ಪಿಣರಾಯಿ ವಿಜಯನ್ (ಸಂಗ್ರಹ ಚಿತ್ರ) 
ದೇಶ

ಮೂಲಸೌಕರ್ಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಕೇರಳದ ಅಗತ್ಯಗಳನ್ನು ಕೇಂದ್ರ ನಿರ್ಲಕ್ಷಿಸುತ್ತಿದೆ: ಸಿಎಂ ಪಿಣರಾಯಿ ವಿಜಯನ್

ಕೇಂದ್ರ ಸರ್ಕಾರವು ತನ್ನ ನಿಲುವನ್ನು ಬದಲಿಸಿದೆ ಮತ್ತು ಸಿಲ್ವರ್‌ಲೈನ್‌ನಂತಹ ಮೂಲಸೌಕರ್ಯ ಅಭಿವೃದ್ಧಿ ಯೋಜನೆಗಳಿಗೆ ಸಂಬಂಧಿಸಿದಂತೆ ರಾಜ್ಯದ ಅಗತ್ಯಗಳನ್ನು ನಿರ್ಲಕ್ಷಿಸುತ್ತಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್...

ತಿರುವನಂತಪುರಂ: ಕೇಂದ್ರ ಸರ್ಕಾರವು ತನ್ನ ನಿಲುವನ್ನು ಬದಲಿಸಿದೆ ಮತ್ತು ಸಿಲ್ವರ್‌ಲೈನ್‌ನಂತಹ ಮೂಲಸೌಕರ್ಯ ಅಭಿವೃದ್ಧಿ ಯೋಜನೆಗಳಿಗೆ ಸಂಬಂಧಿಸಿದಂತೆ ರಾಜ್ಯದ ಅಗತ್ಯಗಳನ್ನು ನಿರ್ಲಕ್ಷಿಸುತ್ತಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಮಂಗಳವಾರ ಆರೋಪಿಸಿದ್ದಾರೆ.

ರಾಜ್ಯದ ಅಗತ್ಯಗಳನ್ನು ನಿರ್ಲಕ್ಷಿಸುವ ಕೇಂದ್ರದ ನಿಲುವಿನ ವಿರುದ್ಧದ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ವಿಜಯನ್ ಅವರು, ಕೇರಳದ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಗಳಲ್ಲಿನ ಸುಧಾರಣೆಯು ಯುಡಿಎಫ್ ನೇತೃತ್ವದ ಪ್ರತಿಪಕ್ಷ ಮತ್ತು ಬಿಜೆಪಿ ಕಂಟಕವಾಗಿದೆ ಎಂದು ಹೇಳಿದರು. 

ಕೇಂದ್ರವು ಆರಂಭದಲ್ಲಿ ಬೆಂಬಲಿಸಿದ ಸಿಲ್ವರ್‌ಲೈನ್‌ನಂತಹ ಯೋಜನೆಗಳನ್ನು ಈಗ ನಿರ್ಲಕ್ಷಿಸಲಾಗುತ್ತಿದೆ. ಬಹುಶಃ ಇದಕ್ಕೆ ಕೇರಳ ಬಿಜೆಪಿ ವಿರೋಧ ಕಾರಣವಾಗಿರಬಹುದು ಎಂದರು.

ಸಿಲ್ವರ್‌ಲೈನ್, ತಿರುವನಂತಪುರವನ್ನು ಕಾಸರಗೋಡಿನೊಂದಿಗೆ ಸಂಪರ್ಕಿಸುವ ಸೆಮಿ-ಹೈಸ್ಪೀಡ್ ರೈಲು ಮಾರ್ಗವು ರಾಜ್ಯದ ಎರಡು ತುದಿಗಳ ನಡುವಿನ ಪ್ರಯಾಣದ ಸಮಯವನ್ನು ನಾಲ್ಕು ಗಂಟೆಗಳವರೆಗೆ ಕಡಿಮೆ ಮಾಡುತ್ತದೆ. ಇದು ಯಾವುದೇ ವನ್ಯಜೀವಿ ಪ್ರದೇಶಗಳ ಮೂಲಕ ಹಾದು ಹೋಗುವುದಿಲ್ಲ ಮತ್ತು ಇಂಗಾಲದ ಹೊರಸೂಸುವಿಕೆಯನ್ನು ಕಡಿಮೆ ಮಾಡುತ್ತದೆ. ರಸ್ತೆಯ ಬದಲು ರೈಲಿನ ಮೂಲಕ ಸರಕುಗಳನ್ನು ಸಹ ಸಾಗಿಸಬಹುದು ಎಂದು ಕೇರಳ ಮುಖ್ಯಮಂತ್ರಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT