ಪ್ರಹ್ಲಾದ ಜೋಶಿ 
ದೇಶ

ಸರ್ವಪಕ್ಷ ಸಭೆಯಲ್ಲಿ 31 ಪಕ್ಷಗಳ ಮುಖಂಡರು ಭಾಗಿ, ಅಡಚಣೆಯಿಲ್ಲದೆ ಚರ್ಚೆಗೆ ಸರ್ಕಾರ ಸಿದ್ಧ- ಪ್ರಹ್ಲಾದ ಜೋಶಿ

ಚಳಿಗಾಲದ ಸಂಸತ್ ಅಧಿವೇಶನ ಹಿನ್ನೆಲೆಯಲ್ಲಿ ನಡೆದ ಸರ್ವ ಪಕ್ಷ ಸಭೆಯಲ್ಲಿ 31 ರಾಜಕೀಯ ಪಕ್ಷಗಳಿಂದ 42 ಮುಖಂಡರು ಪಾಲ್ಗೊಂಡಿದ್ದರು ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಭಾನುವಾರ ತಿಳಿಸಿದ್ದಾರೆ.

ನವದೆಹಲಿ: ಚಳಿಗಾಲದ ಸಂಸತ್ ಅಧಿವೇಶನ ಹಿನ್ನೆಲೆಯಲ್ಲಿ ನಡೆದ ಸರ್ವ ಪಕ್ಷ ಸಭೆಯಲ್ಲಿ 31 ರಾಜಕೀಯ ಪಕ್ಷಗಳಿಂದ 42 ಮುಖಂಡರು ಪಾಲ್ಗೊಂಡಿದ್ದರು ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಭಾನುವಾರ ತಿಳಿಸಿದ್ದಾರೆ.

ಯಾವುದೇ ಅಡಚಣೆಯಿಲ್ಲದೆ ಸ್ಪೀಕರ್ ಹಾಗೂ ಸಭಾಪತಿ ಅನುಮತಿಸಿದ ಯಾವುದೇ ವಿಚಾರಗಳ ಬಗ್ಗೆ ಚರ್ಚೆಗೆ ಸರ್ಕಾರ ಸಿದ್ಧವಿದೆ ಎಂದು ಅವರು ಎಎನ್ ಐ ಸುದ್ದಿಸಂಸ್ಥೆಗೆ ಹೇಳಿದ್ದಾರೆ.

ಈ ಮಧ್ಯೆ ಕೃಷಿ ಕಾನೂನುಗಳ ಜಾರಿಗೆ ಆಗ್ರಹಿಸಿ ನಡೆದ ಪ್ರತಿಭಟನೆ ವೇಳೆ ಸಾವಿಗೀಡಾದ ಹಾಗೂ ಕೋವಿಡ್-19 ಸೋಂಕಿನಿಂದ ಮೃತಪಟ್ಟ ಕುಟುಂಬ ಸದಸ್ಯರಿಗೆ ಪರಿಹಾರ ನೀಡಬೇಕೆಂದು ಪ್ರತಿಪಕ್ಷಗಳು ಸಭೆಯಲ್ಲಿ ಸರ್ಕಾರವನ್ನು ಒತ್ತಾಯಿಸಿದವು.

ಅಧಿವೇಶನದಲ್ಲಿ ಮೂರು ಕೃಷಿ ಕಾನೂನುಗಳ ರದ್ಧತಿಗೆ ಸರ್ಕಾರ ಆದ್ಯತೆ ನೀಡಲಿದೆ ಎಂದು ಸಭೆ ಬಳಿಕ ಕೇಂದ್ರ ವಾರ್ತಾ ಸಚಿವ ಅನುರಾಗ್ ಠಾಕೂರ್ ತಿಳಿಸಿದರು. ನಾಳೆಯಿಂದ ಆರಂಭವಾಗಲಿರುವ ಸಂಸತ್ತಿನ ಚಳಿಗಾಲದ ಅಧಿವೇಶನ, ಡಿಸೆಂಬರ್ 23 ರಂದು ಕೊನೆಗೊಳ್ಳಲಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು ನಿಲ್ಲಿಸಲು ರಷ್ಯಾ-ಉಕ್ರೇನ್ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ

ಕೊನೆಯ ಓವರ್‌ನಲ್ಲಿ ಭಾರತಕ್ಕೆ ವಿಂಡೀಸ್ ವಿರುದ್ಧ ರೋಚಕ ಜಯ: T20 ಸರಣಿಯಲ್ಲಿ 2-1 ಮುನ್ನಡೆ!

'We're Sorry': ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಬಗ್ಗೆ ತಿಳಿಸಿದ್ದ ಮಹಿಳಾ ಪೊಲೀಸ್; ಹೇಗಿತ್ತು CJP ನಾಯಕನ ಪ್ರತಿಕ್ರಿಯೆ...: ವಿಡಿಯೋ ವೈರಲ್!

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್