ಸಾಂದರ್ಭಿಕ ಚಿತ್ರ 
ದೇಶ

ಓಮಿಕ್ರಾನ್ 30ಕ್ಕೂ ಹೆಚ್ಚು ಬಾರಿ ರೂಪಾಂತರ ಹೊಂದಿದೆ, ಲಸಿಕೆಗಳನ್ನು ಬೈಪಾಸ್ ಮಾಡಬಹುದು: ಏಮ್ಸ್ ಮುಖ್ಯಸ್ಥ

ಕೊರೋನಾ ವೈರಸ್‌ನ ಹೊಸ ತಳಿ ಓಮಿಕ್ರಾನ್ ರೂಪಾಂತರಿ 30ಕ್ಕೂ ಹೆಚ್ಚು ರೂಪಾಂತರ ಹೊಂದಿರುವ ಬಗ್ಗೆ ವರದಿಯಾಗಿದೆ, ಇದರ ವಿರುದ್ಧ ಲಸಿಕೆಗಳ ಪರಿಣಾಮಕಾರಿತ್ವವನ್ನು ವಿಮರ್ಶಾತ್ಮಕವಾಗಿ ಮೌಲ್ಯಮಾಪನ ಮಾಡಬೇಕಾಗಿದೆ...

ನವದೆಹಲಿ: ಕೊರೋನಾ ವೈರಸ್‌ನ ಹೊಸ ತಳಿ ಓಮಿಕ್ರಾನ್ ರೂಪಾಂತರಿ 30ಕ್ಕೂ ಹೆಚ್ಚು ರೂಪಾಂತರ ಹೊಂದಿರುವ ಬಗ್ಗೆ ವರದಿಯಾಗಿದೆ, ಇದರ ವಿರುದ್ಧ ಲಸಿಕೆಗಳ ಪರಿಣಾಮಕಾರಿತ್ವವನ್ನು ವಿಮರ್ಶಾತ್ಮಕವಾಗಿ ಮೌಲ್ಯಮಾಪನ ಮಾಡಬೇಕಾಗಿದೆ ಎಂದು ಏಮ್ಸ್ ನಿರ್ದೇಶಕ ಡಾ. ರಣದೀಪ್ ಗುಲೇರಿಯಾ ಅವರು ಹೇಳಿದ್ದಾರೆ.

ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೋನಾದ ಈ ಹೊಸ ತಳಿ ಈಗಾಗಲೇ ಹಾಕಿಸಿಕೊಂಡ ಲಸಿಕೆಯ ಪರಿಣಾಮವನ್ನು ಸಹ ತೊಡೆದುಹಾಕಬಹುದು. ಆದರೆ ಈ ಬಗ್ಗೆ ಸಂಶೋಧನೆ ನಡೆಯಬೇಕಿದೆ ಎಂದು ಡಾ. ರಣದೀಪ್ ಗುಲೇರಿಯಾ ಅವರು ಹೇಳಿದ್ದಾರೆ.

ಓಮಿಕ್ರಾನ್ ರೂಪಾಂತರಿ ತಳಿ ಲಸಿಕೆ ಹಾಕಿದ ಜನರಿಗೆ ಸಹ ಸೋಂಕು ತರುತ್ತದೆ. ಈ ಕುರಿತು ಸಂಶೋಧನೆ ನಡೆಸುತ್ತಿದ್ದೇವೆ. ಸದ್ಯಕ್ಕೆ ಭಾರತದಲ್ಲಿ(India) ಈ ವೇರಿಯಂಟ್ ಸೋಂಕಿತರು ಯಾರೂ ಪತ್ತೆಯಾಗಿಲ್ಲ ಎಂಬುದು ಸಮಾಧಾನದ ಸಂಗತಿ ಎಂದಿದ್ದಾರೆ.

ಅಂತರಾಷ್ಟ್ರೀಯವಾಗಿ ಪ್ರಯಾಣಿಸುವ ಜನರಲ್ಲಿ ಹಠಾತ್ ಹೆಚ್ಚಳವಾಗಿದೆ. ಹೀಗಾಗಿ ವಿದೇಶದಿಂದ ಬರುವ ಪ್ರಯಾಣಿಕರ ಮೇಲೆ ಹೆಚ್ಚಿನ ನಿಗಾ ಇಡಬೇಕಾದ ಅಗತ್ಯವಿದೆ ಎಂದು ಡಾ ಗುಲೇರಿಯಾ ಅವರು ತಿಳಿಸಿದ್ದಾರೆ.

ಭವಿಷ್ಯದ ಕ್ರಮವು ಅದರ ಹರಡುವಿಕೆ, ತೀವ್ರತೆ ಮತ್ತು ರೋಗನಿರೋಧಕ ಶಕ್ತಿಯನ್ನು ತಪ್ಪಿಸುವ ಸಾಮರ್ಥ್ಯದ ಮೇಲೆ ಅವಲಂಬಿತವಾಗಿರುತ್ತದೆ ಎಂದು ಏಮ್ಸ್ ನಿರ್ದೇಶಕರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

ಬೆಂಗಳೂರು: ಮಾಜಿ ಪ್ರೇಯಸಿ ಕರೆದಳೆಂದು ಮನೆಗೆ ಹೋದ ಪ್ರಿಯಕರ ದುರಂತ ಸಾವು: ಅಷ್ಟಕ್ಕೂ ಆಗಿದ್ದೇನು?

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ: ಕಣ್ಣೀರಿಟ್ಟ CM ಕಚೇರಿ ಸಿಬ್ಬಂದಿ; ಬೆಂಬಲಿಗರಿಂದ ಪ್ರತಿಭಟನೆ

SCROLL FOR NEXT