ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಕೋವಿಡ್-19: ಭಾರತದಲ್ಲಿಂದು 6,990 ಹೊಸ ಕೇಸ್ ಪತ್ತೆ, 1 ಲಕ್ಷಕ್ಕೆ ಇಳಿದ ಸಕ್ರಿಯ ಪ್ರಕರಣಗಳ ಸಂಖ್ಯೆ

ಮಂಗಳವಾರ ಮುಂಜಾನೆ 8 ಗಂಟೆಗೆ ಮುಕ್ತಾಯವಾದ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ ಹೊಸದಾಗಿ 6,990 ಕೋವಿಡ್ ಪ್ಕರಣಗಳು ದಾಖಲಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 1 ಲಕ್ಷಕ್ಕೆ ಕುಸಿದಿದೆ.

ಸಂಗ್ರಹ ಚಿತ್ರ
Manjula VN
Updated On : 30 Nov 2021, 10:58 am

ನವದೆಹಲಿ: ಮಂಗಳವಾರ ಮುಂಜಾನೆ 8 ಗಂಟೆಗೆ ಮುಕ್ತಾಯವಾದ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ ಹೊಸದಾಗಿ 6,990 ಕೋವಿಡ್ ಪ್ಕರಣಗಳು ದಾಖಲಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 1 ಲಕ್ಷಕ್ಕೆ ಕುಸಿದಿದೆ.

ಇದೇ ಅವಧಿಯಲ್ಲಿ 190 ಸೋಂಕಿತರು ಸಾವಿಗೀಡಾಗಿದ್ದು, ಒಟ್ಟು ಸಾವಿನ ಸಂಖ್ಯೆ 4,68,980ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1,00,543ಕ್ಕೆ ತಲುಪಿದೆ.

Advertisement

Advertisement

ಈ ನಡುವೆ ಕಳೆದ 24 ಗಂಟೆಗಳಲ್ಲಿ 10,116 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,40,18,299ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ 10,12,523 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, 64,13,03,848 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 1,23,25,02,767 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement