ಲಖೀಂಪುರಖೇರಿಯತ್ತ ಪ್ರಿಯಾಂಕಾ ವಾದ್ರಾ) 
ದೇಶ

ಲಖೀಂಪುರ್ ಖೇರಿಗೆ ತೆರಳಲು ರಾಹುಲ್ ಗಾಂಧಿ, ಪ್ರಿಯಾಂಕಾ ವಾದ್ರಾಗೆ ಉತ್ತರ ಪ್ರದೇಶ ಸರ್ಕಾರ ಅನುಮತಿ

ರೈತರ ಹಿಂಸಾಚಾರದಿಂದಾಗಿ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವ ಉತ್ತರ ಪ್ರದೇಶದ ಲಖೀಂಪುರ್ ಖೇರಿಗೆ ತೆರಳಲು ಕಾಂಗ್ರೆಸ್ ನಾಯಕರಿಗೆ ಯೋಗಿ ಆದಿತ್ಯಾನಾಥ್ ಸರ್ಕಾರ ಕೊನೆಗೂ ಅನುಮತಿ ನೀಡಿದೆ.

ಲಖನೌ: ರೈತರ ಹಿಂಸಾಚಾರದಿಂದಾಗಿ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವ ಉತ್ತರ ಪ್ರದೇಶದ ಲಖೀಂಪುರ್ ಖೇರಿಗೆ ತೆರಳಲು ಕಾಂಗ್ರೆಸ್ ನಾಯಕರಿಗೆ ಯೋಗಿ ಆದಿತ್ಯಾನಾಥ್ ಸರ್ಕಾರ ಕೊನೆಗೂ ಅನುಮತಿ ನೀಡಿದೆ.

ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ವಾದ್ರಾ ಮತ್ತು ಇತರೆ ಮೂವರಿಗೆ ಅನುಮತಿ ನೀಡಿರುವುದಾಗಿ ಉತ್ತರ ಪ್ರದೇಶ ಸರ್ಕಾರ ಗೃಹ ಸಚಿವಾಲಯ ಮಾಹಿತಿ ನೀಡಿದೆ. 

ಕಳೆದ ಭಾನುವಾರ ರಾತ್ರಿ ಕೇಂದ್ರ ಸಚಿವ ಅಜಯ್​ ಮಿಶ್ರಾ ಅವರ ತಂದೆಯ ಊರು ಲಖೀಂಪುರ ಖೇರಿಯ ಟಿಕೂನಿಯಾ ಎಂಬಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮಕ್ಕೆ ಉತ್ತರ ಪ್ರದೇಶದ ಉಪ ಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರು ಮುಖ್ಯ ಅತಿಥಿಯಾಗಿ ಆಗಮಿಸಬೇಕಿತ್ತು. ಆದರೆ ಕೃಷಿ ಕಾಯ್ದೆ ವಿರೋಧಿಸಿ ರೈತರು ಒಟ್ಟುಗೂಡಿ ಪ್ರತಿಭಟನೆ ನಡೆಸುವ ಮೂಲಕ ಕಾರನ್ನು ತಡೆದಿದ್ದರು. ಈ ವೇಳೆ ಎರಡು ಕಾರು ಅವರ ಮೇಲೆ ಹರಿದು ಇಬ್ಬರು ರೈತರು ಮೃತಪಟ್ಟಿದ್ದರು. ಈ ಘಟನೆಯಿಂದ ಹಿಂಸಾಚಾರ ನಡೆದಿದ್ದು, ಇಲ್ಲಿಯವರೆಗೆ 8 ಮಂದಿ ಸಾವನ್ನಪ್ಪಿದ್ದಾರೆ.

ಇತ್ತೀಚೆಗೆ ಲಖೀಂಪುರಖೇರಿಗೆ ಭೇಟಿ ನೀಡಿದ್ದ ಪ್ರಿಯಾಂಕಾ ಗಾಂಧಿ ಈ ಹಿಂಸಾಚಾರ ಘಟನೆಯಲ್ಲಿ ಮೃತಪಟ್ಟ ನಾಲ್ಕು ರೈತರ ಕುಟುಂಬಗಳನ್ನು ಭೇಟಿ ಮಾಡಿದ್ದರು. ಈ ವೇಳೆ ಪ್ರಿಯಾಂಕಾ ಗಾಂಧಿ ಅವರನ್ನುಅಡ್ಡಗಟ್ಟಿದ ಪೊಲೀಸರು ವಶಕ್ಕೆ ಪಡೆದಿದ್ದರು. ಪೊಲೀಸರು ವಶಕ್ಕೆ ಪಡೆದ ವಿಡಿಯೋ ಕೂಡ ವೈರಲ್ ಆಗಿತ್ತು. ಆ ವಿಡಿಯೋದಲ್ಲಿ ಪ್ರಿಯಾಂಕಾ ಗಾಂಧಿ, ಸಾವನ್ನಪ್ಪಿದ ಅಮಾಯಕ ಜನರಿಗಿಂತ ನಾನು ಮುಖ್ಯವಾದವಳಲ್ಲ. ನೀವು ಸರ್ಕಾರವನ್ನು ರಕ್ಷಿಸುತ್ತಿದ್ದೀರ. ನನ್ನನ್ನು ಬಂಧಿಸಲು ನಿಮ್ಮ ಬಳಿ ವಾರೆಂಟ್ ಇದೆಯೇ? ವಾರೆಂಟ್ ನೀಡದಿದ್ದರೆ ನೀವು ನನ್ನನ್ನು ಮುಟ್ಟುವಂತಿಲ್ಲ ಎಂದು ಹೇಳಿದ್ದರು.

ಆದರೂ ಪೊಲೀಸರು ಅವರನ್ನು ಕರೆದುಕೊಂಡು ಹೋಗಿ ಗೃಹ ಬಂಧನದಲ್ಲಿರಿಸಿದ್ದರು. ಉತ್ತರ ಪ್ರದೇಶದ ಸೀತಾಪುರದ ಪಿಎಸಿ ಗೆಸ್ಟ್ ಹೌಸ್ ನಲ್ಲಿ ಪ್ರಿಯಾಂಕಾ ಗಾಂಧಿ ಅವರನ್ನು ಗೃಹ ಬಂಧನದಲ್ಲಿರಿಸಲಾಗಿದ್ದು, ಬಂಧನ ಬಳಿಕ ಪ್ರಿಯಾಂಕಾ ಗಾಂಧಿ ತಮ್ಮ ಕೊಠಡಿಯನ್ನು ಖುದ್ದು ತಾವೇ ಪೊರಕೆ ಹಿಡಿದು ಕಸ ಗುಡಿಸಿರುವ ವಿಡಿಯೋ ಕೂಡ ವೈರಲ್ ಆಗಿತ್ತು.

ಬಳಿಕ ಶಾಂತಿಭಂಗ ತಂದ ಆರೋಪದ ಮೇಲೆ ಅವರನ್ನು ಬಂಧಿಸಿದ ಪೊಲೀಸರು ಎಫ್ ಐಆರ್ ಕೂಡ ದಾಖಲಿಸಿದ್ದರು.

Related Article

ಲಂಖಿಪುರ್ ಖೇರಿ ಹಿಂಸಾಚಾರ ಪ್ರಕರಣ: ಕಾನೂನಿನ ಪ್ರಕಾರವೇ ನಿರ್ಧಾರ ಕೈಗೊಂಡಿದ್ದೇವೆಂದ ಉತ್ತಪ್ರದೇಶ ಸರ್ಕಾರ

ಭಾರತದಲ್ಲಿ ಸರ್ವಾಧಿಕಾರವಿದೆ, ರೈತರ ಮೇಲೆ ದಾಳಿ ನಡೆಯುತ್ತಿದೆ: ಉತ್ತರ ಪ್ರದೇಶದ ಯೋಗಿ ಸರ್ಕಾರ ಮೇಲೆ ರಾಹುಲ್ ಗಾಂಧಿ ವಾಗ್ದಾಳಿ

ಲಖೀಂಪುರ ರೈತರ ಹತ್ಯೆ ಪ್ರಕರಣ: ಎರಡನೇ ಮರಣೋತ್ತರ ಪರೀಕ್ಷೆ ನಂತರ ಮೃತ ರೈತನ ಶವಸಂಸ್ಕಾರ

ರೈತರ ಮೇಲೆ ‘ವ್ಯವಸ್ಥಿತ ದಾಳಿ’ ನಡೆದಿದ್ದು, ಭಾರತದಲ್ಲಿ ಸರ್ವಾಧಿಕಾರವಿದೆ: ಯೋಗಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಲಖೀಂಪುರ್ ಖೇರ್ ಹಿಂಸಾಚಾರ ನಡೆದಾಗ ನನ್ನ ಮಗ ಕಾರಿನಲ್ಲಿ ಇರಲಿಲ್ಲ, ಚಾಲಕನ ನಿಯಂತ್ರಣ ತಪ್ಪಿ ಕೆಲವರ ಮೇಲೆ ಹರಿಯಿತು: ಕೇಂದ್ರ ಸಚಿವ ಅಜಯ್ ತೇನಿ

ಲಖೀಂಪುರ್ ಖೇರ್ ಹಿಂಸಾಚಾರ: ರೈತರನ್ನು ಕೆಣಕಿ, ಗುಂಡು ಹಾರಿಸಿದ ಕೇಂದ್ರ ಸಚಿವರ ಪುತ್ರ- ಎಫ್ ಐಆರ್ ನಲ್ಲಿ ಉಲ್ಲೇಖ

ಲಖೀಂಪುರ್ ಹಿಂಸಾಚಾರ: ಈವರೆಗೂ ಕೇಂದ್ರ ಸಚಿವರ ಪುತ್ರನ ವಿರುದ್ಧ ಕ್ರಮ ಏಕಿಲ್ಲ? ಪ್ರತಿಪಕ್ಷಗಳ ಪ್ರಶ್ನೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

Udaipur: ನಿಜಕ್ಕೂ ಅಚ್ಚರಿ, 55ನೇ ವಯಸ್ಸಿನಲ್ಲಿ 17ನೇ ಮಗುವಿಗೆ ತಾಯಿಯಾದ ಮಹಿಳೆ!

SCROLL FOR NEXT