ಸಂಗ್ರಹ ಚಿತ್ರ 
ದೇಶ

ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ 135 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ: ಕೇಂದ್ರ ಸರ್ಕಾರ

ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 135 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಭಾನುವಾರ ಹೇಳಿದೆ.

ನವದೆಹಲಿ: ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 135 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಭಾನುವಾರ ಹೇಳಿದೆ.

ಈವರೆಗೆ ಕೇಂದ್ರವು ರಾಜ್ಯಗಳಿಗೆ 1,35,94,88,700ಕೋಟಿ ಪ್ರಮಾಣದಷ್ಟು ಲಸಿಕೆ ಪೂರೈಸಿದ್ದು, ಪ್ರಸ್ತುತ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಬಳಕೆಯಾಗದ ಒಟ್ಟು 22,83,05,346 ಲಸಿಕೆಗಳಿವೆ ಎಂದು ಹೇಳಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 1,21,94,71,134 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮೈಸೂರು ದಸರಾಕ್ಕೆ ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳಿಂದ ಅಧಿಕೃತ ಚಾಲನೆ

4 ಜನರಿಗೆ ಒಂದೇ ಟಿಕೆಟ್! ಸಾರಿಗೆ ಇಲಾಖೆಯಲ್ಲಿ ಡೀಸೆಲ್ ಬೆನ್ನಲ್ಲೇ ಟಿಕೆಟ್ ರೋಲ್ ಕೊರತೆ

ದೆಹಲಿಯಲ್ಲಿ ಹೈಡ್ರಾಮಾ: ವಿಮಾನ ನಿಲ್ದಾಣದಲ್ಲಿ ಬಂಧನಕ್ಕೊಳಗಾಗಿದ್ದ CJP ನಾಯಕರಾದ ದೀಪ್ಕೆ, ರಾಂಕಾ, ದಾಸ್ ಕೊನೆಗೂ ಬಿಡುಗಡೆ, 1 ವರ್ಷ ಶಾಂತಿ ಕಾಪಾಡುವಂತೆ ಷರತ್ತು..!

Riyadh ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ: 12 ಮಂದಿ ಸಾವು, 300ಕ್ಕೂ ಹೆಚ್ಚು ಜನರಿಗೆ ಗಾಯ

Operation Sindoor ನಮ್ಮ ಆತ್ಮರಕ್ಷಣೆಯ ಕ್ರಮ, ಪರಮಾಣು ಬೆದರಿಕೆಗೆ ಎಂದಿಗೂ ಮಣಿಯಲ್ಲ: 3 'ಲಕ್ಷ್ಮಣ ರೇಖೆ' ಎಳೆದು ಪಾಕ್'ಗೆ ಭಾರತ ಖಡಕ್ ಎಚ್ಚರಿಕೆ..!