ಕಟ್ಟಡ ಕುಸಿದು ಬೀಳುತ್ತಿರುವುದು. 
ದೇಶ

ಶಿಮ್ಲಾದಲ್ಲಿ ಭೂಕುಸಿತ ಪರಿಣಾಮ ಬಹುಅಂತಸ್ತಿನ ಕಟ್ಟಡ ಕುಸಿತ!

ಶಿಮ್ಲಾದಲ್ಲಿ ಗುರುವಾರ ಸಂಜೆ ಸುರಿದ ಭಾರೀ ಮಳೆಯಿಂದಾಗಿ ಭೂಕುಸಿತ ಸಂಭವಿಸಿದ್ದು, ಪರಿಣಾಮ ಬಹುಮಹಡಿ ಕಟ್ಟಡವೊಂದು ಕುಸಿದುಬಿದ್ದಿದೆ. 

ಶಿಮ್ಲಾ: ಶಿಮ್ಲಾದಲ್ಲಿ ಗುರುವಾರ ಸಂಜೆ ಸುರಿದ ಭಾರೀ ಮಳೆಯಿಂದಾಗಿ ಭೂಕುಸಿತ ಸಂಭವಿಸಿದ್ದು, ಪರಿಣಾಮ ಬಹುಮಹಡಿ ಕಟ್ಟಡವೊಂದು ಕುಸಿದುಬಿದ್ದಿದೆ. 

ನಿನ್ನೆ ಸಂಜೆ 5.45ರ ಸುಮಾರಿಗೆ ಶಿಮ್ಲಾದ ಹಾಲಿ ಪ್ಯಾಲೇಸ್ ಬಳಿಯ ಘೋಡಾ ಚೌಕಿಯಲ್ಲಿ ಈ ಘಟನೆ ನಡೆದಿದೆ ಎಂದು ರಾಜ್ಯ ವಿಪತ್ತು ನಿರ್ವಹಣಾ ನಿರ್ದೇಶಕ ಸುದೇಶ್ ಕುಮಾರ್ ಮೊಖ್ತಾ ತಿಳಿಸಿದ್ದಾರೆ. ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಕಟ್ಟಡ ಕುಸಿತದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.  

ಆದಾಗ್ಯೂ, ಘಟನೆಯ ಬಗ್ಗೆ ತನಿಖೆ ನಡೆಸಲು ಸರ್ಕಾರದಿಂದ ಆದೇಶಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವ ಸುರೇಶ್ ಭಾರದ್ವಾಜ್  ಹೇಳಿರುವುದಾಗಿ ಎಎನ್ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.

8 ಅಂತಸ್ತಿನ ಕಟ್ಟಡದ ಭಾಗಗಳು ಎರಡು ಎರಡು ಅಂತಸ್ತಿನ ಕಟ್ಟಡಗಳಿಗೆ ತಗುಲಿ ಹಾನಿಗೊಳಗಾದವು, ಹೋಟೆಲ್ ಸೇರಿದಂತೆ ಎರಡು ಪಕ್ಕದ ಕಟ್ಟಡಗಳು ಕೂಡ ಅಪಾಯದಲ್ಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ಜಿಲ್ಲಾಡಳಿತವು ಕಟ್ಟಡಗಳ ಪ್ರತಿ ನಿವಾಸಿಗಳಿಗೆ ತಕ್ಷಣದ ಹಣಕಾಸಿನ ಸಹಾಯವಾಗಿ 10,000 ರೂಗಳನ್ನು ಒದಗಿಸಿದೆ ಎಂದು ಮೊಖ್ತಾ ಮಾಹಿತಿ ನೀಡಿದ್ದಾರೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

SCROLL FOR NEXT