ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಓಮಿಕ್ರಾನ್​​ ರೂಪಾಂತರಿ ಹೆಚ್ಚಳ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿ ಬಿಡುಗಡೆ

ವಿಶ್ವದಾದ್ಯಂತ ಕೊರೊನಾ ವೈರಸ್​ನ ಹೊಸ​​ ರೂಪಾಂತರಿ ಓಮಿಕ್ರಾನ್ ಹೆಚ್ಚುತ್ತಿರುವ ಹಿನ್ನೆಲೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಭಾರತಕ್ಕೆ ಬರುವ ವಿದೇಶಿ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಈ ಮಾರ್ಗಸೂಚಿಗಳು ಡಿಸೆಂಬರ್ 1ರಿಂದ ಜಾರಿಗೆ ಬರುತ್ತವೆ.

ಸಂಗ್ರಹ ಚಿತ್ರ
Vishwanath S
Updated On : 29 Nov 2021, 3:42 pm

ನವದೆಹಲಿ: ವಿಶ್ವದಾದ್ಯಂತ ಕೊರೊನಾ ವೈರಸ್​ನ ಹೊಸ​​ ರೂಪಾಂತರಿ ಓಮಿಕ್ರಾನ್ ಹೆಚ್ಚುತ್ತಿರುವ ಹಿನ್ನೆಲೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಭಾರತಕ್ಕೆ ಬರುವ ವಿದೇಶಿ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಈ ಮಾರ್ಗಸೂಚಿಗಳು ಡಿಸೆಂಬರ್ 1ರಿಂದ ಜಾರಿಗೆ ಬರುತ್ತವೆ.

ಮಾರ್ಗಸೂಚಿಯ ಪ್ರಕಾರ, ಪ್ರಯಾಣಿಕರು ಟಿಕೆಟ್​​ ಬುಕ್​​ ಮಾಡುವ ಮೊದಲು ಏರ್ ಸುವಿಧಾ ಪೋರ್ಟಲ್‌ನಲ್ಲಿ ಫಾರ್ಮ್ ಅನ್ನ ಸಲ್ಲಿಸಬೇಕು. ಅಲ್ಲದೇ ಕಳೆದ 14 ದಿನಗಳ ಪ್ರಯಾಣದ ವಿವರವನ್ನು ಸಲ್ಲಿಸಬೇಕು.

ಪ್ರಯಾಣ ಮಾಡುವ ಮೊದಲು ಏರ್ ಸುವಿಧಾ ಪೋರ್ಟಲ್‌ನಲ್ಲಿ RT-PCR ಪರೀಕ್ಷಾ ವರದಿಯನ್ನು ಅಪ್‌ಲೋಡ್ ಮಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ಪ್ರಯಾಣವನ್ನು ಕೈಗೊಳ್ಳುವ ಮೊದಲು 72 ಗಂಟೆಗಳ ಒಳಗೆ ಪರೀಕ್ಷೆಯನ್ನು ಮಾಡಿಸಬೇಕು.

Advertisement

Advertisement

ಆರೋಗ್ಯ ಸಚಿವಾಲಯದ ಮಾರ್ಗಸೂಚಿಗಳ ಪ್ರಕಾರ, 'ಅಪಾಯದಲ್ಲಿರುವ ದೇಶಗಳ' ಪ್ರಯಾಣಿಕರು ಭಾರತಕ್ಕೆ ಬಂದ ನಂತರ ಕೋವಿಡ್​​-19 ಪರೀಕ್ಷೆಯನ್ನು ಮಾಡಿಸಬೇಕು. ವಿಮಾನ ನಿಲ್ದಾಣದಲ್ಲಿ ಫಲಿತಾಂಶಕ್ಕಾಗಿ ಕಾಯಬೇಕಾಗುತ್ತದೆ.

ಪರೀಕ್ಷೆಯಲ್ಲಿ ನೆಗೆಟಿವ್ ಬಂದರೆ ಏಳು ದಿನಗಳ ಕಾಲ ಹೋಂ ಕ್ವಾರಂಟೈನ್‌ನಲ್ಲಿ ಇರಬೇಕಾಗುತ್ತದೆ. ಎಂಟು-ದಿನದ ನಂತರ ಮತ್ತೆ ಪರೀಕ್ಷೆಯನ್ನು ಮಾಡಿಸಿಕೊಳ್ಳಬೇಕು. ಅಲ್ಲಿ ನೆಗೆಟಿವ್​​ ಬಂದರೂ ಮುಂದಿನ ಏಳು ದಿನಗಳವರೆಗೆ ಅವರ ಮೇಲೆ ನಿಗಾ ಇರಿಸಿಕೊಳ್ಳಬೇಕು.

ಸಚಿವಾಲಯದ ಪ್ರಕಾರ, ಅಪಾಯದಲ್ಲಿರುವ ದೇಶಗಳೆಂದರೇ ಯುನೈಟೆಡ್ ಕಿಂಗ್‌ಡಮ್, ದಕ್ಷಿಣ ಆಫ್ರಿಕಾ, ಬ್ರೆಜಿಲ್, ಬಾಂಗ್ಲಾದೇಶ, ಬೋಟ್ಸ್‌ವಾನಾ, ಚೀನಾ, ಮಾರಿಷಸ್, ನ್ಯೂಜಿಲೆಂಡ್, ಜಿಂಬಾಬ್ವೆ, ಸಿಂಗಾಪುರ, ಹಾಂಗ್ ಕಾಂಗ್, ಇಸ್ರೇಲ್ ಸೇರಿದಂತೆ ಯುರೋಪ್‌ನ ದೇಶಗಳು ಸೇರಿವೆ.

ಹೊಸ ಕೊರೊನಾ ರೂಪಾಂತರವು ದಕ್ಷಿಣ ಆಫ್ರಿಕಾದಲ್ಲಿ ಮೊದಲು ಪತ್ತೆಯಾಗಿದೆ. ವಿಶ್ವಸಂಸ್ಥೆ ಇದಕ್ಕೆ ಒಮಿಕ್ರಾನ್​​ ಎಂದು ಹೆಸರಿಟ್ಟಿದೆ. ಇದು ಕೋವಿಡ್​ನಿಂದ ಗುಣಮುಖರಾದವರಿಗೂ ಮತ್ತೆ ಅಂಟುವ ಅಪಾಯವನ್ನು ಸೂಚಿಸುತ್ತವೆ. ಹೆಚ್ಚುತ್ತಿರುವ ಹಿನ್ನೆಲೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಭಾರತಕ್ಕೆ ಬರುವ ವಿದೇಶಿ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಈ ಮಾರ್ಗಸೂಚಿಗಳು ಡಿಸೆಂಬರ್ 1 ರಿಂದ ಜಾರಿಗೆ ಬರುತ್ತವೆ.

ಮಾರ್ಗಸೂಚಿಯ ಪ್ರಕಾರ, ಪ್ರಯಾಣಿಕರು ಟಿಕೆಟ್​​ ಬುಕ್​​ ಮಾಡುವ ಮೊದಲು ಏರ್ ಸುವಿಧಾ ಪೋರ್ಟಲ್‌ನಲ್ಲಿ ಫಾರ್ಮ್ ಅನ್ನ ಸಲ್ಲಿಸಬೇಕು. ಅಲ್ಲದೇ ಕಳೆದ 14 ದಿನಗಳ ಪ್ರಯಾಣದ ವಿವರವನ್ನು ಸಲ್ಲಿಸಬೇಕು.

ಪ್ರಯಾಣ ಮಾಡುವ ಮೊದಲು ಏರ್ ಸುವಿಧಾ ಪೋರ್ಟಲ್‌ನಲ್ಲಿ RT-PCR ಪರೀಕ್ಷಾ ವರದಿಯನ್ನು ಅಪ್‌ಲೋಡ್ ಮಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ಪ್ರಯಾಣವನ್ನು ಕೈಗೊಳ್ಳುವ ಮೊದಲು 72 ಗಂಟೆಗಳ ಒಳಗೆ ಪರೀಕ್ಷೆಯನ್ನು ಮಾಡಿಸಬೇಕು.

ಆರೋಗ್ಯ ಸಚಿವಾಲಯದ ಮಾರ್ಗಸೂಚಿಗಳ ಪ್ರಕಾರ, 'ಅಪಾಯದಲ್ಲಿರುವ ದೇಶಗಳ' ಪ್ರಯಾಣಿಕರು ಭಾರತಕ್ಕೆ ಬಂದ ನಂತರ ಕೋವಿಡ್​​-19 ಪರೀಕ್ಷೆಯನ್ನು ಮಾಡಿಸಬೇಕು. ವಿಮಾನ ನಿಲ್ದಾಣದಲ್ಲಿ ಫಲಿತಾಂಶಕ್ಕಾಗಿ ಕಾಯಬೇಕಾಗುತ್ತದೆ.

ಪರೀಕ್ಷೆಯಲ್ಲಿ ನೆಗೆಟಿವ್ ಬಂದರೆ ಏಳು ದಿನಗಳ ಕಾಲ ಹೋಂ ಕ್ವಾರಂಟೈನ್‌ನಲ್ಲಿ ಇರಬೇಕಾಗುತ್ತದೆ. ಎಂಟು-ದಿನದ ನಂತರ ಮತ್ತೆ ಪರೀಕ್ಷೆಯನ್ನು ಮಾಡಿಸಿಕೊಳ್ಳಬೇಕು. ಅಲ್ಲಿ ನೆಗೆಟಿವ್​​ ಬಂದರೂ ಮುಂದಿನ ಏಳು ದಿನಗಳವರೆಗೆ ಅವರ ಮೇಲೆ ನಿಗಾ ಇರಿಸಿಕೊಳ್ಳಬೇಕು.

ಸಚಿವಾಲಯದ ಪ್ರಕಾರ, ಅಪಾಯದಲ್ಲಿರುವ ದೇಶಗಳೆಂದರೇ ಯುನೈಟೆಡ್ ಕಿಂಗ್‌ಡಮ್, ದಕ್ಷಿಣ ಆಫ್ರಿಕಾ, ಬ್ರೆಜಿಲ್, ಬಾಂಗ್ಲಾದೇಶ, ಬೋಟ್ಸ್‌ವಾನಾ, ಚೀನಾ, ಮಾರಿಷಸ್, ನ್ಯೂಜಿಲೆಂಡ್, ಜಿಂಬಾಬ್ವೆ, ಸಿಂಗಾಪುರ, ಹಾಂಗ್ ಕಾಂಗ್, ಇಸ್ರೇಲ್ ಸೇರಿದಂತೆ ಯುರೋಪ್‌ನ ದೇಶಗಳು ಸೇರಿವೆ.

ಹೊಸ ಕೊರೊನಾ ರೂಪಾಂತರವು ದಕ್ಷಿಣ ಆಫ್ರಿಕಾದಲ್ಲಿ ಮೊದಲು ಪತ್ತೆಯಾಗಿದೆ. ವಿಶ್ವಸಂಸ್ಥೆ ಇದಕ್ಕೆ ಒಮಿಕ್ರಾನ್​​ ಎಂದು ಹೆಸರಿಟ್ಟಿದೆ. ಇದು ಕೋವಿಡ್​ನಿಂದ ಗುಣಮುಖರಾದವರಿಗೂ ಮತ್ತೆ ಅಂಟುವ ಅಪಾಯವನ್ನು ಸೂಚಿಸುತ್ತವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments