ದೇಶ

ಲಖಿಂಪುರ್ ಖೇರಿಯಲ್ಲಿ ರೈತರ ಮೇಲೆ ಕಾರು ಹರಿಸಿದ ವಿಡಿಯೋ ಹಂಚಿಕೊಂಡ ಬಿಜೆಪಿ ಸಂಸದ ವರುಣ್ ಗಾಂಧಿ, ಬಂಧನಕ್ಕೆ ಆಗ್ರಹ

Lingaraj Badiger

ನವದೆಹಲಿ: ಬಿಜೆಪಿ ಸಂಸದ ವರುಣ್ ಗಾಂಧಿ ಮಂಗಳವಾರ ಉತ್ತರ ಪ್ರದೇಶ ಲಖಿಂಪುರ್ ಖೇರಿಯಲ್ಲಿ ರೈತರ ಮೇಲೆ ಎಸ್ ಯುವಿ ಕಾರು ಹರಿಸಿದ ವಿಡಿಯೋ ಕ್ಲಿಪ್ ಅನ್ನು ಶೇರ್ ಮಾಡಿದ್ದಾರೆ ಮತ್ತು ಘಟನೆಯಲ್ಲಿ ಭಾಗಿಯಾದವರನ್ನು ಪೊಲೀಸರು ಗುರುತಿಸಿ ಬಂಧಿಸಬೇಕು ಎಂದು ಒತ್ತಾಯಿಸಿದ್ದಾರೆ.

ವೀಡಿಯೊದ ಸತ್ಯಾಸತ್ಯತೆ ಇನ್ನೂ ಪರಿಶೀಲಿಸಲಾಗಿಲ್ಲ. ಆದರೆ "ಲಖಿಂಪುರ್ ಖೇರಿಯಲ್ಲಿ ಉದ್ದೇಶಪೂರ್ವಕವಾಗಿಯೇ ರೈತರ ಮೇಲೆ ವಾಹನ ಹರಿಸಿರುವ ಈ ವಿಡಿಯೋ ಪ್ರತಿಯೊಬ್ಬರ ಮನಸನ್ನು ಕದಡುತ್ತದೆ ಎಂದು ಬಿಜೆಪಿ ಸಂಸದ ಹೇಳಿದ್ದಾರೆ.

ಪೋಲಿಸರು ವೀಡಿಯೋವನ್ನು ಪರಿಶೀಲಿಸಬೇಕು, ಈ ವಾಹನಗಳ ಮಾಲೀಕರು ಮತ್ತು ಅವರ ವೃತ್ತಿಯನ್ನು ಗುರುತಿಸಬೇಕು. ಘಟನೆಯಲ್ಲಿ ಭಾಗಿಯಾಗಿರುವ ಇತರರನ್ನು ಗುರುತಿಸಬೇಕು ಮತ್ತು ಅವರನ್ನು ತಕ್ಷಣವೇ ಬಂಧಿಸಬೇಕು" ಎಂದು ವರುಣ್ ಗಾಂಧಿ ಆಗ್ರಹಿಸಿದ್ದಾರೆ.

ಕಳೆದ ಭಾನುವಾರ ಲಖಿಂಪುರ್ ಖೇರಿಯಲ್ಲಿ ನಡೆದ ಹಿಂಸಾಚಾರದಲ್ಲಿ ಎಂಟು ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ.

ಮೃತಪಟ್ಟವರಲ್ಲಿ ನಾಲ್ವರು ರೈತರಾಗಿದ್ದು, ಉತ್ತರ ಪ್ರದೇಶ ಉಪಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಅವರನ್ನು ಸ್ವಾಗತಿಸಲು ಬಿಜೆಪಿ ಕಾರ್ಯಕರ್ತರು ಓಡಿಸುತ್ತಿದ್ದ ವಾಹನಗಳನ್ನು ರೈತರ ಮೇಲೆ ಹರಿಸಲಾಗಿದೆ. ಇದರಿಂದ ಆಕ್ರೋಶಗೊಂಡ ರೈತರು ವಾಹನವನ್ನು ತಡೆದು ಬಿಜೆಪಿ ಕಾರ್ಯಕರ್ತರು ಮತ್ತು ಚಾಲಕರು ಸೇರಿದಂತೆ ನಾಲ್ವರನ್ನು ಹತ್ಯೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

SCROLL FOR NEXT