ಅಮಿತ್ ಶಾ 
ದೇಶ

ಗೋವಾ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಬಹುಮತ ಪಡೆದು ಮತ್ತೆ ಸರ್ಕಾರ ರಚಿಸಲಿದೆ: ಅಮಿತ್ ಶಾ

ಗೋವಾ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಪಡೆದು ಮತ್ತೆ ಸರ್ಕಾರ ರಚಿಸಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.

ಪಣಜಿ: ಗೋವಾ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಪಡೆದು ಮತ್ತೆ ಸರ್ಕಾರ ರಚಿಸಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.

ಕೇಂದ್ರದಲ್ಲಿ ಮತ್ತು ಗೋವಾದಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ, ಇದರಿಂದ ರಾಜ್ಯದ ಅಭಿವೃದ್ಧಿಯಾಗಲಿದೆ ಎಂದು ಹೇಳಿದ್ದಾರೆ. 

ದಕ್ಷಿಣ ಗೋವಾದ ಧರ್ಬಂದೋರಾ ಗ್ರಾಮದಲ್ಲಿ ರಾಷ್ಟ್ರೀಯ ವಿಧಿ ವಿಜ್ಞಾನ ವಿಶ್ವವಿದ್ಯಾಲಯಕ್ಕೆ (NFSU) ಅಡಿಗಲ್ಲು ಹಾಕಿದ ನಂತರ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಅವರು, ನವೆಂಬರ್ 15 ರಿಂದ ಚಾರ್ಟರ್ಡ್ ವಿಮಾನಗಳು ಪ್ರವಾಸೋದ್ಯಮ-ಅವಲಂಬಿತ ರಾಜ್ಯಕ್ಕೆ ಬರಲಾರಂಭಿಸುತ್ತವೆ ಎಂದು ಹೇಳಿದರು.

ಮುಂದಿನ ವರ್ಷ ಫೆಬ್ರವರಿಯಲ್ಲಿ  ನಡೆಯುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಬಹುಮತ ಪಡೆದು ಸರ್ಕಾರ ರಚಿಸಲಿದೆ ಎಂದು ಅಮಿತ್ ಶಾ ತಿಳಿಸಿದರು. ಚುನಾವಣೆಗೆ ಇನ್ನೂ ಸಮಯವಿದೆ, ಆದರೆ ನಾನು ಜನತೆ ಬಳಿ ಈಗಲೇ ಮನವಿ ಮಾಡುತ್ತಿದ್ದೇನೆ, ರಾಜ್ಯದಲ್ಲಿ ಬಿಜೆಪಿ ಸರ್ಕಾರ ತರುವಂತೆ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ