ಸಂಗ್ರಹ ಚಿತ್ರ 
ದೇಶ

ಪಶ್ಚಿಮ ಬಂಗಾಳ: ಲಾರಿಗೆ ಗುದ್ದಿದ ಶವಸಂಸ್ಕಾರಕ್ಕೆ ತೆರಳುತ್ತಿದ್ದ ವಾಹನ, 18 ಮಂದಿ ದುರ್ಮರಣ

ಶವಸಂಸ್ಕಾರಕ್ಕೆಂದು ತೆರಳುತ್ತಿದ್ದ ವಾಹನ ಹಾಗೂ ಕಲ್ಲು ತುಂಬಿದ ಲಾರಿ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ 18 ಮಂದಿ ಸಾವನ್ನಪ್ಪಿ, 5 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಂಸಖಾಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ನಡೆದಿದೆ.

ನಾಡಿಯಾ: ಶವಸಂಸ್ಕಾರಕ್ಕೆಂದು ತೆರಳುತ್ತಿದ್ದ ವಾಹನ ಹಾಗೂ ಕಲ್ಲು ತುಂಬಿದ ಲಾರಿ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ 18 ಮಂದಿ ಸಾವನ್ನಪ್ಪಿ, 5 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಂಸಖಾಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ನಡೆದಿದೆ.

ನಾಡಿಯಾ ಜಿಲ್ಲೆಯ ಫುಲ್ಬರಿ ರಾಜ್ಯ ಹೆದ್ದಾರಿಯಲ್ಲಿ ಕಳೆದ ರಾತ್ರಿ 12 ಗಂಟೆಯ ಸುಮಾರಿಗೆ ಅಪಘಾತ ಸಂಭವಿಸಿದೆ.
ಘಟನೆಯಲ್ಲಿ ಮೃತಪಟ್ಟವರು, ಮಹಿಳೆಯ ಶವವನ್ನು ಅಂತ್ಯಸಂಸ್ಕಾರಕ್ಕೆಂದು ಮೆಟಾಡೋರ್​ ವಾಹನದಲ್ಲಿ ತೆಗೆದುಕೊಂಡು ಹೋಗುತ್ತಿದ್ದರು ಎಂದು ವರದಿಗಳು ತಿಳಿಸಿವೆ

ದಟ್ಟವಾದ ಮಂಜು ಮತ್ತು ವಾಹನದ ಅತಿಯಾದ ವೇಗದಿಂದಾಗಿ ಶವ ಸಾಗಿಸುತ್ತಿದ್ದ ವಾಹನ ಕಲ್ಲು ತುಂಬಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲಿಯೇ 18 ಮಂದಿ ಸಾವನ್ನಪ್ಪಿದ್ದು, 5 ಮಂದಿ ಗಾಯಗೊಂಡಿದ್ದಾರೆ.

ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿದ ಹಂಸಖಾಲಿ ಪೊಲೀಸರು ಗಾಯಾಳುಗಳನ್ನು ಶಕ್ತಿನಗರ ಆಸ್ಪತ್ರೆಗೆ ಸಾಗಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಉರ್ದು ಭಾಷೆಯಲ್ಲಿ ಸರ್ಕಾರದ ಜಾಹೀರಾತು: ಸಿಎಂ ಸಿದ್ದರಾಮಯ್ಯ ಸಮರ್ಥನೆ ಹೇಗಿದೆ ಗೊತ್ತಾ?

SCROLL FOR NEXT