ದೇಶ

ಲಖಿಂಪುರ್ ಹಿಂಸಾಚಾರ: ರೈತರು ಆಕ್ರೋಶಗೊಂಡಿದ್ದಾರೆ, ಗ್ರಾಮೀಣ ಪ್ರದೇಶಗಳಿಗೆ ಭೇಟಿ ನೀಡಬೇಡಿ - ಬಿಜೆಪಿ ಕಾರ್ಯಕರ್ತರಿಗೆ ಬಿಕೆಯು ಮನವಿ

Lingaraj Badiger

ಮುಜಾಫರ್ ನಗರ: ಲಖಿಂಪುರ್ ಖೇರಿಯಲ್ಲಿ ಭಾನುವಾರ ಸಂಭವಿಸಿದ ಹಿಂಸಾಚಾರದಿಂದ ರೈತರು ಆಕ್ರೋಶಗೊಂಡಿದ್ದು, ಉತ್ತರ ಪ್ರದೇಶದ ಗ್ರಾಮೀಣ ಪ್ರದೇಶಗಳಿಗೆ ಭೇಟಿ ನೀಡದಂತೆ ಬಿಜೆಪಿ ಕಾರ್ಯಕರ್ತರಿಗೆ ಭಾರತೀಯ ಕಿಸಾನ್ ಯೂನಿಯನ್(ಬಿಕೆಯು) ರಾಷ್ಟ್ರೀಯ ಅಧ್ಯಕ್ಷ ನರೇಶ್ ಟಿಕಾಯತ್ ಅವರು ಮನವಿ ಮಾಡಿದ್ದಾರೆ.

ಭಾನುವಾರ ರಾತ್ರಿ ಸಿಸೋಲಿಯ ಬಿಕೆಯು ಪ್ರಧಾನ ಕಚೇರಿಯಲ್ಲಿ ಕಿಸಾನ್ ಪಂಚಾಯತ್ ಅನ್ನು ಉದ್ದೇಶಿಸಿ ಮಾತನಾಡಿದ ಅವರು, ಹಿಂಸೆಯನ್ನು ಪ್ರಚೋದಿಸುವ ಮೂಲಕ ರೈತರ ಆಂದೋಲನಕ್ಕೆ ಮಸಿ ಬಳಿಯಲು ಬಿಜೆಪಿ ಯತ್ನಿಸುತ್ತಿದೆ ಎಂದು ಆರೋಪಿಸಿದರು.

ಯಾವುದೇ ಅಹಿತಕರ ಘಟನೆಗಳನ್ನು ತಪ್ಪಿಸಲು ಗ್ರಾಮೀಣ ಪ್ರದೇಶಗಳಿಗೆ ಭೇಟಿ ನೀಡದಂತೆ ಬಿಜೆಪಿ ಕಾರ್ಯಕರ್ತರಿಗೆ ಟಿಕಾಯತ್ ಕೇಳಿಕೊಂಡಿದ್ದಾರೆ.

ಲಖಿಂಪುರ್ ಖೇರಿಯಲ್ಲಿ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಅವರ ಭೇಟಿಯನ್ನು ವಿರೋಧಿಸಿ ನಿನ್ನೆ ರೈತರು ನಡೆಸುತ್ತಿದ್ದ ಪ್ರತಿಭಟನೆ ವೇಳೆ ಹಿಂಸಾಚಾರ ಭುಗಿಲೆದ್ದ ಪರಿಣಾಮ ರೈತರು ಮತ್ತು ಬಿಜೆಪಿ ಕಾರ್ಯಕರ್ತರು ಸೇರಿ 8 ಮಂದಿ ಮೃತಪಟ್ಟಿದ್ದಾರೆ.

SCROLL FOR NEXT