ಸಂಗ್ರಹ ಚಿತ್ರ 
ದೇಶ

ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಬಸ್-ಟ್ರಕ್ ನಡುವೆ ಡಿಕ್ಕಿ, 7 ಮಂದಿ ದುರ್ಮರಣ

ಮಧ್ಯಪ್ರದೇಶದ ಭಿಂದ್​ ಜಿಲ್ಲೆಯಲ್ಲಿ ಬಸ್ ಹಾಗೂ ಟ್ರಕ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ 7 ಮಂದಿ ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ.

ಭಿಂದ್: ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಭಿಂದ್‌ ಜಿಲ್ಲೆಯ ವೀರ್‌ ಖಾದಿ ಗ್ರಾಮದ ಬಳಿ ಬಸ್‌ ಹಾಗೂ ಕಂಟೈನರ್‌ ನಡುವೆ ಮುಖಾಮುಖಿ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.

ಘಟನೆಯಲ್ಲಿ ಏಳು ಮಂದಿ ಮೃತಪಟ್ಟಿದ್ದು, 14 ಮಂದಿ ಗಾಯಗೊಂಡಿದ್ದಾರೆ. ಸ್ಥಳೀಯರು ಮಾಹಿತಿ ನೀಡಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಕೂಡಲೇ ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು. ಅಪಘಾತದಲ್ಲಿ ಗಾಯಗೊಂಡವರ ಪೈಕಿ ನಾಲ್ವರ ಸ್ಥಿತಿ ಚಿಂತಾಜನಕ ವಾಗಿದೆ ಎಂದು ತಿಳಿದುಬಂದಿದೆ. 

ಘಟನಾ ಸ್ಥಳದಿಂದ 79 ಕಿಲೋ ಮೀಟರ್‌ ದೂರದಲ್ಲಿರುವ ಗ್ವಾಲಿಯರ್‌ ನ ಆಸ್ಪತ್ರೆಗೆ ಗಾಯಾಳುಗಳನ್ನು ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಸ್‌ ನಲ್ಲಿದ್ದ ಪ್ರಯಾಣಿಕರು ಗ್ವಾಲಿಯರ್‌ ನಿಂದ ಮಧ್ಯಪ್ರದೇಶದ ಬರೇಲಿ ಪಟ್ಟಣಕ್ಕೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.

ಅಪಘಾತಕ್ಕೆ ಕಾರಣನಾದ ಚಾಲಕನನ್ನು ಬಂಧಿಸಿ ಘಟನೆ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್‌ ಅಧಿಕಾರಿ ಮನೋಜ್‌ ಸಿಂಗ್‌ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT