ಆಧಾರ್ ಕಾರ್ಡ್ 
ದೇಶ

166 ಸ್ವತಂತ್ರ ಆಧಾರ್ ನೋಂದಣಿ ಮತ್ತು ನವೀಕರಣ ಕೇಂದ್ರ ತೆರೆಯಲು ಯುಐಡಿಎಐ ಚಿಂತನೆ

ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ(ಯುಐಡಿಎಐ) ದೇಶಾದ್ಯಂತ 166 ಸ್ವತಂತ್ರ ಆಧಾರ್ ದಾಖಲಾತಿ ಮತ್ತು ನವೀಕರಣ ಕೇಂದ್ರಗಳನ್ನು ತೆರೆಯಲು ಯೋಜಿಸಿದೆ ಎಂದು ಅಧಿಕೃತ ಪ್ರಕಟಣೆ ಶನಿವಾರ ತಿಳಿಸಿದೆ.

ನವದೆಹಲಿ: ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ(ಯುಐಡಿಎಐ) ದೇಶಾದ್ಯಂತ 166 ಸ್ವತಂತ್ರ ಆಧಾರ್ ದಾಖಲಾತಿ ಮತ್ತು ನವೀಕರಣ ಕೇಂದ್ರಗಳನ್ನು ತೆರೆಯಲು ಯೋಜಿಸಿದೆ ಎಂದು ಅಧಿಕೃತ ಪ್ರಕಟಣೆ ಶನಿವಾರ ತಿಳಿಸಿದೆ.

ಪ್ರಸ್ತುತ, 166 ಯೋಜಿತ ಕೇಂದ್ರಗಳಲ್ಲಿ 55 ಆಧಾರ್ ಸೇವಾ ಕೇಂದ್ರಗಳು(ಎಎಸ್‌ಕೆಗಳು) ಕಾರ್ಯನಿರ್ವಹಿಸುತ್ತಿದ್ದು, ಬ್ಯಾಂಕುಗಳು, ಅಂಚೆ ಕಚೇರಿಗಳು ಮತ್ತು ರಾಜ್ಯ ಸರ್ಕಾರಗಳು ನಡೆಸುತ್ತಿರುವ ಸುಮಾರು 52,000 ಆಧಾರ್ ದಾಖಲಾತಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ.

"ಯುಐಡಿಎಐ ದೇಶದ 122 ನಗರಗಳಲ್ಲಿ 166 ಆಧಾರ್ ನೋಂದಣಿ ಮತ್ತು ನವೀಕರಣ ಕೇಂದ್ರಗಳನ್ನು ತೆರೆಯಲು ಯೋಜಿಸಿದೆ" ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಎಎಸ್‌ಕೆಗಳು ವಾರದ ಎಲ್ಲಾ ದಿನಗಳಲ್ಲಿ ತೆರೆದಿರುತ್ತವೆ ಮತ್ತು ಇದುವರೆಗೆ ದಿವ್ಯಾಂಗ್ ವ್ಯಕ್ತಿಗಳು ಸೇರಿದಂತೆ 70 ಲಕ್ಷಕ್ಕೂ ಹೆಚ್ಚು ನಿವಾಸಿಗಳಿಗೆ ಆಧಾರ್ ಕಾರ್ಡ್ ಪೂರೈಸಲಾಗಿದೆ. 

ಮಾಡೆಲ್-ಎ ಎಎಸ್‌ಕೆಗಳಿಗೆ ದಿನಕ್ಕೆ 1,000 ದಾಖಲಾತಿಗಳನ್ನು ಮತ್ತು ಅಪ್‌ಡೇಟ್ ಮನವಿಗಳನ್ನು ನಿರ್ವಹಿಸುವ ಸಾಮರ್ಥ್ಯ ಇದೆ, ಮಾದರಿ ಬಿ ಎಎಸ್‌ಕೆಗಳಿಗೆ ದಿನಕ್ಕೆ 500 ದಾಖಲಾತಿಗಳು ಮತ್ತು ಅಪ್‌ಡೇಟ್ ಮನವಿಗಳನ್ನು ಮತ್ತು ಮಾಡೆಲ್ ಸಿ ಎಎಸ್‌ಕೆಗಳಿಗೆ ದಿನಕ್ಕೆ 250 ದಾಖಲಾತಿಗಳನ್ನು ಮತ್ತು ಅಪ್‌ಡೇಟ್ ಮನವಿಗಳನ್ನು ನಿರ್ವಹಿಸುವ ಸಾಮರ್ಥ್ಯ ಹೊಂದಿದೆ ಎಂದು ಯುಐಡಿಎಐ ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

SCROLL FOR NEXT