ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಮತ್ತೆ ತೈಲೋತ್ಪನ್ನಗಳ ಬೆಲೆ ಏರಿಕೆ: ಇಂದಿನ ದರ ಇಂತಿದೆ

ದೇಶದಲ್ಲಿ ಮತ್ತೆ ತೈಲೋತ್ಪನ್ನಗಳ ದರ ಪರಿಷ್ಕರಣೆಯಾಗಿದ್ದು, ಪೆಟ್ರೋಲ್ ದರದಲ್ಲಿ 28 ರಿಂದ 31 ಪೈಸೆ ಮತ್ತು ಡೀಸೆಲ್ ದರದಲ್ಲಿ 32 ರಿಂದ 37 ಪೈಸೆ ಏರಿಕೆಯಾಗಿದೆ.

ಸಂಗ್ರಹ ಚಿತ್ರ
Srinivasa Murthy VN
Updated On : 8 Oct 2021, 1:26 pm

ಮುಂಬೈ: ದೇಶದಲ್ಲಿ ಮತ್ತೆ ತೈಲೋತ್ಪನ್ನಗಳ ದರ ಪರಿಷ್ಕರಣೆಯಾಗಿದ್ದು, ಪೆಟ್ರೋಲ್ ದರದಲ್ಲಿ 28 ರಿಂದ 31 ಪೈಸೆ ಮತ್ತು ಡೀಸೆಲ್ ದರದಲ್ಲಿ 32 ರಿಂದ 37 ಪೈಸೆ ಏರಿಕೆಯಾಗಿದೆ. 

ಆ ಮೂಲಕ ಶುಕ್ರವಾರ ಪೆಟ್ರೋಲಿಯಂ ಉತ್ಪನ್ನಗಳು ಮತ್ತೆ ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ತಲುಪಿವೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 103.54 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 92.13 ರೂಪಾಯಿ ಇದೆ. ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 109.51 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 99.88 ರೂಪಾಯಿ ಆಗಿದೆ. ಅದೇ ರೀತಿ ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ದರ 104.19 ರೂಪಾಯಿ ಹಾಗೂ ಲೀಟರ್ ಡಿಸೆಲ್ ದರ 95.19 ರೂಪಾಯಿದೆ ಏರಿಕೆಯಾಗಿದೆ. ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 100.98 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 96.56 ರೂಪಾಯಿಗೆ ಏರಿಕೆ ಆಗಿದೆ.

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ
ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 107.1 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 97.74 ರೂಪಾಯಿಗೆ ಏರಿಕೆ ಆಗಿದೆ. 

Advertisement

Advertisement

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ
ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

ದರ ನಿಗದಿ ಹೇಗೆ?
ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.
 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement