ಅಮಿತ್ ಖರೆ 
ದೇಶ

ಪ್ರಧಾನಿ ಮೋದಿ ನೂತನ ಸಲಹೆಗಾರರಾಗಿ ಅಮಿತ್ ಖರೆ ನೇಮಕ!

ಪ್ರಧಾನಿ ನರೇಂದ್ರ ಮೋದಿ ಅವರ ನೂತನ ಸಲಹೆಗಾರರಾಗಿ ಅಮಿತ್ ಖರೆ ನೇಮಕವಾಗಿದ್ದಾರೆ. 

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ನೂತನ ಸಲಹೆಗಾರರಾಗಿ ಅಮಿತ್ ಖರೆ ನೇಮಕವಾಗಿದ್ದಾರೆ. 

ಉನ್ನತ ಶಿಕ್ಷಣ ಕಾರ್ಯದರ್ಶಿ ಆಗಿದ್ದ ಅಮಿತ್ ಖರೆ, ಕಳೆದ ತಿಂಗಳು ಐಎಎಸ್ ನಿಂದ ನಿವೃತ್ತಿ ಹೊಂದಿದ್ದರು. ಕ್ಯಾಬಿನೇಟ್ ನೇಮಕಾತಿ ಸಮಿತಿಯ ಅನುಮೋದನೆ ಹಾಗೂ ಅಧಿಕೃತ ಆದೇಶದ ಪ್ರಕಾರ ಅವರನ್ನು ನಿಯೋಜನೆ ಮಾಡಲಾಗಿದೆ.

ಎರಡು ವರ್ಷದ ಗುತ್ತಿಗೆ ಆಧಾರದಲ್ಲಿ ನೇಮಕಗೊಂಡಿದ್ದಾರೆ. ಕೇಂದ್ರ ಸರ್ಕಾರದ ಕಾರ್ಯದರ್ಶಿ ಶ್ರೇಣಿಯಲ್ಲಿ ಕಾರ್ಯಭಾರ ಮಾಡಲಿದ್ದಾರೆ. ಅಮಿತ್ ಖರೆ 1985ರ ಬ್ಯಾಚ್ ನ ಜಾರ್ಖಂಡ್ ಕೇಡರ್ ನ ಐಎಎಸ್ ಅಧಿಕಾರಿ. ಐಐಎಂ ಅಹಮದಾಬಾದ್ ನಿಂದ ಎಂಬಿಎ ಪದವಿ ಪಡೆದಿದ್ದಾರೆ.

2019ರ ಡಿಸೆಂಬರ್ ನಲ್ಲಿ ಉನ್ನತ ಶಿಕ್ಷಣ ಕಾರ್ಯದರ್ಶಿಯಾಗಿ ಅಧಿಕಾರವಹಿಸಿಕೊಂಡಿದ್ದರು, ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು (ಎನ್ಇಪಿ) ರೂಪಿಸುವ ಕಾರ್ಯನಿರ್ವಹಿಸಿದ್ದರು. ಅಷ್ಟೇ ಅಲ್ಲದೆ, ಮೇ 2018 ಮತ್ತು ಡಿಸೆಂಬರ್ 2019ರ ನಡುವೆ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್