ಸಂಗ್ರಹ ಚಿತ್ರ 
ದೇಶ

ಭಾರತದಲ್ಲಿ ಮುಂದುವರೆದ ಕೊರೋನಾ ಏರಿಳಿಕೆ: ದೇಶದಲ್ಲಿಂದು 18,346 ಹೊಸ ಕೇಸ್ ಪತ್ತೆ, 263 ಮಂದಿ ಸಾವು

ಕೊರೋನಾ 3ನೇ ಅಲೆ ಭೀತಿ ನಡುವೆಯೇ ಮಂಗಳವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 18,346 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 263 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ನವದೆಹಲಿ: ಕೊರೋನಾ 3ನೇ ಅಲೆ ಭೀತಿ ನಡುವೆಯೇ ಮಂಗಳವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 18,346 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 263 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ಮಂಗಳವಾರದ ಅಂಕಿ ಸಂಖ್ಯೆಯೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,38,53,048ಕ್ಕೆ ತಲುಪಿದ್ದು, 4,49,260ಕ್ಕೆ ಸಾವಿನ ಸಂಖ್ಯೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 2,52,902ಕ್ಕೆ ತಲುಪಿದೆ.

ಈ ನಡುವೆ ಕಳೆದ 24 ಗಂಟೆಗಳಲ್ಲಿ 29,639 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,31,50,886ಕ್ಕೆ ತಲುಪಿದೆ. 

ಇನ್ನು ಭಾರತದಲ್ಲಿ ಒಂದೇ 11,41,642 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, 57,53,94,042 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ. 

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 91,54,65,826 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ ಕೆ ಶಿವಕುಮಾರ್ ಸ್ಫೋಟಕ ಆರೋಪ; Video

ಶಾಸಕರ ಲೆಟರ್‌ಹೆಡ್'ನಲ್ಲೇ 'ಸತ್ತಿದ್ದಾರೆ' ಎಂದು ಅರ್ಜಿ: ಯತ್ನಾಳ್ ಸೇರಿ ಮೂವರ ವಿರುದ್ಧ FIR ದಾಖಲು

'Evil Dead': ನಟ ನಾನಾ ಪಾಟೇಕರ್ ಸಾವು, #MeToo ಆರೋಪ ಮಾಡಿದ್ದ ನಟಿ ತನುಶ್ರೀ ದತ್ತಾ ಹೇಳಿದ್ದೇನು? ವಿಚಿತ್ರ ಪೋಸ್ಟ್!

ಇದ್ದಕ್ಕಿದ್ದಂತೆ ಬಾಯ್ತೆರೆದ ರಸ್ತೆ, ಕಾರು ಆಪೋಷನ, ಕೂದಲೆಳೆ ಅಂತರದಲ್ಲಿ ಚಾಲಕ ಬಚಾವ್-Video

'SIR' ವಿರುದ್ಧ ಭಾರೀ ಪ್ರತಿಭಟನೆ: ಜ್ಞಾನೇಶ್ ಕುಮಾರ್ Z+ ಭದ್ರತೆ ಮತ್ತಷ್ಟು ಹೆಚ್ಚಿಸಿದ ಕೇಂದ್ರ ಸರ್ಕಾರ!