ನರೇಂದ್ರ ಮೋದಿ 
ದೇಶ

ಬೆನ್ನಿಗೆ ರಾಜಕೀಯ ಕುಟುಂಬವಿಲ್ಲ, ಜಾತಿಯ ಬೆಂಬಲದ ಹಂಗಿಲ್ಲ, ಜನಾಶೀರ್ವಾದದಿಂದಲೇ ನನಗೆ ಜನಸೇವೆಯ ಅವಕಾಶ: ಮೋದಿ

ಭಾರತದ ಮೊದಲ ಗೃಹ ಸಚಿವ ಸರ್ದಾರ್ ವಲ್ಲಭ ಭಾಯಿ ಪಟೇಲ್ ತೋರಿಸಿದ ಮಾರ್ಗದಲ್ಲಿ ಮುನ್ನಡೆಯಬೇಕು ಎಂದು ಮೋದಿ ಸೂಚಿಸಿದರು. ಜಾತಿ, ಧರ್ಮಗಳು, ನಂಬಿಕೆಗಳು ನಮಗೆ ಅಡ್ಡಿಯಾಗಬಾರದು ಎಂದು ಸರ್ದಾರ್ ಪಟೇಲ್ ಹೇಳುತ್ತಿದ್ದರು ಎಂದು ಪ್ರಧಾನಿ ಮೋದಿ ನೆನಪಿಸಿದರು.

ಸೂರತ್: ಯಾವುದೇ ರಾಜಕೀಯ ಹಿನ್ನೆಲೆ ಅಥವಾ ವಂಶ ಪರಂಪರೆಯ ಬೆಂಬಲವಿಲ್ಲದೆ ದೇಶದ ಸೇವೆ ಮಾಡಲು ಜನರು ತಮಗೆ ಅವಕಾಶ ನೀಡಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಒಂದು ಸಾಮಾನ್ಯ ಬಡ ಕುಟುಂಬದಿಂದ ಬಂದ ನನಗೆ ಗುಜರಾತ್‌ ಮುಖ್ಯಮಂತ್ರಿ ಸ್ಥಾನದಿಂದ ಇಂದು ಪ್ರಧಾನಿಯಾಗಿ ದೇಶದ ಸೇವೆ ಸಲ್ಲಿಸುವ ಭಾಗ್ಯ ಕಲ್ಪಿಸಿದ್ದಾರೆ ಎಂದರು.


ಸೂರತ್ ನಲ್ಲಿ ಬಾಲಕರ ವಸತಿ ನಿಲಯ ಶಿಲಾನ್ಯಾಸ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಮೋದಿ, ಕೇವಲ ಜನರ ಆಶೀರ್ವಾದದಿಂದ ಕಳೆದ 20 ವರ್ಷಗಳಿಂದ ಸರ್ಕಾರದ ನಾಯಕನಾಗಿ ಮುಂದುವರಿದಿದ್ದೇನೆ ಎಂದು ಹೇಳಿದರು.

'ನಾನು ಸಾಮಾನ್ಯ ಕುಟುಂಬದ ಹಿನ್ನೆಲೆಯಿಂದ ಬಂದವನು. ನನಗೆ ಯಾವುದೇ ರಾಜಕೀಯ, ವಂಶ ಪರಂಪರೆ ಅಥವಾ ಜಾತಿಯ ಬೆಂಬಲವಿಲ್ಲ. ಆದರೆ ನಿಮ್ಮೆಲ್ಲರ ಆಶೀರ್ವಾದದಿಂದ 2001 ರಿಂದ ಗುಜರಾತ್ ಗೆ ಸೇವೆ ಮಾಡುವ ಅವಕಾಶ ಸಿಕ್ಕಿದೆ ಎಂದು ಮೋದಿ ಹೇಳಿದರು. ಇದೇ ಆಶೀರ್ವಾದ ಶಕ್ತಿಯಿಂದ 20 ವರ್ಷಗಳ ಕಾಲ ದೇಶದ ಸೇವೆಯಲ್ಲಿ ಮುಂದುವರಿದಿದ್ದೇನೆ ಎಂದು ಅವರು ಹೇಳಿದರು.

ಗುಜರಾತ್ ಮುಖ್ಯಮಂತ್ರಿ ಸ್ಥಾನದಿಂದ, ಪ್ರಸ್ತುತ ದೇಶದ ಪ್ರಧಾನಿಯಾಗಿ ಸೇವೆ ಸಲ್ಲಿಸಲು ತಮಗೆ ಅವಕಾಶ ನೀಡಿದ್ದಾರೆ ಎಂದು ಅವರು ಹೇಳಿದರು. ಭಾರತದ ಮೊದಲ ಗೃಹ ಸಚಿವ ಸರ್ದಾರ್ ವಲ್ಲಭ ಭಾಯಿ ಪಟೇಲ್ ತೋರಿಸಿದ ಮಾರ್ಗದಲ್ಲಿ ಮುನ್ನಡೆಯಬೇಕು ಎಂದು ಮೋದಿ ಸೂಚಿಸಿದರು. ಜಾತಿ, ಧರ್ಮಗಳು, ನಂಬಿಕೆಗಳು ನಮಗೆ ಅಡ್ಡಿಯಾಗಬಾರದು ಎಂದು ಸರ್ದಾರ್ ಪಟೇಲ್ ಹೇಳುತ್ತಿದ್ದರು ಎಂದು ಪ್ರಧಾನಿ ಮೋದಿ ನೆನಪಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT