ಟ್ರ್ಯಾಕ್ಟರ್ ಜಾಥ ಮೂಲಕ ರೈತರ ಪ್ರತಿಭಟನೆ (ಸಂಗ್ರಹ ಚಿತ್ರ) 
ದೇಶ

ರೈತರ ಪ್ರತಿಭಟನೆ: ಸಂಸತ್ ಗೆ ನ.29 ರ ಟ್ರ್ಯಾಕ್ಟರ್ ಜಾಥ ರದ್ದುಗೊಳಿಸಿದ ಎಸ್ ಕೆಎಂ

ಕೃಷಿ ಕಾಯ್ದೆಗಳನ್ನು ವಿರೋಧಿಸಿ ಹಾಗೂ ಕೃಷಿ ಬೇಡಿಕೆಗಳನ್ನು ಈಡೇರಿಕೆಗಾಗಿ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ಸಂಯುಕ್ತ ಕಿಸಾನ್ ಮೋರ್ಚ ನ.29 ರಂದು ನಿಗದಿಪಡಿಸಿದ್ದ ಸಂಸತ್ ಗೆ ಟ್ರ್ಯಾಕ್ಟರ್ ಜಾಥವನ್ನು ರದ್ದುಗೊಳಿಸಿದೆ.

ನವದೆಹಲಿ: ಕೃಷಿ ಕಾಯ್ದೆಗಳನ್ನು ವಿರೋಧಿಸಿ ಹಾಗೂ ಕೃಷಿ ಬೇಡಿಕೆಗಳನ್ನು ಈಡೇರಿಕೆಗಾಗಿ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ಸಂಯುಕ್ತ ಕಿಸಾನ್ ಮೋರ್ಚ ನ.29 ರಂದು ನಿಗದಿಪಡಿಸಿದ್ದ ಸಂಸತ್ ಗೆ ಟ್ರ್ಯಾಕ್ಟರ್ ಜಾಥವನ್ನು ರದ್ದುಗೊಳಿಸಿದೆ.
 
ಮುಂದಿನ ನಡೆಯ ಬಗ್ಗೆ ನಿರ್ಧರಿಸಲು ಮುಂದಿನ ತಿಂಗಳು ಸಭೆ ನಡೆಸುವುದಾಗಿ ರೈತ ನಾಯಕರು ಮಾಹಿತಿ ನೀಡಿದ್ದಾರೆ. 

ಸಂಸತ್ ನ ಚಳಿಗಾಲದ ಅಧಿವೇಶನ ಪ್ರಾರಂಭವಾಗಲಿದ್ದು, ಈ ಅಧಿವೇಶನದಲ್ಲಿ, ರೈತರು ವಿರೋಧಿಸುತ್ತಿದ್ದ ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯಲಾಗುತ್ತದೆ. 

ರೈತ ಸಂಘಟನೆಗಳ ಒಕ್ಕೂಟವಾಗಿರುವ ಸಂಯುಕ್ತ ಕಿಸಾನ್ ಮೋರ್ಚ (ಎಸ್ ಕೆಎಂ) ಕಳೆದ ಒಂದು ವರ್ಷದಿಂದ ಈ ಹಿಂದೆ ಕೇಂದ್ರ ಸರ್ಕಾರ ಜಾರಿಗೆ ಯತ್ನಿಸಿದ್ದ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆಯಲ್ಲಿ ತೊಡಗಿತ್ತು. ಈಗ ತಮ್ಮ ಬೆಳೆಗಳಿಗೆ ಎಂಎಸ್ ಪಿಗೆ ಕಾನೂನು ಜಾರಿಗೊಳಿಸುವುದಕ್ಕಾಗಿ ರೈತ ಸಂಘಟನೆಗಳು ಆಗ್ರಹಿಸುತ್ತಿವೆ.
 
ಎಸ್ ಕೆಎಂ ನಾಯಕ ದರ್ಶನ್ ಪಾಲ್ ಮಾತನಾಡಿದ್ದು, ನ.29 ರಂದು ಹಮ್ಮಿಕೊಳ್ಳಲಾಗಿದ್ದ ಸಂಸತ್ ಗೆ ಜಾಥವನ್ನು ರದ್ದುಗೊಳಿಸಿದ್ದೇವೆ ಎಂದು ಹೇಳಿದ್ದಾರೆ.

ರೈತರ ವಿರುದ್ಧದ ಪ್ರಕರಣಗಳನ್ನು ಹಿಂಪಡೆಯುವಂತೆ, ಪ್ರತಿಭಟನೆ ವೇಳೆ ಜೀವ ಕಳೆದುಕೊಂಡ ರೈತರಿಗೆ ಸ್ಮಾರಕ ನಿರ್ಮಿಸಲು ಭೂಮಿ ನೀಡುವಂತೆ, ಕೇಂದ್ರ ಸಚಿವ ಅಜಯ್ ಮಿಶ್ರಾ ಅವರನ್ನು ಸಂಪುಟದಿಂದ ಕೈ ಬಿಡುವುದೂ ಸೇರಿ ಹಲವು ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದೆವು. ಪ್ರಧಾನಿ ಮೋದಿ ಅವರಿಂದ ಪ್ರತಿಕ್ರಿಯೆಯನ್ನು ನಿರೀಕ್ಷಿಸುತ್ತಿದ್ದೇವೆ ಡಿ.04 ರಂದು ಎಸ್ ಕೆಎಂ ಮತ್ತೊಂದು ಸಭೆ ನಡೆಸಿ ಮುಂದಿನ ನಡೆ ಏನಿರಲಿದೆ ಎಂಬುದನ್ನು ನಿರ್ಧರಿಸಲಿವೆ ಎಂದು ದರ್ಶನ್ ಪಾಲ್ ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

ಗಡಿಯಲ್ಲಿ ಕಟ್ಟುನಿಟ್ಟಿನ ಕ್ರಮ: 15 ಕಿ.ಮೀ. ಒಳಗಿನ ಅಕ್ರಮ ನಿರ್ಮಾಣ ಕೆಡವಲು ಅಮಿತ್ ಶಾ ಸೂಚನೆ

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ಸಿಎಂ ಸಿದ್ದರಾಮಯ್ಯ ಪದತ್ಯಾಗ; ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

SCROLL FOR NEXT