ಸಂಗ್ರಹ ಚಿತ್ರ 
ದೇಶ

ಭಾರತದಲ್ಲಿ ಇಳಿದ ಕೊರೋನಾ ಅಬ್ಬರ: ದೇಶದಲ್ಲಿಂದು 18,833 ಹೊಸ ಕೇಸ್ ಪತ್ತೆ, 278 ಮಂದಿ ಸಾವು

ಭಾರತದಲ್ಲಿ ಕೊರೋನಾ ಅಬ್ಬರ ಇಳಿಕೆಯಾಗುತ್ತಿದ್ದು, ದೇಶದಲ್ಲಿ ಬುಧವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯವಾದ 24 ತಾಸಿನಲ್ಲಿ 18,833 ಪ್ರಕರಣಗಳು ದೃಢಪಟ್ಟಿದ್ದು. ಇದು ಕಳೆದ 203 ದಿನಗಳ ಕನಿಷ್ಠ ಸಂಖ್ಯೆಯಾಗಿದೆ.

ನವದೆಹಲಿ: ಭಾರತದಲ್ಲಿ ಕೊರೋನಾ ಅಬ್ಬರ ಇಳಿಕೆಯಾಗುತ್ತಿದ್ದು, ದೇಶದಲ್ಲಿ ಬುಧವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯವಾದ 24 ತಾಸಿನಲ್ಲಿ 18,833 ಪ್ರಕರಣಗಳು ದೃಢಪಟ್ಟಿದ್ದು. ಇದು ಕಳೆದ 203 ದಿನಗಳ ಕನಿಷ್ಠ ಸಂಖ್ಯೆಯಾಗಿದೆ.

ಇದೇ ಅವಧಿಯಲ್ಲಿ 278 ಮಂದಿ ಸೋಂಕಿಗೆ ಬೆಲಿಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 3,38,71,881ಕ್ಕೆ ಏರಿಕೆಯಾಗಿದೆ. ಇನ್ನು ಸಾವಿಗೀಡಾದವರ ಸಂಖ್ಯೆ 4,49,538ಕ್ಕೆ ತಲುಪಿದೆ. 

ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 2,52,902ಕ್ಕೆ ತಲುಪಿದೆ.

ಈ ನಡುವೆ ಕಳೆದ 24 ಗಂಟೆಗಳಲ್ಲಿ 24,770 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,31,75,656ಕ್ಕೆ ತಲುಪಿದೆ. 

ಇನ್ನು ಭಾರತದಲ್ಲಿ ಒಂದೇ 14,09,825 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, 57,68,03,867 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ. 

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 92.17 ಕೋಟಿ ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!

ಸರ್ಕಾರವನ್ನು ಅಸ್ಥಿರಗೊಳಿಸುವ ಪಿತೂರಿ: 'ಸ್ಟಿಂಗ್ ಆಪರೇಷನ್' ಕುರಿತು ಸಿಎಂ DKS ಎಚ್ಚರಿಕೆ ಕರೆಗೆ ಸಚಿವರಿಂದ ಬೆಂಬಲ

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ಚಿಕ್ಕಣ್ಣ, ಯಶಸ್ ಸೂರ್ಯಗೆ ಬಿಗ್ ಶಾಕ್‌; ಇಬ್ಬರಿಗೂ ಕೋರ್ಟ್ ಸಮನ್ಸ್

ಉತ್ತರ ಪ್ರದೇಶ ಚುನಾವಣೆಗೂ ಮುನ್ನ ಅಖಿಲೇಶ್ ಯಾದವ್'ಗೆ ಬಿಗ್ ಶಾಕ್; BJP ಸೇರಲಿದ್ದಾರೆ SPಯ ಮೂವರು ಶಾಸಕರು!