ಸಂಗ್ರಹ ಚಿತ್ರ 
ದೇಶ

ಭಾರತದಲ್ಲಿ ಕೊರೋನಾ ಇಳಿಕೆ: ದೇಶದಲ್ಲಿ 14,313 ಹೊಸ ಕೇಸ್ ಪತ್ತೆ, 181 ಮಂದಿ ಸಾವು

ಕೊರೋನಾ 3ನೇ ಅಲೆ ಭೀತಿ ನಡುವೆಯೇ ಮಂಗಳವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 14,313 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 181 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ನವದೆಹಲಿ: ಕೊರೋನಾ 3ನೇ ಅಲೆ ಭೀತಿ ನಡುವೆಯೇ ಮಂಗಳವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 14,313 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 181 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ಮಂಗಳವಾರದ ಅಂಕಿ ಸಂಖ್ಯೆಯೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,39,85,920ಕ್ಕೆ ತಲುಪಿದ್ದು, 4,50,963ಕ್ಕೆ ಸಾವಿನ ಸಂಖ್ಯೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 2,14,900ಕ್ಕೆ ತಲುಪಿದೆ.

ಈ ನಡುವೆ ಕಳೆದ 24 ಗಂಟೆಗಳಲ್ಲಿ 26,579 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,33,20,057ಕ್ಕೆ ತಲುಪಿದೆ. 

ಇನ್ನು ಭಾರತದಲ್ಲಿ ಒಂದೇ 11,81,766 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, 58,50,38,043 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ. 

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 95,89,78,049 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Cockroach Janta Partyಗೆ ಬಿಗ್ ಶಾಕ್: ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸರು, 57 ಮೆಟ್ರೋ ನಿಲ್ದಾಣಗಳು ಬಂದ್..!

ಕೇಂದ್ರ ಸಚಿವ, ಬಿಜೆಪಿ ನಾಯಕನಿಂದ ಸ್ಟಿಂಗ್ ಆಪರೇಷನ್‌ಗೆ ಸಂಚು: Congress ಶಾಸಕ ಗಣಿಗ ರವಿ ಸ್ಫೋಟಕ ಆರೋಪ; Video

ಧಾರವಾಡ: ಕಾರು - ಕ್ಯಾಂಟರ್ ಮುಖಾಮುಖಿ ಡಿಕ್ಕಿ; ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವು!

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ

ಯೋಗೀಶ್ ಗೌಡ ಕೊಲೆ ಪ್ರಕರಣ: ಕಾಂಗ್ರೆಸ್ ಶಾಸಕ ವಿನಯ್‌ ಕುಲಕರ್ಣಿಗೆ ತಾತ್ಕಾಲಿಕ ರಿಲೀಫ್‌; ಅ.27ಕ್ಕೆ ವಿಚಾರಣೆ ಮುಂದೂಡಿಕೆ