ದೇಶ

ಮುಂಬೈನಲ್ಲಿ ಬಿಕೆಯು ರ‍್ಯಾಲಿ: ಪ್ರತಿಭಟನೆಯಲ್ಲಿ ಸಾವನ್ನಪ್ಪಿದ 700ಕ್ಕೂ ಹೆಚ್ಚು ರೈತರಿಗೆ ಗೌರವ ಸಮರ್ಪಣೆ

Harshavardhan M

ಮುಂಬೈ: ನೂತನ ಕೇಂದ್ರ ಕೃಷಿ ಕಾನೂನುಗಳ ವಿರುದ್ಧ ವರ್ಷವಿಡೀ ನಡೆದ ಪ್ರತಿಭಟನೆಯಲ್ಲಿ ಸಾವನ್ನಪ್ಪಿದ 700ಕ್ಕೂ ಹೆಚ್ಚು ರೈತರ ತ್ಯಾಗ, ಪರಿಶ್ರಮ, ಸ್ಮರಿಸಿ ಗೌರವ ಸಲ್ಲಿಸಲು ಮಹಾರಾಷ್ಟ್ರದ ಮುಂಬೈನ ಆಜಾದ್ ಮೈದಾನದಲ್ಲಿ ಇಂದು ಭಾನುವಾರ ಸಾವಿರಾರು ರೈತರು ರ‍್ಯಾಲಿ ನಡೆಸಲಿದ್ದಾರೆ.

ಸಂಸತ್ತಿನ ಚಳಿಗಾಲದ ಅಧಿವೇಶನಕ್ಕೆ ಒಂದು ದಿನ ಮುಂಚಿತವಾಗಿ ಆಯೋಜಿಸಲಾದ ರ‍್ಯಾಲಿಯಲ್ಲಿ 50,000ಕ್ಕೂ ಹೆಚ್ಚು ರೈತರು ಸೇರುವ ನಿರೀಕ್ಷೆಯಿದೆ. ಇನ್ನು ಅಕ್ಟೋಬರ್ 3 ರಂದು ನಡೆದ ಲಖೀಂಪುರ ಖೇರಿ ಘಟನೆಯಲ್ಲಿ ಮೃತಪಟ್ಟ ರೈತರ ಚಿತಾಭಸ್ಮವನ್ನು ತಂದು ಅರಬ್ಬಿ ಸಮುದ್ರದಲ್ಲಿ ವಿಸರ್ಜಿಸಲು ಸಹ ಯೋಜಿಸಲಾಗಿದೆ ಎಂದು ರೈತ ಮುಖಂಡರು ಹೇಳಿದ್ದಾರೆ.

ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ಮುಖಂಡ ರಾಕೇಶ್ ಟಿಕಾಯತ್ ಮಾತನಾಡಿ, ರೈತರು 'ಕಿಸಾನ್ ಮಜ್ದೂರ್ ಮಹಾಪಂಚಾಯತ್' ಅನ್ನು ಸಹ ಯೋಜಿಸಿದ್ದಾರೆ.

ಅಲ್ಲಿ ಅವರು ಎಲ್ಲಾ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‍ಪಿ) ಸೇರಿದಂತೆ ಎಲ್ಲ ಕೃಷಿ ಸಂಬಂಧಿತ ಸಮಸ್ಯೆಗಳು, ಸ್ವಾಮಿನಾಥನ್ ವರದಿ, ನಿರುದ್ಯೋಗ ಮತ್ತು ಇತರ ಸಮಸ್ಯೆಗಳು ಸೇರಿದಂತೆ ಇತರೆ ತಮ್ಮ ಬೇಡಿಕೆಗಳನ್ನು ಕೂಡ ಚರ್ಚಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

SCROLL FOR NEXT