ಡಿಸೆಂಬರ್ 15 ರಿಂದ ಅಂತಾರಾಷ್ಟ್ರೀಯ ವಿಮಾನಯಾನವನ್ನು ಪುನರಾರಂಭಿಸಲು ಸಿದ್ಧವಾಗಿದೆ ಎಂದು ನಾಗರಿಕ ವಿಮಾನಯಾನ ಸಚಿವಾಲಯ ಶುಕ್ರವಾರ ತಿಳಿಸಿದೆ.

ಗೃಹ ಸಚಿವಾಲಯ, ವಿದೇಶಾಂಗ ಸಚಿವಾಲಯ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದೊಂದಿಗೆ ಸಮಾಲೋಚಿಸಿದ ನಂತರ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ವಿಮಾನಯಾನ ಸಚಿವಾಲಯ ಇಂದು ಪ್ರಕಟಣೆಯಲ್ಲಿ ತಿಳಿಸಿದೆ.

ಎರಡು ದಿನಗಳ ಹಿಂದಷ್ಟೇ ಅಂತಾರಾಷ್ಟ್ರೀಯ ವಿಮಾನ ಸೇವೆ ಈ ವರ್ಷಾಂತ್ಯದ ವೇಳೆಗೆ ಸಾಮಾನ್ಯ ಸ್ಥಿತಿಗೆ ಮರಳುವ ನಿರೀಕ್ಷೆಯಿದೆ ಎಂದು ನಾಗರಿಕ ವಿಮಾನಯಾನ ಕಾರ್ಯದರ್ಶಿ ರಾಜೀವ್ ಬನ್ಸಾಲ್ ಅವರು ಹೇಳಿದ್ದರು.

ಕೋವಿಡ್ -19 ಸಾಂಕ್ರಾಮಿಕ ರೋಗದಿಂದಾಗಿ ಕಳೆದ ವರ್ಷ ಮಾರ್ಚ್ 23 ರಿಂದ ಭಾರತದಲ್ಲಿ ನಿಗದಿತ ಅಂತಾರಾಷ್ಟ್ರೀಯ ವಿಮಾನಯಾನವನ್ನು ಸ್ಥಗಿತಗೊಳಿಸಲಾಗಿತ್ತು.

ಆದಾಗ್ಯೂ, ವಿಶೇಷ ಅಂತಾರಾಷ್ಟ್ರೀಯ ಪ್ರಯಾಣಿಕ ವಿಮಾನಗಳು ಕಳೆದ ವರ್ಷ ಜುಲೈನಿಂದ ಸುಮಾರು 28 ದೇಶಗಳೊಂದಿಗೆ ಏರ್ ಬಬಲ್ ವ್ಯವಸ್ಥೆಗಳ ಅಡಿಯಲ್ಲಿ ಸಂಚರಿಸುತ್ತಿವೆ.

SCROLL FOR NEXT