ಸಂಗ್ರಹ ಚಿತ್ರ 
ದೇಶ

ಭಾರತದಲ್ಲಿ ಇಳಿದ ಕೊರೋನಾ ಅಬ್ಬರ: ದೇಶದಲ್ಲಿಂದು 16,862 ಹೊಸ ಕೇಸ್ ಪತ್ತೆ, 379 ಮಂದಿ ಸಾವು

ಭಾರತದಲ್ಲಿ ಮಹಾಮಾರಿ ಕೊರೋನಾ ಅಬ್ಬರ ಇಳಿಕೆಯಾಗುತ್ತಿರುವ ಬೆಳವಣಿಗೆಗಳು ಕಂಡು ಬರುತ್ತಿದ್ದು, ದೇಶದಲ್ಲಿ ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 18,987 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 246 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ನವದೆಹಲಿ: ಭಾರತದಲ್ಲಿ ಮಹಾಮಾರಿ ಕೊರೋನಾ ಅಬ್ಬರ ಇಳಿಕೆಯಾಗುತ್ತಿರುವ ಬೆಳವಣಿಗೆಗಳು ಕಂಡು ಬರುತ್ತಿದ್ದು, ದೇಶದಲ್ಲಿ ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 18,987 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 246 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ಶುಕ್ರವಾರದ ಅಂಕಿ ಸಂಖ್ಯೆಯೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,40,37,592ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 4,51,814ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 2,03,678ಕ್ಕೆ ತಲುಪಿದೆ.

ಈ ನಡುವೆ ಕಳೆದ 24 ಗಂಟೆಗಳಲ್ಲಿ 19,391 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,33,82,100ಕ್ಕೆ ತಲುಪಿದೆ. 

ಇನ್ನು ಭಾರತದಲ್ಲಿ ಒಂದೇ 13,01,083 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, 58,76,64,525 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ. 

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 97,14,38,553 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT