ಅಪಘಾತಕ್ಕೀಡಾದ ಜೀಪ್ 
ದೇಶ

ಪಿಒಕೆಯ ಹವೇಲಿ ಜಿಲ್ಲೆಯಲ್ಲಿ ಜೀಪ್ ಅಪಘಾತ: ಐವರು ದುರ್ಮರಣ

ಪಾಕ್ ಆಕ್ರಮಿತ ಕಾಶ್ಮೀರದ ಹವೇಲಿ ಜಿಲ್ಲೆಯಲ್ಲಿ ಅನಾಹುತವೊಂದು ಜರುಗಿದ್ದು, ಜೀಪ್ ನಾಲೆಗೆ ಬಿದ್ದ ಪರಿಣಾಮ ಐವರು ಮೃತಪಟ್ಟಿದ್ದಾರೆ. ಅಲ್ಲದೇ ನಾಲ್ವರು ಗಾಯಗೊಂಡಿದ್ದಾರೆ.

ಹವೇಲಿ: ಪಾಕ್ ಆಕ್ರಮಿತ ಕಾಶ್ಮೀರದ ಹವೇಲಿ ಜಿಲ್ಲೆಯಲ್ಲಿ ಅನಾಹುತವೊಂದು ಜರುಗಿದ್ದು, ಜೀಪ್ ನಾಲೆಗೆ ಬಿದ್ದ ಪರಿಣಾಮ ಐವರು ಮೃತಪಟ್ಟಿದ್ದಾರೆ. ಅಲ್ಲದೇ ನಾಲ್ವರು ಗಾಯಗೊಂಡಿದ್ದಾರೆ.

ಜೀಪ್ ಚಾಲಕ ರಸ್ತೆಯ ಮಧ್ಯದಲ್ಲಿದ್ದ ಕಬ್ಬಿಣದ ರಾಡ್‌ಗಳಿಂದ ವಾಹನವನ್ನು ಬದಿಗೆ ಸರಿಸಲು ಮುಂದಾದಾಗ ಈ ಅನಾಹುತ ಸಂಭವಿಸಿದೆ ಎಂದು ಸ್ಥಳೀಯರು ಹೇಳಿದ್ದಾರೆ. 

ಮೃತ ದೇಹಗಳನ್ನು ಮತ್ತು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ರಕ್ಷಣಾ ಸಿಬ್ಬಂದಿ ಮಾಹಿತಿ ನೀಡಿದ್ದಾರೆ. ವಾಹನದಲ್ಲಿದ್ದ ಪ್ರಯಾಣಿಕರು ಒಂದೇ ಕುಟುಂಬಕ್ಕೆ ಸೇರಿದವರು ಮತ್ತು ಮದುವೆಗಾಗಿ ಖ್ವಾಜಾ ಬಂದಿಗೆ ಬಂದಿದ್ದರು ಎಂದು ಎನ್ನಲಾಗಿದೆ. 

ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ರಸ್ತೆ ಅಪಘಾತಗಳು ಹೆಚ್ಚಾಗಿ ನಡೆಯುತ್ತಿದ್ದು, ಇದಕ್ಕೆ ಮುಖ್ಯ  ಕಾರಣ ಕಳಪೆ ರಸ್ತೆಗಳು, ಕಳಪೆ ನಿರ್ವಹಣೆ ವಾಹನಗಳು ಮತ್ತು ವೃತ್ತಿಪರವಲ್ಲದ ಚಾಲನೆಯಿಂದಾಗಿ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

SCROLL FOR NEXT