ದೇಶ

ಫೇಸ್ ಬುಕ್, ವಾಟ್ಸಾಪ್, ಇನ್ಸ್ಟಾಗ್ರಾಮ್ ಸೇವೆಯಲ್ಲಿ ವ್ಯತ್ಯಯ; ಗ್ರಾಹಕರ ಪರದಾಟ

Nagaraja AB

ನವದೆಹಲಿ: ಫೇಸ್ ಬುಕ್, ವಾಟ್ಸಾಪ್, ಇನ್ಸ್ಟಾಗ್ರಾಮ್ ಸೇವೆಯಲ್ಲಿ ಸೋಮವಾರ ಸಂಜೆಯಿಂದ ವ್ಯತ್ಯಯ ಉಂಟಾಗಿದ್ದು, ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಸಂದೇಶಗಳನ್ನು ಕಳುಹಿಸಲು ಅಥವಾ ಸ್ವೀಕರಿಸಲು ಸಾಧ್ಯವಾಗದ ಕಾರಣ ಭಾರತ ಸೇರಿದಂತೆ ವಿಶ್ವದಾದ್ಯಂತ ಲಕ್ಷಾಂತರ ಗ್ರಾಹಕರು ಪರದಾಡುವಂತಾಗಿದೆ.

ವಾಟ್ಸಪ್ ಸ್ಥಗಿತಗಳನ್ನು ಟ್ರ್ಯಾಕ್ ಮಾಡುವ ವೆಬ್‌ಸೈಟ್ ಡೌನ್‌ಟೆಕ್ಟರ್ ಪ್ರಕಾರ, ಶೇ. 40 ರಷ್ಟು ಬಳಕೆದಾರರಿಗೆ ಆಪ್ ಡೌನ್‌ಲೋಡ್ ಮಾಡಲು ಸಾಧ್ಯವಾಗಲಿಲ್ಲ ಶೇ. 30 ರಷ್ಟು ಜನರಿಗೆ ಸಂದೇಶ ಕಳುಹಿಸಲು ತೊಂದರೆಯಾಗಿದೆ ಮತ್ತು ಶೇ. 22 ರಷ್ಟು ಜನರು ವೆಬ್ ಆವೃತ್ತಿಯಲ್ಲಿ ಸಮಸ್ಯೆಗಳನ್ನು ಹೊಂದಿದ್ದಾರೆ.

ಫೇಸ್ ಬುಕ್ ಸಂಬಂಧಿತ ಆ್ಯಪ್ ಗಳಲ್ಲಿ ಬಳಕೆದಾರರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಮಿಮ್ಸ್ ಮತ್ತು ಜಿಐಎಫ್ ಗಳೊಂದಿಗೆ ಜನರು ಟ್ವಿಟರ್ ಗೆ ವರದಿ ಮಾಡುತ್ತಿದ್ದಾರೆ. ಕ್ಷಮಿಸಿ, ಏನೋ ತಪ್ಪಾಗಿದೆ. ಇದರ ಮೇಲೆ ಕೆಲಸ ಮಾಡುತ್ತಿದ್ದೇವೆ, ಆದಷ್ಟು ಬೇಗ ಅದನ್ನು ಸರಿಪಡಿಸುತ್ತೇವೆ ಎಂದು ಫೇಸ್ ಬುಕ್  ವೆಬ್ ಸೈಟ್  ನಲ್ಲಿ ಸಂದೇಶವೊಂದನ್ನು ಹಾಕಲಾಗಿದೆ. 

SCROLL FOR NEXT