ಲಖೀಂಪುರ ಖೇರಿ ಘಟನೆ ಮರುಸೃಷ್ಟಿ 
ದೇಶ

ಲಖೀಂಪುರ ಖೇರಿ ಹಿಂಸಾಚಾರ: ಎಸ್ ಐಟಿಯಿಂದ ಘಟನೆಯ ಮರುಸೃಷ್ಟಿ; ಸ್ಥಳಕ್ಕೆ ಕೇಂದ್ರ ಸಚಿವರ ಪುತ್ರನನ್ನು ಕರೆದೊಯ್ದ ಅಧಿಕಾರಿಗಳು

ಲಿಖಿಂಪುರ ಖೇರಿ ಹಿಂಸಾಚಾರದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡವು (ಎಸ್‌ಎಐ) ಗುರುವಾರ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಮಗ ಮತ್ತು ಇನ್ನಿತರ ಮೂವರನ್ನು ಉತ್ತರ ಪ್ರದೇಶದ ತಿಕೋನಿಯಾ ಗ್ರಾಮಕ್ಕೆ ಕರೆದೊಯ್ದು ಘಟನೆಯನ್ನು ಮರುಸೃಷ್ಟಿಸಿದೆ. 

ಲಖೀಂಪುರ ಖೇರಿ: ಲಿಖಿಂಪುರ ಖೇರಿ ಹಿಂಸಾಚಾರದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡವು (ಎಸ್‌ಎಐ) ಗುರುವಾರ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಮಗ ಮತ್ತು ಇನ್ನಿತರ ಮೂವರನ್ನು ಉತ್ತರ ಪ್ರದೇಶದ ತಿಕೋನಿಯಾ ಗ್ರಾಮಕ್ಕೆ ಕರೆದೊಯ್ದು ಘಟನೆಯನ್ನು ಮರುಸೃಷ್ಟಿಸಿದೆ. 

ಬಿಗಿ ಭದ್ರತೆಯ ನಡುವೆ ಮೂವರು ಆರೋಪಿಗಳನ್ನು ಲಂಖಿಪುರ ಜಿಲ್ಲಾ ಕೇಂದ್ರದಿಂದ ಸುಮಾರು 60 ಕಿ.ಮೀ. ದೂರದಲ್ಲಿರುವ ತಿಕೊನಿಯಾ-ಬನ್ಬೀರ್‌ಪುರ ರಸ್ತೆಯಲ್ಲಿರುವ ಘಟನಾ ಸ್ಥಳಕ್ಕೆ ಕರೆದೊಯ್ಯಲಾಯಿತು. ಬಳಿಕ ಘಟನೆಯನ್ನು ಮರುಸೃಷ್ಟಿಸಲಾಗಿದೆ.

ಇದಕ್ಕಾಗಿ ಘಟನಾ ಸ್ಥಳಕ್ಕೆ ಆರೋಪಿಗಳನ್ನು ಕರೆದೊಯ್ದಿದ್ದ ತಂಡ, ಎಲ್ಲಿ ಏನು ನಡೆಯಿತು ಎಂದು ಆರೋಪಿಗಳಿಂದಲೇ ಮಾಹಿತಿ ಪಡೆಯುವ ಕಾರ್ಯಕ್ಕೆ ಮುಂದಾಗಿದೆ. ನಾಲ್ವರು ಪ್ರಮುಖ ಆರೋಪಿಗಳ ಪೈಕಿ ಕೇಂದ್ರ ಸಚಿವ ಅಜಯ್ ಮಿಶ್ರಾ ಪುತ್ರನೂ ಸೇರಿದ್ದಾನೆ.

ಅಕ್ಟೋಬರ್ 3ರಂದು ನಡೆದ ಹಿಂಸಾಚಾರದಲ್ಲಿ ನಾಲ್ವರು ರೈತರು ಸೇರಿದಂತೆ ಎಂಟು ಮಂದಿ ಹತ್ಯೆಯಾಗಿದ್ದರು. ಬಿಜೆಪಿ ಕಾರ್ಯಕರ್ತರು ಸಾಗುತ್ತಿದ್ದ ವಾಹನ ಡಿಕ್ಕಿ ಹೊಡೆದಿದೆ ಎಂದು ಆರೋಪಿಸಲಾಗಿದೆ. ಇದರಲ್ಲಿ ಅಜಯ್ ಮಿಶ್ರಾ ಮಗ ಆಶಿಶ್ ಮಿಶ್ರಾ ಇದ್ದರು ಎನ್ನಲಾಗಿದೆ. ಆಕ್ರೋಶಗೊಂಡ ರೈತರು ವಾಹನದಲ್ಲಿದ್ದ ಕೆಲವರನ್ನು ಹೊಡೆದರು ಎಂದು ಆರೋಪಿಸಲಾಗಿದೆ. ಮೃತರಲ್ಲಿ ಬಿಜೆಪಿ ಕಾರ್ಯಕರ್ತರು ಹಾಗೂ ಚಾಲಕ ಸೇರಿದ್ದಾರೆ. ಘಟನೆಯಲ್ಲಿ ಓರ್ವ ಪತ್ರಕರ್ತ ಕೂಡ ಮೃತಪಟ್ಟಿದ್ದಾರೆ. 
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel