ಸಂಗ್ರಹ ಚಿತ್ರ 
ದೇಶ

ಲಖಿಂಪುರ್ ಹಿಂಸಾಚಾರ ಪ್ರಕರಣ: ಪ್ರಮುಖ ಆರೋಪಿಯನ್ನು ಇನ್ನೂ ಬಂಧಿಸದ ಯೋಗಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ತಪರಾಕಿ!

ಲಖಿಂಪುರ್ ಹಿಂಸಾಚಾರ ಪ್ರಕರಣದ ನಿರ್ವಹಣೆ ಕುರಿತಂತೆ ಅತೃಪ್ತಿ ವ್ಯಕ್ತಿಪಡಿಸಿದ ಸುಪ್ರೀಂ ಕೋರ್ಟ್ ಇಂದು ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರವನ್ನು ಟೀಕಿಸಿದ್ದು ಪ್ರಮುಖ ಆರೋಪಿ ಆಶಿಶ್ ಮಿಶ್ರಾ ವಿರುದ್ಧ ಎಫ್ಐಆರ್ ದಾಖಲಿಸಿದರೂ ಆತನನ್ನು ಇನ್ನೂ ಯಾಕೆ ಬಂಧಿಸಿಲ್ಲ ಎಂದು ಪ್ರಶ್ನಿಸಿದೆ. 

ನವದೆಹಲಿ: ಲಖಿಂಪುರ್ ಹಿಂಸಾಚಾರ ಪ್ರಕರಣದ ನಿರ್ವಹಣೆ ಕುರಿತಂತೆ ಅತೃಪ್ತಿ ವ್ಯಕ್ತಿಪಡಿಸಿದ ಸುಪ್ರೀಂ ಕೋರ್ಟ್ ಇಂದು ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರವನ್ನು ಟೀಕಿಸಿದ್ದು ಪ್ರಮುಖ ಆರೋಪಿ ಆಶಿಶ್ ಮಿಶ್ರಾ ವಿರುದ್ಧ ಎಫ್ಐಆರ್ ದಾಖಲಿಸಿದರೂ ಆತನನ್ನು ಇನ್ನೂ ಯಾಕೆ ಬಂಧಿಸಿಲ್ಲ ಎಂದು ಪ್ರಶ್ನಿಸಿದೆ. 

ಲಖಿಂಪುರ್ ಖೇರಿ ಹಿಂಸಾಚಾರದ ಬಗ್ಗೆ ಸ್ವಯಂಪ್ರೇರಿತ ವಿಚಾರಣೆ ನಡೆಸುತ್ತಿರುವ ಸುಪ್ರೀಂ ಕೋರ್ಟ್, ಇದು ಎಂಟು ಜನರ ಕ್ರೂರ ಹತ್ಯೆ, ಎಲ್ಲಾ ಆರೋಪಿಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಹೇಳಿತು.

"ಸಮಸ್ಯೆಯ ಸೂಕ್ಷ್ಮತೆಯಿಂದಾಗಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ" ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರವನ್ನು ಒತ್ತಾಯಿಸಿತು.

ಏತನ್ಮಧ್ಯೆ, ಉತ್ತರ ಪ್ರದೇಶ ಸರ್ಕಾರದ ಪರವಾಗಿ ಹಾಜರಾದ ಹಿರಿಯ ವಕೀಲ ಹರೀಶ್ ಸಾಳ್ವೆ, ರಾಜ್ಯದ ಅತ್ಯುನ್ನತ ಪೊಲೀಸ್ ಅಧಿಕಾರಿಗೆ ಪ್ರಕರಣದ ಸಾಕ್ಷ್ಯಗಳನ್ನು ಸಂರಕ್ಷಿಸಲು ತಿಳಿಸಲಾಗುವುದು ಎಂದು ಸುಪ್ರೀಂ ಕೋರ್ಟ್ ಭರವಸೆ ನೀಡಿದೆ.

ಕಳೆದ ಭಾನುವಾರ ರಾತ್ರಿ ಕೇಂದ್ರ ಸಚಿವ ಅಜಯ್​ ಮಿಶ್ರಾ ಅವರ ತಂದೆಯ ಊರು ಲಖೀಂಪುರ ಖೇರಿಯ ಟಿಕೂನಿಯಾ ಎಂಬಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮಕ್ಕೆ ಉತ್ತರ ಪ್ರದೇಶದ ಉಪ ಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರು ಮುಖ್ಯ ಅತಿಥಿಯಾಗಿ ಆಗಮಿಸಬೇಕಿತ್ತು. ಆದರೆ ಕೃಷಿ ಕಾಯ್ದೆ ವಿರೋಧಿಸಿ ರೈತರು ಒಟ್ಟುಗೂಡಿ ಪ್ರತಿಭಟನೆ ನಡೆಸುವ ಮೂಲಕ ಕಾರನ್ನು ತಡೆದಿದ್ದರು. ಈ ವೇಳೆ ಎರಡು ಕಾರು ಅವರ ಮೇಲೆ ಹರಿದು ನಾಲ್ವರು ರೈತರು ಮೃತಪಟ್ಟಿದ್ದರು. ಈ ಘಟನೆಯಿಂದ ಹಿಂಸಾಚಾರ ನಡೆದಿದ್ದು, ಇಲ್ಲಿಯವರೆಗೆ 8 ಮಂದಿ ಸಾವನ್ನಪ್ಪಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ಹಾಸನದ ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್‌ ಚೀಲದಲ್ಲಿ ವೃದ್ಧೆಯ ಶವ ಪತ್ತೆ: ಕೊಲೆ ಶಂಕೆ

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video