ಕಾಂಗ್ರೆಸ್ ಮುಖಂಡ ಪಿ. ಚಿದಂಬರಂ 
ದೇಶ

2024 ರ ಲೋಕಸಭಾ ಚುನಾವಣೆಗೂ ಮುನ್ನ ಗೋವಾದಲ್ಲಿ ಕಾಂಗ್ರೆಸ್ ಗೆಲುವು- ಪಿ.ಚಿದಂಬರಂ

ಮುಂದಿನ ವರ್ಷ ನಡೆಯಲಿರುವ ಗೋವಾ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಲಿದೆ ತದನಂತರ 2024ರ ಲೋಕಸಭಾ ಚುನಾವಣೆಯಲ್ಲಿ ಪಕ್ಷ ಜಯ ಭೇರಿ ಬಾರಿಸಲಿದೆ ಎಂದು ಹಿರಿಯ ಮುಖಂಡ ಪಿ. ಚಿದಂಬರಂ ಗುರುವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಪಣಜಿ: ಮುಂದಿನ ವರ್ಷ ನಡೆಯಲಿರುವ ಗೋವಾ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಲಿದೆ ತದನಂತರ 2024ರ ಲೋಕಸಭಾ ಚುನಾವಣೆಯಲ್ಲಿ ಪಕ್ಷ ಜಯ ಭೇರಿ ಬಾರಿಸಲಿದೆ ಎಂದು ಹಿರಿಯ ಮುಖಂಡ ಪಿ. ಚಿದಂಬರಂ ಗುರುವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಪಣಜಿಯಲ್ಲಿ ರಾಜ್ಯ ಚುನಾವಣಾ ಪ್ರಚಾರದ ಕಚೇರಿಯನ್ನು ಉದ್ಘಾಟಿಸಿದ ನಂತರ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಗೋವಾ ಎಐಸಿಸಿ ಉಸ್ತುವಾರಿಯೂ ಆಗಿರುವ ಪಿ. ಚಿದಂಬರಂ, ಗೋವಾದಲ್ಲಿ ಯಾರು ಗೆಲುವು ಸಾಧಿಸುತ್ತರೋ ಅವರು ದೆಹಲಿಯಲ್ಲಿ ಅಧಿಕಾರ ಹಿಡಿಯಲಿದ್ದಾರೆ ಎಂಬುದನ್ನು ಇತಿಹಾಸದಿಂದ ಹೇಳುತ್ತೇನೆ. 2007ರಲ್ಲಿ ಗೋವಾದಲ್ಲಿ ಗೆದ್ದಿದ್ದ ಕಾಂಗ್ರೆಸ್ 2009ರಲ್ಲಿ ಕೇಂದ್ರದಲ್ಲಿಯೂ ಅಧಿಕಾರಕ್ಕೆ ಬಂದಿತ್ತು ಎಂದರು.

2012ರಲ್ಲಿ ಗೋವಾದಲ್ಲಿ ಸೋತಿತತ್ತು ದುರಾದೃಷ್ಟಕರ, 2014ರಲ್ಲಿ ದೆಹಲಿಯಲ್ಲೂ ಸೋಲಬೇಕಾಯಿತು. 2017ರಲ್ಲಿ ಗೋವಾದಲ್ಲಿ ಕಾರ್ಯಕರ್ತರು ಗೆದ್ದರು, ಆದರೆ, ನಮ್ಮ ಶಾಸಕರು ಗೋವಾವನ್ನು ಕಳೆದುಕೊಂಡರು. ಆದ್ದರಿಂದ 2019ರ ಲೋಕಸಭಾ ಚುನಾವಣೆಯಲ್ಲಿ ಸೋಲಬೇಕಾಯಿತು ಎಂದು ಅವರು ಹೇಳಿದರು.

ಈ ವರ್ಷ ಧೈರ್ಯ ಹಾಗೂ ಆತ್ಮವಿಶ್ವಾಸದೊಂದಿಗೆ ಪಕ್ಷ ಮುನ್ನಡೆಯಲಿದೆ. 2022ರಲ್ಲಿ ಗೋವಾ ಹಾಗೂ 2024ರ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸುವುದಾಗಿ ಅವರು ವಿಶ್ವಾಸ ವ್ಯಕ್ತಪಡಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

NCERT ಪಠ್ಯಪುಸ್ತಕ ವಿವಾದ: ನಾವು ನ್ಯಾಯಾಂಗವನ್ನು ಗೌರವಿಸುತ್ತೇವೆ; ಬಿಜೆಪಿ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

SCROLL FOR NEXT