ದೇಶ

ಮಿಶ್ರಾ ಸಚಿವರಾಗಿರುವವರೆಗೆ ಲಖೀಂಪುರ್ ಹಿಂಸಾಚಾರದಲ್ಲಿ ನ್ಯಾಯ ದೊರೆಯುವ ವಿಶ್ವಾಸವಿಲ್ಲ: ಸಂಜಯ್ ಸಿಂಗ್

Nagaraja AB

ನವದೆಹಲಿ: ಆರೋಪಿ ಆಶಿಶ್ ಮಿಶ್ರಾ ತಂದೆ ಅಜಯ್ ಮಿಶ್ರಾ ಕೇಂದ್ರದಲ್ಲಿ ಸಚಿವರಾಗಿರುವವರೆಗೆ ಲಖೀಂಪುರ್- ಖೇರಿ ಹಿಂಸಾಚಾರ ಕೇಸ್ ನಲ್ಲಿ ನ್ಯಾಯ ದೊರೆಯುವ ವಿಶ್ವಾಸವಿಲ್ಲ ಎಂದು ಭಾನುವಾರ ಹೇಳಿರುವ ಎಎಪಿ ಸಂಸದ ಸಂಜಯ್ ಸಿಂಗ್, ಅಜಯ್ ಕುಮಾರ್ ಮಿಶ್ರಾ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದ್ದಾರೆ.

ಅಜಯ್ ಮಿಶ್ರಾ ಪುತ್ರ ಆಶಿಶ್ ಅವರನ್ನು ರಕ್ಷಿಸಲು ಬಿಜೆಪಿ ಹಾಗೂ ಯೋಗಿ ಆದಿತ್ಯ ಸರ್ಕಾರ ಎಲ್ಲಾ ರೀತಿಯ ಪ್ರಯತ್ನ ಮಾಡುತ್ತಿದೆ. ಆದರೆ, ಈ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಮಧ್ಯ ಪ್ರವೇಶದ ನಂತರ ಉತ್ತರ ಪ್ರದೇಶ ಸರ್ಕಾರಕ್ಕೆ ಬೇರೆ ಆಯ್ಕೆಗಳಿಲ್ಲದೆ ಆತನನ್ನು ಬಂಧಿಸಿದೆ ಎಂದು ಅವರು ಆರೋಪಿಸಿದರು. 

ಅಜಯ್ ಮಿಶ್ರಾ ಗೃಹ ವ್ಯವಹಾರಗಳ ರಾಜ್ಯ ಸಚಿವರಾಗಿ ಇರುವವರೆಗೂ ಈ ಕೇಸ್ ನಲ್ಲಿ ನ್ಯಾಯ ದೊರೆಯುವ ವಿಶ್ವಾಸವಿಲ್ಲ ಎಂದು ಉತ್ತರ ಪ್ರದೇಶದಲ್ಲಿ ಪ್ರಚಾರದಲ್ಲಿ ನಿರತರಾಗಿರುವ ಸಂಜಯ್ ಸಿಂಗ್ ವಿಡಿಯೋ ಸಂದೇಶವೊಂದರಲ್ಲಿ ತಿಳಿಸಿದ್ದಾರೆ. 

ಲಖೀಂಪುರ್ ಹಿಂಸಾಚಾರ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರ ಮೌನವನ್ನು ಪ್ರಶ್ನಿಸಿರುವ ಸಂಜಯ್ ಸಿಂಗ್, ಅಜಯ್ ಕುಮಾರ್ ಮಿಶ್ರಾ ಅವರನ್ನು ಏಕೆ ಇನ್ನೂ ಮಂತ್ರಿ ಸ್ಥಾನದಿಂದ ವಜಾಗೊಳಿಸಿಲ್ಲ ಎಂದು ಕೇಳಿದ್ದಾರೆ. 

SCROLL FOR NEXT