ದೇಶ

ಜಮ್ಮು-ಕಾಶ್ಮೀರ ನೀತಿಯನ್ನು ಭಾರತ ಸರ್ಕಾರ ಪುನರ್ ಪರಿಶೀಲಿಸಲಿ: ಅಮೆರಿಕದಲ್ಲಿ ನೆಲೆಸಿರುವ ಕಾಶ್ಮೀರಿ ಪಂಡಿತರ ಆಗ್ರಹ

Harshavardhan M

ವಾಷಿಂಗ್ಟನ್: ಕಾಶ್ಮೀರ ಕಣಿವೆಯಲ್ಲಿ ನಾಗರಿಕರನ್ನು ಗುರಿಯಾಗಿಸಿ ಉಗ್ರರು ನಡೆಸುತ್ತಿರುವ ದಾಳಿಯನ್ನು ಅಮೆರಿಕದಲ್ಲಿ ನೆಲೆಸಿರುವ ಕಾಶ್ಮೀರಿ ಪಂಡಿತರು ಖಂಡಿಸಿದ್ದಾರೆ. ಜಮ್ಮು ಕಾಶ್ಮೀರದಲ್ಲಿ ಭಾರತ ಸರ್ಕಾರ ತನ್ನ ನೀತಿಯನ್ನು ಪುನರ್ ಪರಿಶೀಲಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ. 

ಕಳೆದ ಕೆಲವು ದಿನಗಳಲ್ಲಿ ಕಣಿವೆಯಲ್ಲಿ ಕಾಶ್ಮೀರಿ ಪಂಡಿತ್, ಸಿಖ್ ಮತ್ತು ಮುಸ್ಲಿಂ ಸಮುದಾಯಗಳಿಗೆ ಸೇರಿದ ಏಳು ನಾಗರಿಕರನ್ನು ಕೊಲ್ಲಲಾಗಿದೆ. ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಬಂಧಿತರು ಭಯೋತ್ಪಾದಕ ಗುಂಪುಗಳೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂದಿದ್ದರು.

ಈ ವರ್ಷ ಇಲ್ಲಿಯವರೆಗೆ ಕಾಶ್ಮೀರದಲ್ಲಿ ಒಟ್ಟು 29 ನಾಗರಿಕರನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂದು ಎಎಫ್‌ಪಿ ವರದಿ ಮಾಡಿದೆ. ಕಳೆದ 5 ದಿನಗಳಲ್ಲಿ ಉಗ್ರರು ಒಟ್ಟು 7 ಮಂದಿಯನ್ನು ಹತ್ಯೆ ಮಾಡಿದ್ದಾರೆ. ಹತರಾದವರಲ್ಲಿ ನಾಲ್ವರು ಕಾಶ್ಮೀರಿ ಪಂಡಿತರ ಸಮುದಾಯಕ್ಕೆ ಸೇರಿದವರಾಗಿದ್ದಾರೆ. 

ಕಾಶ್ಮೀರದಲ್ಲಿ ಅಲ್ಪಸಂಖ್ಯಾತರಿಗೆ ಸರ್ಕಾರ ರಕ್ಷಣೆ ಕೊಡಬೇಕ್ಲು ಎಂದು ಅಮೆರಿಕದಲ್ಲಿ ನೆಲೆಸಿರುವ ಕಾಶ್ಮೀರಿ ಪಂಡಿತರ ಒಕ್ಕೂಟ (ಕೆಒಎ) ಒತ್ತಾಯಿಸಿದೆ. 

SCROLL FOR NEXT