ದೇಶ

ಪ್ರತಿಪಕ್ಷ ಸಂಸದರಿಂದ ಗದ್ದಲ: ಪ್ರಾರಂಭವಾದ ಕೆಲವೇ ಕ್ಷಣಗಳಲ್ಲಿ ಲೋಕಸಭೆ ಕಲಾಪ ಮುಂದೂಡಿಕೆ

Srinivas Rao BV

ನವದೆಹಲಿ: ಸಂಸತ್ ನ ಚಳಿಗಾಲದ ಅಧಿವೇಶನಕ್ಕೆ ನ.29 ರಿಂದ ಚಾಲನೆ ದೊರೆತಿದ್ದು, ಲೋಕಸಭೆ ಕಲಾಪ ಪ್ರಾರಂಭವಾದ ಕೆಲವೇ ಕ್ಷಣಗಳಲ್ಲಿ ಮುಂದೂಡಲ್ಪಟ್ಟಿದೆ. 

ಕಲಾಪ ಪ್ರಾರಂಭವಾಗುತ್ತಿದ್ದಂತೆಯೇ ಪ್ರತಿಪಕ್ಷಗಳ ಸಂಸದರು ಘೋಷಣೆಗಳನ್ನು ಕೂಗಿ ಕಲಾಪಕ್ಕೆ ಅಡ್ಡಿ ಪಡಿಸಿದರು. ತೀವ್ರ ಗದ್ದಲದ ಹಿನ್ನೆಲೆಯಲ್ಲಿ ಸಭಾಧ್ಯಕ್ಷರು ಮಧ್ಯಾಹ್ನ 12: 19 ವರೆಗೆ ಕಲಾಪವನ್ನು ಮುಂದೂಡಲಾಗಿದೆ. 

ಸಂಸತ್ ಕಲಾಪಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ, ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರೊಂದಿಗೆ ಸಭೆ ನಡೆಸಿದ್ದರು. ಸರ್ಕಾರ ಎಲ್ಲಾ ರೀತಿಯ ಚರ್ಚೆಗಳಿಗೂ, ಪ್ರತಿಪಕ್ಷಗಳ ಎಲ್ಲಾ ಪ್ರಶ್ನೆಗಳಿಗೂ ಉತ್ತರಿಸುವುದಕ್ಕೆ ಸಿದ್ಧವಿದೆ ಎಂದು ಮೋದಿ ಹೇಳಿದ್ದರು. 

SCROLL FOR NEXT