ದೇಶ

ಪ್ರತಿಪಕ್ಷಗಳ 12 ಸಂಸದರ ಅಮಾನತು: ಯಾಕೆ ಕ್ಷಮೆ ಕೇಳುಬೇಕು. ಇಲ್ಲ, ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದ ರಾಹುಲ್​ ಗಾಂಧಿ

Vishwanath S

ನವದೆಹಲಿ: ರಾಜ್ಯಸಭೆಯಿಂದ ಅಮಾನತುಗೊಂಡಿರುವ ಪ್ರತಿಪಕ್ಷಗಳ 12 ಸಂಸದರು ಯಾಕೆ ಕ್ಷಮೆಯಚಿಸಬೇಕು ಎಂದು ಮಂಗಳವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.

ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಅಶಿಸ್ತಿನ ವರ್ತನೆ ತೋರಿದ ಕಾರಣಕ್ಕಾಗಿ 12 ಪ್ರತಿಪಕ್ಷ ಸಂಸದರನ್ನು ಚಳಿಗಾಲದ ಅಧಿವೇಶನದ ಉಳಿದ ಭಾಗಗಳಿಗೆ ಸೋಮವಾರ ರಾಜ್ಯಸಭೆಯಿಂದ ಅಮಾನತುಗೊಳಿಸಲಾಗಿದೆ.

ಈ ಬಗ್ಗೆ ಮಂಗಳವಾರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರು ಮಾತನಾಡಿ, ರಾಜ್ಯಸಭಾ ಅಧ್ಯಕ್ಷರ ಕ್ಷಮೆಯಾಚಿಸಿದರೆ ಸಂಸದರ ಅಮಾನತು ರದ್ದುಗೊಳಿಸಲು ಸರ್ಕಾರ ಸಿದ್ಧವಾಗಿದೆ ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ರಾಹುಲ್ ಗಾಂಧಿ, 'ಯಾವುದಕ್ಕೆ ಕ್ಷಮೆಯಾಚಿಸಬೇಕು? ಸಂಸತ್ತು ಇರುವುದು ಜನರ ಸಮಸ್ಯೆಗಳನ್ನು ಪ್ರಸ್ತಾಪ ಮಾಡಲು. ಕ್ಷಮೆಯನ್ನು ಯಾವುದೇ ಕಾರಣಕ್ಕೂ ಕೇಳುವುದಿಲ್ಲ' ಎಂದಿದ್ದಾರೆ.

ಆರ್‌ಜೆಡಿ ಸಂಸದ ಮನೋಜ್ ಝಾ ಕೂಡ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ. ಯಾವುದಕ್ಕೆ ಕ್ಷಮೆಯಾಚಿಸುಬೇಕು? ಈ ಕ್ರಮವು ಸಂಸದೀಯ ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿದೆ. ಇದು ಪ್ರಜಾಪ್ರಭುತ್ವ ವಿರೋಧಿ, ಕಾನೂನುಬಾಹಿರ ಮತ್ತು ಅಸಂವಿಧಾನಿಕವಾಗಿದೆ. ನಾವು ಸರ್ಕಾರದೊಂದಿಗೆ ಮಾತನಾಡಲು LoP ಅನ್ನು ವಿನಂತಿಸಿದ್ದೇವೆ. ದಾರಿ ಸಿಗದಿದ್ದರೆ, ನಾವು ಇಡೀ ಅಧಿವೇಶನ ಬಹಿಷ್ಕಾರ ಮಾಡುವ ಬಗ್ಗೆ ಯೋಚಿಸಬೇಕು ಅವರು ಹೇಳಿದರು.

ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೂಡ ಕ್ಷಮೆಯಾಚನೆಯನ್ನು ತಳ್ಳಿಹಾಕಿದರು. ಸರ್ಕಾರವು ಪ್ರತಿಪಕ್ಷಗಳ ಧ್ವನಿಯನ್ನು ಅಡಗಿಸಲು ಪ್ರಯತ್ನಿಸುತ್ತಿದೆ. ಕ್ಷಮೆ ಕೇಳುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದರು.

SCROLL FOR NEXT