ಆರ್ಯನ್ ಖಾನ್ 
ದೇಶ

ಡ್ರಗ್ಸ್ ಪ್ರಕರಣ: ಆರ್ಯನ್ ಖಾನ್, ಇತರ ಏಳು ಮಂದಿಗೆ 14 ದಿನ ನ್ಯಾಯಾಂಗ ಬಂಧನ

ಹಡಗಿನಲ್ಲಿ ಡ್ರಗ್ಸ್ ವಶಕ್ಕೆ ಪಡೆದ ಪ್ರಕರಣದಲ್ಲಿ ಬಾಲಿವುಡ್ ನಟ ಶಾರೂಖ್ ಖಾನ್ ಅವರ ಪುತ್ರ ಆರ್ಯನ್ ಖಾನ್, ಮರ್ಚೆಂಟ್ ಮತ್ತಿತರ ಆರು ಮಂದಿಯನ್ನು ಮುಂಬೈಯ ಸ್ಥಳೀಯ ಕೋರ್ಟ್ ವೊಂದು ಗುರುವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ  ಒಪ್ಪಿಸಿದೆ.

ಮುಂಬೈ: ಹಡಗಿನಲ್ಲಿ ಡ್ರಗ್ಸ್ ವಶಕ್ಕೆ ಪಡೆದ ಪ್ರಕರಣದಲ್ಲಿ ಬಾಲಿವುಡ್ ನಟ ಶಾರೂಖ್ ಖಾನ್ ಅವರ ಪುತ್ರ ಆರ್ಯನ್ ಖಾನ್, ಮರ್ಚೆಂಟ್ ಮತ್ತಿತರ ಆರು ಮಂದಿಯನ್ನು ಮುಂಬೈಯ ಸ್ಥಳೀಯ ಕೋರ್ಟ್ ವೊಂದು ಗುರುವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ  ಒಪ್ಪಿಸಿದೆ.

ವಿಶೇಷ ಎನ್ ಡಿಪಿಎಸ್ ನ್ಯಾಯಾಲಯ ಈ ಪ್ರಕರಣದ ವಿಚಾರಣೆ ನಡೆಸಲಿದೆ ಎಂದು ನ್ಯಾಯಾಲಯ ಹೇಳಿದೆ. ಶುಕ್ರವಾರ ಬೆಳಗ್ಗೆ 11 ಗಂಟೆಗೆ ಆರ್ಯನ್ ಖಾನ್ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. 

ಈ ಪ್ರಕರಣದಲ್ಲಿ ಆರ್ಯನ್ ಖಾನ್ ಮತ್ತಿತರ ಏಳು ಮಂದಿಯನ್ನು ಮತ್ತೆ ಎನ್ ಸಿಬಿ ಕಸ್ಟಡಿಗೆ ನೀಡಲು ನ್ಯಾಯಾಲಯ ನಿರಾಕರಿಸಿದೆ. ಪ್ರಕರಣದ ತನಿಖೆಗಾಗಿ ತನಿಖಾಧಿಕಾರಿಗೆ ಸೂಕ್ತ ಸಮಯ ನೀಡಿರುವುದರಿಂದ ಕಸ್ಟಡಿ ವಿಚಾರಣೆ ಅಗತ್ಯವಿಲ್ಲ ಎಂದು ಹೆಚ್ಚುವರಿ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಆರ್ ಎಂ ನಿರ್ಲೆಕರ್ ಹೇಳಿದ್ದಾರೆ.

ವಿಚಾರಣೆಗಾಗಿ ತನಿಖೆಗೆ ಪಡೆಯುವುದು ಅವರ ಹಕ್ಕು ಎಂದು ಹೇಳಿರುವುದರಲ್ಲಿ ಯಾವುದೇ ಅನುಮಾನವಿಲ್ಲ, ಸುಮ್ಮನೆ ಆರೋಪಿಗಳನ್ನು ಎನ್ ಸಿಬಿ ಕಸ್ಟಡಿಗೆ ನೀಡುವುದು ಸಂವಿಧಾನದತ್ತ ಅವರ ಮೂಲಭೂತ ಹಕ್ಕುಗಳ ಉಲ್ಲಂಘನೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಆರ್ಯನ್ ಖಾನ್, ಅರ್ಬಾಜ್ ಮತ್ತು ಮರ್ಚೆಂಟ್ ಅವರಿಂದ 2.6 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡಿದ್ದು, ಅವರನ್ನು ಸೋಮವಾರದವರೆಗೂ ವಶಕ್ಕೆ ನೀಡುವಂತೆ ಎನ್ ಸಿಬಿ ಕೋರಿತ್ತು. ಆರ್ಯನ್ ಖಾನ್  ತಮ್ಮ ಕಸ್ಟಡಿಯಲ್ಲಿದ್ದರೆ ಮತ್ತಷ್ಟು ಆರೋಪಿಗಳನ್ನು ಬಂಧಿಸಬಹುದು ಎಂಬ ಆಧಾರದಲ್ಲಿ ಎನ್ ಸಿಬಿ ಮತ್ತೆ ಕಸ್ಟಡಿಗೆ ತೆಗೆದುಕೊಳ್ಳಲು ಬಯಸಿತ್ತು. 

ಮುಂಬೈ ಕರಾವಳಿಯಲ್ಲಿ ಗೋವಾಕ್ಕೆ ತೆರಳುತ್ತಿದ್ದ ಹಡಗು ಒಂದರಲ್ಲಿ ಪತ್ತೆಯಾದ ಡ್ರಗ್ಸ್ ವಶಕ್ಕೆ ಪಡೆದ ಪ್ರಕರಣದಲ್ಲಿ ಆರ್ಯನ್ ಖಾನ್, ಅರ್ಬಾಜ್ ಮರ್ಚೆಂಟ್ ಅವರನ್ನು ಭಾನುವಾರ ಎನ್ ಸಿಬಿ ಬಂಧಿಸಿತ್ತು. ಈ ಪ್ರಕರಣದಲ್ಲಿ ಬಂಧಿತರಾಗಿರುವ ಆರ್ಯನ್ ಮತ್ತಿತರ ಇಬ್ಬರು ಆರೋಪಿಗಳ ವಾಟ್ಸಾಪ್ ಚಾಟ್ ನಲ್ಲಿ ಆಘಾತಕಾರಿ ವಸ್ತುಗಳನ್ನು ವಶಕ್ಕೆ ಪಡೆದಿರುವುದಾಗಿ ಈ ಹಿಂದೆ ಎನ್ ಸಿಬಿ ನ್ಯಾಯಾಲಯಕ್ಕೆ ಹೇಳಿತ್ತು.  

ತನ್ನ ಕಕ್ಷಿದಾರರನಿಂದ ಡ್ರಗ್ಸ್ ವಶಕ್ಕೆ ಪಡೆದಿಲ್ಲ ಎಂದು ಆರ್ಯನ್ ಪರ ವಕೀಲರು ಹೇಳಿದ್ದರು. ಶನಿವಾರ ರಾತ್ರಿ ಮುಂಬೈಯಿಂದ ಗೋವಾಕ್ಕೆ ತೆರಳುತ್ತಿದ್ದ ಹಡಗಿನ ಮೇಲೆ ಎನ್ ಸಿಬಿ ಅಧಿಕಾರಿಗಳು ದಾಳಿ ನಡೆಸಿ, ಆರ್ಯನ್ ಖಾನ್ ಸೇರಿದಂತೆ 8 ಮಂದಿಯನ್ನು ಬಂಧಿಸಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

SCROLL FOR NEXT