ಪ್ರಧಾನಿ ಮೋದಿ 
ದೇಶ

ಕೃಷಿ ಕಾಯ್ದೆಗಳ ವಿರುದ್ಧ ಟೀಕೆ "ಬೌದ್ಧಿಕ ಅಪ್ರಾಮಾಣಿಕತೆ": ಪ್ರತಿಪಕ್ಷಗಳ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ

ಪ್ರತಿಪಕ್ಷಗಳು ತಮ್ಮ ಸರ್ಕಾರದ ಮೂರು ಕೃಷಿ ಕಾಯ್ದೆಗಳನ್ನು ಟೀಕಿಸುತ್ತಿರುವುದು "ಬೌದ್ಧಿಕ ಅಪ್ರಾಮಾಣಿಕತೆ" ಮತ್ತು "ರಾಜಕೀಯ ವಂಚನೆ" ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ವಾಗ್ದಾಳಿ ನಡೆಸಿದ್ದಾರೆ.

ನವದೆಹಲಿ: ಪ್ರತಿಪಕ್ಷಗಳು ತಮ್ಮ ಸರ್ಕಾರದ ಮೂರು ಕೃಷಿ ಕಾಯ್ದೆಗಳನ್ನು ಟೀಕಿಸುತ್ತಿರುವುದು "ಬೌದ್ಧಿಕ ಅಪ್ರಾಮಾಣಿಕತೆ" ಮತ್ತು "ರಾಜಕೀಯ ವಂಚನೆ" ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ವಾಗ್ದಾಳಿ ನಡೆಸಿದ್ದಾರೆ.

ದಶಕಗಳ ಹಿಂದೆಯೇ ದೇಶದ ಜನರಿಗೆ ಸಿಗಬೇಕಾಗಿದ್ದ ಸೌಲಭ್ಯಗಳನ್ನು ಕಲ್ಪಿಸಲು ಕಠಿಣ ಮತ್ತು ದೊಡ್ಡ ನಿರ್ಧಾರಗಳನ್ನು ತೆಗೆದುಕೊಳ್ಳುವ ಅಗತ್ಯವಿದೆ ಎಂದು ಪ್ರಧಾನಿ ಹೇಳಿದ್ದಾರೆ.

ಕೃಷಿ ಕಾನೂನುಗಳನ್ನು ದೃಢವಾಗಿ ಸಮರ್ಥಿಸಿಕೊಂಡ ಪ್ರಧಾನಿ ಮೋದಿ, ಒಂದು ರಾಜಕೀಯ ಪಕ್ಷವು ತಾನು ನೀಡಿದ್ದ ಭರವಸೆ ಈಡೇರಿಸಲು ಸಾಧ್ಯವಾಗದಿದ್ದರೆ ಅದು ವಂಚನೆಯಾಗಲಿದೆ. ಆದರೆ "ನಿರ್ದಿಷ್ಟವಾಗಿ ಅನಪೇಕ್ಷಿತ" ಮತ್ತು "ಅಸಹ್ಯಕರ" ಲಕ್ಷಣವೆಂದರೆ ಕೆಲ ಪಕ್ಷಗಳು ಕೃಷಿ ಸುಧಾರಣೆ ಕುರಿತು ಭರವಸೆ ನೀಡಿದ್ದವು. ನಮ್ಮ ಸರ್ಕಾರ ಆ ಸುಧಾರಣೆಗಳನ್ನು ಜಾರಿಗೊಳಿಸಿದರೆ ಆ ಪಕ್ಷಗಳು ಈಗ ಯು-ಟರ್ ಹೊಡೆದು ಜನರಲ್ಲಿ ತಪ್ಪು ತಿಳಿವಳಿಕೆ ಮೂಡಿಸುತ್ತಿವೆ ಎಂದು ಹೇಳಿದರು.

ಒಪನ್ ನಿಯತಕಾಲಿಕೆಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಪ್ರಧಾನಿ, "ಭಾರತದ ಜನರು ಕೆಲವು ಸೌಲಭ್ಯಗಳನ್ನು ಪಡೆಯಲು ಅರ್ಹರಾಗಿದ್ದಾರೆ. ಈ ಸೌಲಭ್ಯಗಳು ದಶಕಗಳ ಹಿಂದೆಯೇ ಅವರಿಗೆ ಸಿಗಬೇಕಿತ್ತು. ಆದರೆ ಇನ್ನೂ ಸಿಕ್ಕಲ್ಲ. ಅದಕ್ಕಾಗಿ ಇನ್ನೂ ಕಾಯುವಂತಹ ಪರಿಸ್ಥಿತಿ ಬೇಡ. ಈಗ ನಾವು ಆ ಸೌಲಭ್ಯಗಳನ್ನು ತಲುಪಿಸಲು ದೊಡ್ಡ ಮತ್ತು ಕಠಿಣ ನಿರ್ಧಾರ ಅಗತ್ಯ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!