ದೇಶ

ತಮಿಳುನಾಡಿನಲ್ಲಿ ಭಾರಿ ಮಳೆ: ರಾಜಧಾನಿ ಚೆನ್ನೈನಲ್ಲಿ ಜಲಾವೃತ, ಹಲವು ಜಿಲ್ಲೆಗಳಲ್ಲಿ ಹೈ ಅಲರ್ಟ್

Srinivasamurthy VN

ಚೆನ್ನೈ: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ತಮಿಳುನಾಡಿನಲ್ಲಿ ಸುರಿಯುತ್ತಿರುವ ಮಳೆ ಮುಂದುವರೆದಿದ್ದು, ರಾಜಧಾನಿ ಚೆನ್ನೈನ ಹಲವು ಪ್ರದೇಶಗಳು ಜಲಾವೃತಗೊಂಡಿವೆ.

ಅಂತೆಯೇ ತಮಿಳುನಾಡಿನ ಕರಾವಳಿ ಜಿಲ್ಲೆಗಳಲ್ಲಿ ಭಾನುವಾರ ಭಾರಿ ಮಳೆಯಾಗುತ್ತಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಚೆನ್ನೈ ಮತ್ತು ದಕ್ಷಿಣದ ಜಿಲ್ಲೆಗಳು, ಕೇಂದ್ರಾಡಳಿತ ಪ್ರದೇಶ ಪುದುಚೇರಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಪುದುಚೇರಿ ಮತ್ತು ಕಾರೈಕಲ್‌ ಪ್ರದೇಶದಲ್ಲಿ ಶುಕ್ರವಾರ ಮತ್ತು ಶನಿವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು.

ಹಲವೆಡೆ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದೆ, ರಸ್ತೆಗಳು ಜಲಾವೃತವಾಗಿವೆ. ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳಿಗೆ ಸರ್ಕಾರ ಸೂಚನೆ ನೀಡಿದೆ. ದಕ್ಷಿಣ ಅಂಡಮಾನ್ ಸಮುದ್ರದಲ್ಲಿ ಸೋಮವಾರ ಬೆಳಿಗ್ಗೆ ಕಡಿಮೆ ಒತ್ತಡದ ಪ್ರದೇಶ ಸೃಷ್ಟಿಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯು (ಐಎಂಡಿ) ತಿಳಿಸಿದೆ.

SCROLL FOR NEXT