ಸಾಂದರ್ಭಿಕ ಚಿತ್ರ 
ದೇಶ

ವಾಯು ಮಾಲಿನ್ಯ: ಡಿ.​​​ 7ರವರೆಗೆ ಕಟ್ಟಡ ನಿರ್ಮಾಣ ಕಾರ್ಯ, ಟ್ರಕ್​​ಗಳ ಓಡಾಟಕ್ಕೆ ನಿರ್ಬಂಧ ವಿಧಿಸಿದ ದೆಹಲಿ ಸರ್ಕಾರ

ರಾಷ್ಟ್ರರಾಜಧಾನಿಯಲ್ಲಿ ವಾಯುಗುಣಮಟ್ಟ ಹದಗೆಟ್ಟಿರುವುದರಿಂದ ಇದನ್ನು ತಡೆಯುವ ಸಲುವಾಗಿ, ಡಿಸೆಂಬರ್​​​ 7ರವರೆಗೆ ಕಟ್ಟಡ ನಿರ್ಮಾಣ ಕಾರ್ಯ ಹಾಗೂ ಟ್ರಕ್​​ಗಳ ರಾಜಧಾನಿ ಪ್ರವೇಶಕ್ಕೆ ದೆಹಲಿ ಸರ್ಕಾರ ನಿರ್ಬಂಧ ವಿಧಿಸಿದೆ.

ನವದೆಹಲಿ: ರಾಷ್ಟ್ರರಾಜಧಾನಿಯಲ್ಲಿ ವಾಯುಗುಣಮಟ್ಟ ಹದಗೆಟ್ಟಿರುವುದರಿಂದ ಇದನ್ನು ತಡೆಯುವ ಸಲುವಾಗಿ, ಡಿಸೆಂಬರ್​​​ 7ರವರೆಗೆ ಕಟ್ಟಡ ನಿರ್ಮಾಣ ಕಾರ್ಯ ಹಾಗೂ ಟ್ರಕ್​​ಗಳ ರಾಜಧಾನಿ ಪ್ರವೇಶಕ್ಕೆ ದೆಹಲಿ ಸರ್ಕಾರ ನಿರ್ಬಂಧ ವಿಧಿಸಿದೆ.

ಅಗತ್ಯ ಸರಕುಗಳನ್ನು ತಲುಪಿಸುವ ಟ್ರಕ್‌ಗಳು, ಸಿಎನ್‌ಜಿ, ಇ-ಟ್ರಕ್‌ಗಳಿಗೆ ಈ ನೋ-ಎಂಟ್ರಿ ನಿರ್ದೇಶನದಿಂದ ವಿನಾಯಿತಿ ನೀಡಲಾಗಿದೆ.

ಮುಂದಿನ ಆದೇಶದವರೆಗೆ ದೆಹಲಿಯಲ್ಲಿ ಕಟ್ಟಡ ನಿರ್ಮಾಣ ಮತ್ತು ನೆಲಸಮ ಚಟುವಟಿಕೆಗಳ ಮೇಲಿನ ನಿಷೇಧ ಮುಂದುವರಿಯುತ್ತದೆ ಎಂದು ದೆಹಲಿ ಪರಿಸರ ಸಚಿವ ಗೋಪಾಲ್ ರೈ ಅವರು ಸೋಮವಾರ ಹೇಳಿದ್ದಾರೆ. 

ನಗರದಲ್ಲಿ ಗಾಳಿಯ ಗುಣಮಟ್ಟವು "ಅತ್ಯಂತ ಕಳಪೆ" ಯಾಗಿರುವುದರಿಂದ ಸಂಬಂಧಿತ ಇಲಾಖೆಗಳ ಅಧಿಕಾರಿಗಳೊಂದಿಗೆ ಪರಾಮರ್ಶೆ ಸಭೆ ನಡೆಸಿದ ನಂತರ ಈ ಆದೇಶ ನೀಡಲಾಗಿದೆ.

ಕಟ್ಟಡ ನಿರ್ಮಾಣ ಕಾರ್ಯ ಸ್ಥಗಿತಗೊಂಡಿರುವ ಕಾರಣ ಕಾರ್ಮಿಕರು ತೀವ್ರ ತೊಂದರೆಗೊಳಗಾಗಿದ್ದು, ಅವರಿಗೆ ಜೀವನ ನಡೆಸಲು ದೆಹಲಿ ಸರ್ಕಾರ ತಲಾ 5 ಸಾವಿರ ರೂ. ಪರಿಹಾರ ನೀಡುವುದಾಗಿ ಈಗಾಗಲೇ ಘೋಷಣೆ ಮಾಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಂದಿಗ್ರಾಮದಲ್ಲಿ 1.22 ಲಕ್ಷ ಮತ, ಅಸ್ಸಾಂನಲ್ಲಿ BJPಗೆ ಗೆಲುವು; 2 ಕ್ಷೇತ್ರ ಗೆದ್ದ TVK: ಕಾಂಗ್ರೆಸ್, ದೀದಿಗೆ ಮುಖಭಂಗ!

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ

'ಅಸಹ್ಯ, ಅತಿರೇಕ'.. 'ನಿಮ್ಮನ್ನು ನೋಡಲು ಇಚ್ಛಿಸುವುದಿಲ್ಲ, BiggBoss ಶೋ ಬಿಟ್ಟು ಹೊರಬನ್ನಿ'; Kichcha Sudeepಗೆ ಪತ್ರ

'ಆಶ್ರಮಕ್ಕೆ ಬರಲು ಹಣ ಪಡೆದ ಕೊಹ್ಲಿ' ಆರೋಪ: ಉಲ್ಟಾ ಹೊಡೆದ Falahari Maharaj, ಕ್ಷಮೆಯಾಚನೆ! video

26 ಸೆಕೆಂಡ್ ನಲ್ಲೇ ಗ್ರೇಟ್ ಎಸ್ಕೇಪ್; ಮೃಗಾಲಯ ವೀಕ್ಷಣೆಗೆ ಬಂದ ಜೋಡಿ, ಗಂಡ ಬೈಕ್ ಪಾರ್ಕ್ ಮಾಡೋ ಗ್ಯಾಪಲ್ಲಿ 'ಲವರ್ ಜೊತೆ ಪತ್ನಿ ಪರಾರಿ'! Video ವೈರಲ್!