ಸಂಗ್ರಹ ಚಿತ್ರ 
ದೇಶ

ಭಾರತದಲ್ಲಿ ಏರಿಳಿಯುತ್ತಿರುವ ಕೊರೋನಾ: ದೇಶದಲ್ಲಿಂದು 22,431 ಹೊಸ ಕೇಸ್ ಪತ್ತೆ, 318 ಮಂದಿ ಸಾವು

ಕೊರೋನಾ 3ನೇ ಅಲೆ ಭೀತಿ ನಡುವೆಯೇ ಗುರುವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 22,431 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 318 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ನವದೆಹಲಿ: ಕೊರೋನಾ 3ನೇ ಅಲೆ ಭೀತಿ ನಡುವೆಯೇ ಗುರುವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 22,431 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 318 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ಗುರುವಾರದ ಅಂಕಿ ಸಂಖ್ಯೆಯೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,38,94,312ಕ್ಕೆ ತಲುಪಿದ್ದು, 4,49,856ಕ್ಕೆ ಸಾವಿನ ಸಂಖ್ಯೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 2,44,198ಕ್ಕೆ ತಲುಪಿದೆ.

ಈ ನಡುವೆ ಕಳೆದ 24 ಗಂಟೆಗಳಲ್ಲಿ 29,639 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,32,00,258ಕ್ಕೆ ತಲುಪಿದೆ. 

ಇನ್ನು ಭಾರತದಲ್ಲಿ ಒಂದೇ 11,41,642 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, 57,53,94,042 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ. 

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 92,63,68,608 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಗಂಡನ ಕೊಂದು ನೀಲಿ ಡ್ರಮ್ ನಲ್ಲಿ ಮುಚ್ಚಿಟ್ಟ ಕೇಸ್: ಪತ್ನಿ ಮುಸ್ಕಾನ್, ಪ್ರಿಯಕರ ಸಾಹಿಲ್ ಗೆ ಮರಣದಂಡನೆ ಶಿಕ್ಷೆ!

'ಅಧರ್ಮ ಎಸಗಿದವರಿಗೆ ಶಿಕ್ಷೆ ನೀಡುವುದೂ ಧರ್ಮವೇ'; ಮೀರತ್ ಹತ್ಯೆ ಪ್ರಕರಣ ಶಿಕ್ಷೆ ಪ್ರಕಟ ವೇಳೆ ನ್ಯಾಯಾಧೀಶರಿಂದ ಭಗವದ್ಗೀತೆ ಉಲ್ಲೇಖ!

'ಥಳಿತದಿಂದ ವಿದ್ಯಾರ್ಥಿನಿಗೆ ಕಿವುಡು': ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯದ ಬಗ್ಗೆ ಕೇಂದ್ರ, ದೆಹಲಿ ಪೊಲೀಸ್ ವಿರುದ್ಧ ರಾಹುಲ್ ಗಾಂಧಿ ಆರೋಪ

‘ಯುವಕರನ್ನು ಜೈಲಿಗೆ ಕಳುಹಿಸುವುದು ಹೇಡಿತನ’; ಸಿಜೆಪಿ ಪ್ರತಿಭಟನೆಗೆ ರಾಹುಲ್‌ ಗಾಂಧಿ ಬೆಂಬಲ

ವಿಮಾನ ಹೈಜಾಕ್ ಬೆದರಿಕೆ ಎಚ್ಚರಿಕೆ: ಫ್ರಾಂಕ್‌ಫರ್ಟ್‌- ದೆಹಲಿ Air India ಜೈಪುರದಲ್ಲಿ ಎಮೆರ್ಜೆನ್ಸಿ ಲ್ಯಾಂಡಿಂಗ್