ದೇಶ

ಮಹಾ ವಿಕಾಸ್ ಅಘಾಡಿ ಸರ್ಕಾರಕ್ಕೆ 2 ವರ್ಷ: ಸಿಎಂ ಉದ್ಧವ್ ಠಾಕ್ರೆ ಹೇಳಿದ್ದೇನು? 

Sumana Upadhyaya

ಮುಂಬೈ: ತಮ್ಮ ಸರ್ಕಾರದ ಈ ಎರಡು ವರ್ಷಗಳ ಅವಧಿಯಲ್ಲಿ ಬಹುತೇಕ ಸಮಯವನ್ನು ಕೋವಿಡ್-19 ನಿರ್ವಹಣೆಯಲ್ಲಿ ತೊಡಗಿದ್ದು ಮಹಾ ವಿಕಾಸ ಅಘಾಡಿ(MVA) ಸಮಸ್ಯೆ ಮತ್ತು ಬಿಕ್ಕಟ್ಟನ್ನು ಅವಕಾಶವನ್ನಾಗಿ ಪರಿವರ್ತಿಸುವಲ್ಲಿ ಯಶಸ್ವಿಯಾಗಿದೆ ಎಂದು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ.

ಮಹಾರಾಷ್ಟ್ರ ಸರ್ಕಾರ ಎರಡು ವರ್ಷಗಳ ಅವಧಿಯನ್ನು ಪೂರೈಸಿದ ಸಂದರ್ಭದಲ್ಲಿ ಹೇಳಿಕೆ ಬಿಡುಗಡೆ ಮಾಡಿರುವ 61 ವರ್ಷದ ಉದ್ಧವ್ ಠಾಕ್ರೆ, ರಾಜ್ಯದ ಜನತೆಗೆ ಅಭಿನಂದನೆ ಸಲ್ಲಿಸಿದ್ದು ಇದು ಜನರ ಸರ್ಕಾರ ಎಂದು ಹೇಳಿದ್ದಾರೆ.

ಉದ್ಧವ್ ಠಾಕ್ರೆ ಅವರು ಸದ್ಯ ಖಾಸಗಿ ಆಸ್ಪತ್ರೆಯಲ್ಲಿ ಬೆನ್ನುಹುರಿ ಸರ್ಜರಿಯಿಂದ ಗುಣಮುಖ ಹೊಂದುತ್ತಿದ್ದಾರೆ. ಮನುಷ್ಯ ನಿರ್ಮಿತ ಮತ್ತು ನೈಸರ್ಗಿಕ ವಿಕೋಪ ಸಂದರ್ಭದಲ್ಲಿ ನಾವು ದೃತಿಗೆಟ್ಟಿಲ್ಲ, ನಮ್ಮ ಗಮನ ಮತ್ತು ಉದ್ದೇಶ ಸಂಪೂರ್ಣವಾಗಿ ಸಾಮಾನ್ಯ ಜನರ ಅಭಿವೃದ್ಧಿಯಾಗಿತ್ತು. ಕಳೆದ ಎರಡು ವರ್ಷಗಳಲ್ಲಿ ಬಹುತೇಕ ಸಮಯವನ್ನು ಕೋವಿಡ್-19 ನಿರ್ವಹಣೆಯಲ್ಲಿ ಕಳೆದಿದ್ದೇವೆ ಎಂದು ಹರ್ಷ  ವ್ಯಕ್ತಪಡಿಸಿದ್ದಾರೆ.

2019ರಲ್ಲಿ ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ನಂತರ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಬಿಜೆಪಿಯಿಂದ ಮೈತ್ರಿ ಮುರಿದುಕೊಂಡು ಹೊರಬಂದಿತ್ತು. ಮುಖ್ಯಮಂತ್ರಿ ಸ್ಥಾನ ಹಂಚಿಕೆ ವಿಚಾರದಲ್ಲಿ ಎರಡೂ ಪಕ್ಷಗಳ ಮಧ್ಯೆ ಭಿನ್ನಾಭಿಪ್ರಾಯ ಉಂಟಾಗಿತ್ತು. 

ನಂತರ ಬೆಳೆದ ರಾಜಕೀಯ ವಿದ್ಯಮಾನಗಳಲ್ಲಿ ಎನ್ ಸಿಪಿ ಮತ್ತು ಕಾಂಗ್ರೆಸ್ ಜೊತೆ ಸೇರಿ ಶಿವಸೇನೆ ಮಹಾ ವಿಕಾಸ ಅಘಾಡಿ ಸರ್ಕಾರವನ್ನು ರಚಿಸಿತ್ತು. 

ಕೋವಿಡ್ ಸಾಂಕ್ರಾಮಿಕ ನಿಗ್ರಹ ಸಮಯದಲ್ಲಿ ತಮ್ಮ ನೇತೃತ್ವದ ಸರ್ಕಾರ ಸಮರ್ಥವಾಗಿ ಕೆಲಸ ಮಾಡಿದೆ. ಕೈಗಾರಿಕಾ ಹೂಡಿಕೆ, ಕೃಷಿ ಮೂಲಸೌಕರ್ಯ, ವಸತಿ, ಉದ್ಯೋಗ, ನೀರು ಸರಬರಾಜು, ಸೌರಶಕ್ತಿ, ಪರಿಸರ, ಪ್ರವಾಸೋದ್ಯಮ, ಅರಣ್ಯವನ್ನು ಸುಧಾರಿಸುವಲ್ಲಿ ಶ್ರಮಿಸಿದ್ದೇವೆ. ಸರ್ಕಾರದ ಪ್ರಯತ್ನಗಳು ಸಾಮಾನ್ಯ ಜನರ ಕಲ್ಯಾಣವನ್ನು ಹೇಗೆ ಖಚಿತಪಡಿಸುತ್ತದೆ ಎಂಬುದರ ಮೇಲೆ ಕೇಂದ್ರೀಕರಿಸಿದೆ ಎಂದರು.

ಮಹಾತ್ಮ ಜ್ಯೋತಿರಾವ್ ಫುಲೆ ಕೃಷಿ ಸಾಲ ಮನ್ನಾ ಯೋಜನೆಯಡಿ 20 ಸಾವಿರ ಕೋಟಿ ರೂಪಾಯಿವರೆಗಿನ ರೈತರ ಸಾಲವನ್ನು ಮನ್ನಾ ಮಾಡಲಾಗಿದೆ. ರಾಜ್ಯ ಸರ್ಕಾರವು ಆಸ್ಪತ್ರೆಗಳಿಗೆ 2 ಸಾವಿರದ 600 ಕೋಟಿ ರೂಪಾಯಿಗಳನ್ನು ಒದಗಿಸಿದೆ. ಮಹಾತ್ಮ ಜ್ಯೋತಿರಾವ್ ಫುಲೆ ಜನ ಆರೋಗ್ಯ ಯೋಜನೆಯಡಿ 14.4 ಲಕ್ಷ ಜನರಿಗೆ ಉಚಿತವಾಗಿ ಚಿಕಿತ್ಸೆ ನೀಡಲಾಗಿದೆ ಎಂದು ಹೇಳಿಕೆಯಲ್ಲಿ ಸಿಎಂ ಉದ್ಧವ್ ಠಾಕ್ರೆ ವಿವರಿಸಿದ್ದಾರೆ.

SCROLL FOR NEXT