ಸಾಂದರ್ಭಿಕ ಚಿತ್ರ 
ದೇಶ

ಪುಲ್ವಾಮಾದಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಇಬ್ಬರು ಸಹಚರರ ಬಂಧನ

 ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಇಂದು ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಇಬ್ಬರು ಸಹಚರರನ್ನು ಬಂಧಿಸಿದ್ದು, ಅವರಿಂದ ಶಸಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶ್ರೀನಗರ: ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಇಂದು ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಇಬ್ಬರು ಸಹಚರರನ್ನು ಬಂಧಿಸಿದ್ದು, ಅವರಿಂದ ಶಸಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿಸಲಾಗಿರುವ ಉಗ್ರ ಸಹಚರರನ್ನು ಅವಂತಿಪೋರಾದ   ಮುಜಾಮಿಲ್ ಆಯೊಬ್ ಭಟ್ ಮತ್ತು ಸುಹೈಲ್ ಮನ್ಜೂರ್ ಮೊಹಮ್ಮದ್ ಎಂದು ಗುರುತಿಸಲಾಗಿದೆ. ಇವರು  ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯೊಂದಿಗೆ ನಂಟು ಹೊಂದಿದ್ದ ಆರೋಪದ ಮೇರೆಗೆ ದಕ್ಷಿಣ ಕಾಶ್ಮೀರ ಜಿಲ್ಲೆಯ ಅವಂತಿಪೋರಾದಲ್ಲಿ ಬಂಧಿಸಲಾಯಿತು ಎಂದು ಪೊಲೀಸ್ ವಕ್ತಾರರೊಬ್ಬರು ತಿಳಿಸಿದ್ದಾರೆ. 

ಬಂಧಿತರಿಂದ ಎಕೆ-47 ರೈಫಲ್ಸ್ ನ 383 ಸುತ್ತು ಗುಂಡುಗಳು ಸೇರಿದಂತೆ ಅಪಾರದ ಪ್ರಮಾಣದ ಶಸಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ವಕ್ತಾರರು ಮಾಹಿತಿ ನೀಡಿದ್ದಾರೆ. 

ಬಂಧಿತ ಉಗ್ರರ ಸಹಚರರು ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ಕಮಾಂಡರ್ ಗಳೊಂದಿಗೆ ಸಂಪರ್ಕ ಹೊಂದಿದ್ದರು. ಉಗ್ರ ಚಟುವಟಿಕೆಗಳಿಗೆ ನೆಲೆ ಒದಗಿಸುತ್ತದಲ್ಲದೇ ಶಸಾಸ್ತ್ರಗಳ ಪೂರೈಕೆಯಲ್ಲಿ ತೊಡಗಿಸಿಕೊಂಡಿದ್ದರು ಎಂದು ಅವರು ತಿಳಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ವಕ್ತಾರರು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕೊಪ್ಪಳದ ಗಂಗಾವತಿಯಲ್ಲಿ ಹರಿಯಿತು ನೆತ್ತರು: BJP ಯುವ ಮೋರ್ಚಾ ಅಧ್ಯಕ್ಷನ ಬರ್ಬರ ಹತ್ಯೆ

ಮಧ್ಯಪ್ರದೇಶ: ಕಾಫ್ ಸಿರಪ್ ಸೇವಿಸಿ ಮೂತ್ರಪಿಂಡ ವೈಫಲ್ಯ; ಚಿಕಿತ್ಸೆ ಪಡೆಯುತ್ತಿದ್ದ 6 ಮಕ್ಕಳ ಮರಣ; ಸಾವಿನ ಸಂಖ್ಯೆ 20ಕ್ಕೆ ಏರಿಕೆ

BiggBoss Kannada: ಬಿಗ್ ಬಾಸ್ 12 ಮನೆಗೆ ಬೀಗಮುದ್ರೆ, ಜಾಲಿವುಡ್ ಸ್ಟುಡಿಯೋಸ್ ಇಂದು ಹೈಕೋರ್ಟ್ ಮೊರೆ?

ರಾಜಕೀಯ ಒತ್ತಡಕ್ಕೆ ಮಣಿದು ಆತುರಾತುರವಾಗಿ ಸಮೀಕ್ಷೆ ನಡೆಸುತ್ತಿದ್ದಾರೆ: BJP ಟೀಕೆ

ನಮ್ಮ ಮೆಟ್ರೋಗೆ ವಾಲ್ಮೀಕಿ ಹೆಸರಿಡಲು ಕೇಂದ್ರಕ್ಕೆ ಒತ್ತಾಯ: ಸಿಎಂ ಸಿದ್ದರಾಮಯ್ಯ

SCROLL FOR NEXT