ಸಂಗ್ರಹ ಚಿತ್ರ 
ದೇಶ

ಕೋವಿಡ್-19: ಭಾರತದಲ್ಲಿಂದು 24,354 ಹೊಸ ಕೇಸ್ ಪತ್ತೆ, ಸಕ್ರಿಯ ಪ್ರಕರಣ 197 ದಿನಗಳ ಕನಿಷ್ಠ

ಕೊರೋನಾ 3ನೇ ಅಲೆ ಭೀತಿ ನಡುವೆಯೇ ಶನಿವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 24,354 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 234 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ನವದೆಹಲಿ: ಕೊರೋನಾ 3ನೇ ಅಲೆ ಭೀತಿ ನಡುವೆಯೇ ಶನಿವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 24,354 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 234 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ಶನಿವಾರದ ಅಂಕಿ ಸಂಖ್ಯೆಯೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,37,91,061ಕ್ಕೆ ತಲುಪಿದ್ದು, 4,48,573ಕ್ಕೆ ಸಾವಿನ ಸಂಖ್ಯೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 2,73,889ಕ್ಕೆ ತಲುಪಿದೆ.

ಈ ನಡುವೆ ಕಳೆದ 24 ಗಂಟೆಗಳಲ್ಲಿ 25,455 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,30,68,599ಕ್ಕೆ ತಲುಪಿದೆ. 

ಇನ್ನು ಭಾರತದಲ್ಲಿ ಒಂದೇ 14,29,258 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, 57,19,94,990 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ. 

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 89,74,81,554 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮೈಸೂರು ರಾಜಮನೆತನ ಹೊರಗಿಟ್ಟು ಕರ್ನಾಟಕ ಇತಿಹಾಸ ಊಹಿಸುವುದು ಕಷ್ಟ': ಗವಿಸಿದ್ಧೇಶ್ವರ ಶ್ರೀಗಳು; Video

'ಮೊದಲು ನಿಮ್ಮ ಅಮೆರಿಕದಲ್ಲಿ ಕೈಗೆಟುಕುವ ದರದಲ್ಲಿ ಸೇವೆ ಒದಗಿಸಿ': ಒತ್ತಡಕ್ಕೆ ಭಾರತ ಮಣಿಯಲ್ಲ; ಎಲಾನ್ ಮಸ್ಕ್ ವಿರುದ್ಧ ನಿಶಿಕಾಂತ್ ದುಬೆ

'ನನ್ನನ್ನಲ್ಲ, ನಿಮ್ ಗಂಡನ ಗುರಾಯಿಸಿ', ಜಯಾ ಬಚ್ಚನ್‌ ಖಡಕ್ ನೋಟಕ್ಕೆ ಫೋಟೋಗ್ರಾಫರ್ ತಿರುಗೇಟು! Video

ಭೀಕರ ಹಿಟ್‌ ಅಂಡ್ ರನ್‌; ಟೀ ಕುಡಿಯುತ್ತಾ ಬೈಕ್ ಮೇಲೆ ಕುಳಿತಿದ್ದವನಿಗೆ ಶಾಕ್ ಕೊಟ್ಟ ಕಾರು, ಗಾಳಿಯಲ್ಲಿ ಹಾರಿದ ವ್ಯಕ್ತಿ! Video

ಮೈಸೂರು ದಸರಾಕ್ಕೆ ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳಿಂದ ಅಧಿಕೃತ ಚಾಲನೆ