ಜಿಗ್ನೇಶ್ ಮೆವಾನಿ, ಕನ್ಹಯ್ಯ ಕುಮಾರ್ ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮದ ಚಿತ್ರ 
ದೇಶ

ಕನ್ಹಯ್ಯ ಮತ್ತೋರ್ವ ಸಿಧು, ಕಾಂಗ್ರೆಸ್ ಪಕ್ಷಕ್ಕೆ ಉಳಿಗಾಲವಿಲ್ಲ: ಆರ್ ಜೆಡಿ

ಜವಹರ್ ಲಾಲ್ ನೆಹರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ ಕನ್ಹಯ್ಯ ಕುಮಾರ್ ಮತ್ತೋರ್ವ ನವಜೋತ್ ಸಿಂಗ್ ಸಿಧುವಿನಂತೆ ದೇಶದ ಅತ್ಯಂತ ಹಳೆಯ ಪಕ್ಷವನ್ನು ನಾಶಪಡಿಸುವುದಾಗಿ ಎಂದು ಬಿಹಾರದ ಪ್ರಮುಖ ವಿರೋಧ ಪಕ್ಷ ಆರ್ ಜೆಡಿ, ಕನ್ಹಯ್ಯ ಕುಮಾರ್ ಕಾಂಗ್ರೆಸ್ ಸೇರ್ಪಡೆ ಕುರಿತು ವ್ಯಂಗ್ಯವಾಡಿದೆ.

ಪಾಟ್ನಾ: ಜವಹರ್ ಲಾಲ್ ನೆಹರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ ಕನ್ಹಯ್ಯ ಕುಮಾರ್ ಮತ್ತೋರ್ವ ನವಜೋತ್ ಸಿಂಗ್ ಸಿಧುವಿನಂತೆ ದೇಶದ ಅತ್ಯಂತ ಹಳೆಯ ಪಕ್ಷವನ್ನು ನಾಶಪಡಿಸುವುದಾಗಿ ಎಂದು ಬಿಹಾರದ ಪ್ರಮುಖ ವಿರೋಧ ಪಕ್ಷ ಆರ್ ಜೆಡಿ, ಕನ್ಹಯ್ಯ ಕುಮಾರ್ ಕಾಂಗ್ರೆಸ್ ಸೇರ್ಪಡೆ ಕುರಿತು ವ್ಯಂಗ್ಯವಾಡಿದೆ.

ಕಾಂಗ್ರೆಸ್ ಪಕ್ಷ ಮುಳುಗುತ್ತಿರುವ ಹಡಗು ಎಂದು ವ್ಯಂಗ್ಯವಾಡಿದ ಆರ್ ಜೆಡಿ ಹಿರಿಯ ಮುಖಂಡ ಶಿವಾನಂದ ತಿವಾರಿ, ಕನ್ಹಯ್ಯ ಕುಮಾರ್ ಸೇರ್ಪಡೆಯಿಂದ ಯಾವುದೇ ಕಾಂಗ್ರೆಸ್ ನಲ್ಲಿ  ವ್ಯತ್ಯಾಸವಾಗದು ಎಂದಿದ್ದಾರೆ.

ಕಾಂಗ್ರೆಸ್ ಪಕ್ಷ ದೊಡ್ಡ ಹಡಗು, ಅದನ್ನು ಉಳಿಸಬೇಕಾದ ಅಗತ್ಯವಿದೆ ಎಂಬ ಕನ್ಹಯ್ಯ ಕುಮಾರ್ ಹೇಳಿಕೆ ಉಲ್ಲೇಖಿಸಿದ ತಿವಾರಿ, ಆತ ಮತ್ತೋರ್ವ ನವಜೋತ್ ಸಿಂಗ್ ಸಿಧು ತರಹ, ಪಕ್ಷವನ್ನು ಹಾಳು ಮಾಡಲಿದ್ದಾರೆ. ಕಾಂಗ್ರೆಸ್ ಪಕ್ಷ ಮುಳುಗುತ್ತಿರುವ ಹಡಗು ಆಗಿದ್ದು, ಅದಕ್ಕೆ ಯಾವುದೇ ಭವಿಷ್ಯವಿಲ್ಲ ಎಂದು ಸುದ್ದಿಗಾರರಿಗೆ ತಿಳಿಸಿದರು.

ತೇಜಸ್ವಿ ಯಾದವ್ ನೇತೃತ್ವದ ಪಕ್ಷದೊಂದಿಗೆ ಸಮಾಲೋಚಿಸದೆ ಕನ್ಹಯ್ಯ ಕುಮಾರ್ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡ ಬಗ್ಗೆ ಆರ್ ಜೆಡಿ ಪಕ್ಷದಲ್ಲಿ ಅಸಮಾಧಾನ ಇರುವುದಾಗಿ ಮೂಲಗಳು ಹೇಳಿವೆ. 

ಕಳೆದ ವರ್ಷ ಬಿಹಾರದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಪೈಪೋಟಿ ನಡೆಸಿದ ಆರ್ ಜೆಡಿ ನೇತೃತ್ವದ ಮಹಾಘಟ್ ಬಂಧನ್ ನಲ್ಲಿ ಕಾಂಗ್ರೆಸ್ ಕೂಡಾ ಮೈತ್ರಿ ಪಕ್ಷವಾಗಿತ್ತು. ಈ ವಿಚಾರದ ಬಗ್ಗೆ ಪ್ರತಿಕ್ರಿಯಿಸಿರುವ ಬಿಹಾರ ಕಾಂಗ್ರೆಸ್ ಮುಖಂಡರು ನಿರಾಕರಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!