ಗೋವಿಂದ್ ಸಿಂಗ್ ದೋಟಾಸ್ರಾ 
ದೇಶ

ರೀಟ್ ಹಗರಣ: ಬಿಜೆಪಿ ಆಡಳಿತದಲ್ಲಿ ಪರೀಕ್ಷೆಗಳಲ್ಲಿ ವ್ಯಾಪಕ ವಂಚನೆ- ದೋಟಾಸ್ರಾ ವಾಗ್ದಾಳಿ

ರಾಜಸ್ಥಾನದಲ್ಲಿ ಬಿಜೆಪಿ ಪಕ್ಷದ ಆಡಳಿತದ ಅವಧಿಯಲ್ಲಿ ಗ್ಯಾಂಗ್‌ಗಳು ಪ್ರವರ್ಧಮಾನಕ್ಕೆ ಬಂದಿದ್ದು, ಪರೀಕ್ಷೆಗಳಲ್ಲಿ ವ್ಯಾಪಕ ವಂಚನೆ ನಡೆದಿರುವುದಾಗಿ ರಾಜಸ್ಥಾನ್ ಶಾಲಾ ಶಿಕ್ಷಣ ಸಚಿವ ಗೋವಿಂದ್ ಸಿಂಗ್ ದೋಟಾಸ್ರಾ ಶನಿವಾರ ವಾಗ್ದಾಳಿ ನಡೆಸಿದ್ದಾರೆ.

ಜೈಪುರ: ರಾಜಸ್ಥಾನದಲ್ಲಿ ಬಿಜೆಪಿ ಪಕ್ಷದ ಆಡಳಿತದ ಅವಧಿಯಲ್ಲಿ ಗ್ಯಾಂಗ್‌ಗಳು ಪ್ರವರ್ಧಮಾನಕ್ಕೆ ಬಂದಿದ್ದು, ಪರೀಕ್ಷೆಗಳಲ್ಲಿ ವ್ಯಾಪಕ ವಂಚನೆ ನಡೆದಿರುವುದಾಗಿ ರಾಜಸ್ಥಾನ್ ಶಾಲಾ ಶಿಕ್ಷಣ ಸಚಿವ ಗೋವಿಂದ್ ಸಿಂಗ್ ದೋಟಾಸ್ರಾ ಶನಿವಾರ ವಾಗ್ದಾಳಿ ನಡೆಸಿದ್ದಾರೆ.

ರಾಜಸ್ಥಾನ ಶಿಕ್ಷಕರ ಅರ್ಹತಾ ಪರೀಕ್ಷೆ (REET) ನಡೆಸುವಲ್ಲಿ ಬಿಜೆಪಿ ಯುವಕರನ್ನು ದಾರಿ ತಪ್ಪಿಸುತ್ತಿದೆ ಎಂದು ಆರೋಪಿದ ಸಚಿವರು, ಯಾವುದೇ ಅಕ್ರಮ ಕಂಡುಬಂದಲ್ಲಿ ತಪ್ಪಿತಸ್ಥರನ್ನು ಬಿಡುವುದಿಲ್ಲ ಎಂದು ಹೇಳಿದರು.

ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ನಿವಾಸದಲ್ಲಿ "ಪ್ರಶಾಸನ್ ಶಹರೋನ್, ಗಾಂವ್ ಕೆ ಸಾಂಗ್" ಅಭಿಯಾನವನ್ನು ಉದ್ಘಾಟಿಸಿ ಮಾತನಾಡಿದ ದೋಟಾಸ್ರಾ, ಶಿಕ್ಷಣ ಇಲಾಖೆಯಲ್ಲಿ ಇತರ 29,000 ಹುದ್ದೆಗಳಿಗೆ ನೇಮಕಾತಿಗೆ ಈ ತಿಂಗಳು ಅಧಿಸೂಚನೆ ಹೊರಡಿಸಲಾಗುವುದು ಎಂದು ಹೇಳಿದರು.

ರೀಟ್ ಪ್ರಶ್ನೆ ಪತ್ರಿಕೆ ಸೋರಿಕೆ, ಅಕ್ರಮದ ಆರೋಪದ ಬೆನ್ನಲ್ಲೇ ಸಚಿವರು ಈ ರೀತಿಯ ಹೇಳಿಕೆ ನೀಡಿದ್ದಾರೆ.  ಈ ಅಕ್ರಮಗಳ ಬಗ್ಗೆ ಸಿಬಿಐ ತನಿಖೆಗೆ ಬಿಜೆಪಿ ಈಗಾಗಲೇ ಒತ್ತಾಯಿಸಿದೆ.

ಪ್ರತಿಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ ದೋಟಾಸ್ರಾ, ಸರ್ಕಾರದಿಂದ ಪರೀಕ್ಷೆಗಾಗಿ ಸೂಕ್ತ ವ್ಯವಸ್ಥೆ ಮಾಡಿದ್ದರಿಂದ ಅವರು ಅಸಮಾಧಾನಗೊಂಡಿದ್ದಾರೆ. ಹಿಂದೆ ಬಿಜೆಪಿ ಆಡಳಿತ ಅವಧಿಯಲ್ಲಿ ಪರೀಕ್ಷೆಯಲ್ಲಿ ವಂಚನೆ ಕಂಡುಹಿಡಿಯಲು ಸರ್ಕಾರ ಸೂಕ್ತ ಕ್ರಮ ಕೈಗೊಂಡಿರಲಿಲ್ಲ ಎಂದು ಅವರು ತಿಳಿಸಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್