ಸಂಗ್ರಹ ಚಿತ್ರ 
ದೇಶ

ಸಂಸತ್ತು ಚಳಿಗಾಲ ಅಧಿವೇಶನದಲ್ಲಿ ಅಶಿಸ್ತಿನ ವರ್ತನೆ: ರಾಜ್ಯಸಭೆಯ 12 ವಿಪಕ್ಷ ಸಂಸದರು ಅಮಾನತು

ಇಂದಿನಿಂದ ಆರಂಭಗೊಂಡ ಚಳಿಗಾಲದ ಅಧಿವೇಶನದಲ್ಲಿ ವಿರೋಧ ಪಕ್ಷಗಳು ತೀವ್ರ ಗದ್ದಲ ಸೃಷ್ಟಿಸಿದ್ದು, ಅಧಿವೇಶನದಲ್ಲಿ ಅಶಿಸ್ತಿನ ವರ್ತನೆ ತೋರಿದ ಹಿನ್ನೆಲೆಯಲ್ಲಿ ರಾಜ್ಯಸಭೆಯ 12 ಮಂದಿ ವಿರೋಧ ಪಕ್ಷದ ಸಂಸದರನ್ನು ಅಮಾನತು ಮಾಡಲಾಗಿದೆ.

ನವದೆಹಲಿ: ಇಂದಿನಿಂದ ಆರಂಭಗೊಂಡ ಚಳಿಗಾಲದ ಅಧಿವೇಶನದಲ್ಲಿ ವಿರೋಧ ಪಕ್ಷಗಳು ತೀವ್ರ ಗದ್ದಲ ಸೃಷ್ಟಿಸಿದ್ದು, ಅಧಿವೇಶನದಲ್ಲಿ ಅಶಿಸ್ತಿನ ವರ್ತನೆ ತೋರಿದ ಹಿನ್ನೆಲೆಯಲ್ಲಿ ರಾಜ್ಯಸಭೆಯ 12 ಮಂದಿ ವಿರೋಧ ಪಕ್ಷದ ಸಂಸದರನ್ನು ಅಮಾನತು ಮಾಡಲಾಗಿದೆ.

ಅಮಾನತುಗೊಂಡಿರುವ 12 ಮಂದಿ ಸಂಸದರ ಪೈಕಿ ಆರು ಮಂದಿ ಕಾಂಗ್ರೆಸ್‌, ಟಿಎಂಸಿಯ ತಲಾ ಇಬ್ಬರು ಮತ್ತು ಶಿವಸೇನೆ ಹಾಗೂ ಸಿಪಿಎಂ ಮತ್ತು ಸಿಪಿಐನಿಂದ ತಲಾ ಒಬ್ಬರು ಸೇರಿದ್ದಾರೆಂದು ತಿಳಿದುಬಂದಿದೆ.

ರಾಜ್ಯಸಭೆಯ ಉಪ ಸಭಾಪತಿ ಹರಿವಂಶ ನಾರಾಯಣ ಸಿಂಗ್ ಅವರು ಸದಸ್ಯರ ಅಮಾನತು ಘೋಷಿಸಿ ಸದನವನ್ನು ಮಂಗಳವಾರಕ್ಕೆ ಮುಂದೂಡಿದರು.

ಕಾಂಗ್ರೆಸ್‌ನ ಫೂಲೋ ದೇವಿ ನೇತಮ್, ಛಾಯಾ ವರ್ಮಾ, ರಿಪುನ್ ಬೋರಾ, ರಾಜಮಣಿ ಪಟೇಲ್, ಸೈಯದ್ ನಾಸಿರ್ ಹುಸೇನ್ ಮತ್ತು ಅಖಿಲೇಶ್ ಪ್ರಸಾದ್ ಸಿಂಗ್ ಅಮಾನತುಗೊಂಡಿದ್ದಾರೆ.

ಶಿವಸೇನೆಯ ಪ್ರಿಯಾಂಕಾ ಚತುರ್ವೇದಿ ಮತ್ತು ಅನಿಲ್ ದೇಸಾಯಿ, ಟಿಎಂಸಿಯ ಡೋಲಾ ಸೇನ್ ಮತ್ತು ಶಾಂತಾ ಛೆಟ್ರಿ, ಸಿಪಿಎಂನಿಂದ ಎಲಮರಮ್ ಕರೀಂ ಮತ್ತು ಸಿಪಿಐನಿಂದ ಬಿನೋಯ್ ವಿಶ್ವಂ ಅವರು ಚಳಿಗಾಲದ ಅಧಿವೇಶನದ ಉಳಿದ ಅವಧಿಗೆ ರಾಜ್ಯಸಭೆಯಿಂದ ಅಮಾನತುಗೊಂಡ ವಿರೋಧ ಪಕ್ಷದ ಸಂಸದರಾಗಿದ್ದಾರೆ.

ಕಳೆದ ಆಗಸ್ಟ್​ ತಿಂಗಳಲ್ಲಿ ನಡೆದ ಸಂಸತ್​​ ಅಧಿವೇಶನದ ವೇಳೆ ರಾಜ್ಯಸಭೆಯಲ್ಲಿ ನಿಯಮ ದುರುಪಯೋಗ ಹಾಗೂ ಅಶಿಸ್ತಿನಿಂದ ನಡೆದುಕೊಂಡಿರುವ ಕಾರಣ ಸದಸ್ಯರನ್ನು ಅಮಾನತುಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.

ಪೆಗಾಸಸ್​, ಕೃಷಿ ಕಾಯ್ದೆ ಮಸೂದೆ ಸೇರಿದಂತೆ ವಿವಿಧ ವಿಷಯಗಳನ್ನಿಟ್ಟುಕೊಂಡು ನಿರಂತರವಾಗಿ ಸದನಕ್ಕೆ ಅಡ್ಡಿಪಡಿಸಲಾಗುತ್ತಿತ್ತು. ಈ ವಿಷಯಕ್ಕೆ ಸಂಬಂಧಿಸಿದಂತೆ ಇಂದು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತೀಯ ಮೂಲದ ನ್ಯಾಯಶಾಸ್ತ್ರಜ್ಞೆಗೆ ಈ ಬಾರಿಯ ನೊಬೆಲ್ ಶಾಂತಿ ಪ್ರಶಸ್ತಿ; ನವನೀತ್ ನವಿ ಪಿಳ್ಳೈಗೆ ಒಲಿದ ನೊಬೆಲ್ ಶಾಂತಿ ಗರಿ

CJP ಪ್ರತಿಭಟನೆ ಹಿನ್ನೆಲೆಯಲ್ಲಿ ರೈಲುಗಳ ರದ್ದತಿ: ಯುವಕರಿಗೆ ಹೆದರುವುದಾದರೆ ಇಡೀ ದೇಶವನ್ನೇ ಬಂದ್ ಮಾಡಿ; ಕೇಂದ್ರದ ವಿರುದ್ಧ ಅಭಿಜಿತ್ ದೀಪ್ಕೆ ಆಕ್ರೋಶ

Cockroach Janta Partyಗೆ ಬಿಗ್ ಶಾಕ್: ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸರು, 57 ಮೆಟ್ರೋ ನಿಲ್ದಾಣಗಳು ಬಂದ್..!

ಮತದಾರರ ಪಟ್ಟಿ ಪರಿಷ್ಕರಣೆ: ಕರ್ನಾಟಕದಲ್ಲಿ 1.10 ಲಕ್ಷ ಫಾರಂ-7 ಅರ್ಜಿ ಸ್ವೀಕೃತಿ, 40.88 ಲಕ್ಷ ನೋಟಿಸ್ ವಿಚಾರಣೆ ಪೂರ್ಣ: ಅ.27ಕ್ಕೆ ಅಂತಿಮ ಪಟ್ಟಿ ಪ್ರಕಟ

ಕನ್ನಡಿಗರ ಆತ್ಮೀಯತೆ, ವಾತ್ಸಲ್ಯ, ದಯೆ ನಿಜಕ್ಕೂ ನನ್ನ....: ಬೆಂಗಳೂರು ಭೇಟಿ ಬಗ್ಗೆ ಅಭಿಜೀತ್ ದೀಪ್ಕೆ ಭಾವುಕ ಪೋಸ್ಟ್!