ಸಾಂದರ್ಭಿಕ ಚಿತ್ರ 
ದೇಶ

14 ವರ್ಷದ ಅಪ್ರಾಪ್ತೆಯನ್ನು ನಡುರಸ್ತೆಯಲ್ಲೇ ಕೊಂದ ಭಗ್ನ ಪ್ರೇಮಿ

ಭಗ್ನ ಪ್ರೇಮಿಯೊಬ್ಬ 14 ವರ್ಷದ ಅಪ್ರಾಪ್ತ ಬಾಲಕಿಯನ್ನು ನಡುರಸ್ತೆಯಲ್ಲೇ ಕೊಂದು ಹಾಕಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ.

ಪುಣೆ: ಭಗ್ನ ಪ್ರೇಮಿಯೊಬ್ಬ 14 ವರ್ಷದ ಅಪ್ರಾಪ್ತ ಬಾಲಕಿಯನ್ನು ನಡುರಸ್ತೆಯಲ್ಲೇ ಕೊಂದು ಹಾಕಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ.

ಪುಣೆಯ ಬಿಬ್ವೆವಾಡಿ ಪ್ರದೇಶದಲ್ಲಿ ಈ ಘಟನೆ  ನಡೆದಿದ್ದು, ಈ ಸಂಬಂಧ 22 ವರ್ಷದ ರಿಷಿಕೇಶ್ ಭಾಗ್ವತ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಪೊಲೀಸ್ ಮೂಲಗಳ ಪ್ರಕಾರ ಸಂತ್ರಸ್ಥ ಬಾಲಕಿ ಫಿಟ್ನೆಸ್ ತರಗತಿಗೆ ಹೋಗುತ್ತಿದ್ದಾಗ ತನ್ನ ಸ್ನೇಹಿತರೊಂದಿಗೆ ಬಂದ ರಿಷಿಕೇಶ್ ಭಾಗ್ವತ್ ಆಕೆಯನ್ನು ರಸ್ತೆ ಮಧ್ಯೆ ತಡೆದು ಮಾತನಾಡಿದ್ದಾನೆ. ಈ ವೇಳೆ ಆಕೆಯೊಂದಿಗೆ ಇದ್ದ ಸ್ನೇಹಿತೆಯರನ್ನು ಬೆದರಿಸಿ ಓಡಿಸಿದ್ದಾನೆ. ಬಳಿಕ ಇಬ್ಬರ ನಡುವೆ  ವಾಗ್ವಾದ ನಡೆದಿದ್ದು, ಈ ವೇಳೆ ಆಕೆಯ ಮೇಲೆ ರಿಷಿಕೇಶ್ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ.  ಪರಿಣಾಮ ಬಾಲಕಿ ರಸ್ತೆಯಲ್ಲೇ ಸಾವನ್ನಪ್ಪಿದ್ದಾಳೆ ಎಂದು ಹೇಳಲಾಗಿದೆ.

ಇನ್ನು ರಿಷಿಕೇಶ್ ಬಾಲಕಿಯನ್ನು ಪ್ರೀತಿಸುತ್ತಿದ್ದ. ಆದರೆ ಬಾಲಕಿ ಆತನನ್ನು ಪ್ರೀತಿಸುತ್ತಿರಲಿಲ್ಲ. ಈ ಬಗ್ಗೆ ಸಾಕಷ್ಟು ಬಾರಿ ಆಕೆಯನ್ನು ಒತ್ತಾಯಿಸುತ್ತಿದ್ದ. ಆದರೂ ಆಕೆ ಒಪ್ಪದಿದ್ದರಿಂದ ಆಕೆಯ ಮೇಲೆ ಹಲ್ಲೆ ಮಾಡಿದ್ದಾನೆ ಎಂದು ಬಾಲಕಿ ಕುಟುಂಬಸ್ಥರು ಹೇಳಿದ್ದಾರೆ. ಪ್ರಸ್ತುತ ಆರೋಪಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ಆತನೊಂದಿಗೆ ಇದ್ದ ಸ್ನೇಹಿತರನ್ನು ವಶಕ್ಕೆ ಪಡೆಯಲು ಶೋಧ ನಡೆಸಿದ್ದಾರೆ ಎಂದು ಪುಣೆಯ ಡಿಸಿಪಿ ನಮ್ರತಾ ಪಾಟೀಲ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ