ದೇಶ

ದುಷ್ಕರ್ಮಿಗಳು 'ಭಾರೀ ಬೆಲೆ ತೆರಬೇಕಾಗುತ್ತದೆ': ಉಗ್ರರ ವಿರುದ್ಧ ಕ್ರಮದ ಭರವಸೆ ನೀಡಿದ ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್

Lingaraj Badiger

ಶ್ರೀನಗರ: ಉಗ್ರರು ಶ್ರೀನಗರ ಮತ್ತು ಪುಲ್ವಾಮಾದಲ್ಲಿ ಇಬ್ಬರು ನಾಗರಿಕರನ್ನು ಹತ್ಯೆ ಮಾಡಿರುವುದನ್ನು ಖಂಡಿಸಿದ ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು, ದಾಳಿಕೋರರಿಗೆ ಶೀಘ್ರದಲ್ಲೇ ಶಿಕ್ಷೆ ನೀಡಲಾಗುವುದು ಎಂದು ಶನಿವಾರ ಭರವಸೆ ನೀಡಿದ್ದಾರೆ.

"ಉಗ್ರರು ಅರವಿಂದ್ ಕುಮಾರ್ ಶಾ ಮತ್ತು ಸಗೀರ್ ಅಹ್ಮದ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿರುವುದನ್ನು ನಾನು ಬಲವಾಗಿ ಖಂಡಿಸುತ್ತೇನೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ನನ್ನ ಹೃದಯಪೂರ್ವಕ ಸಂತಾಪ ಎಂದು ಸಿನ್ಹಾ ಅವರು ಟ್ವೀಟ್ ಮಾಡಿದ್ದಾರೆ.

"ಮುಗ್ಧ ನಾಗರಿಕರನ್ನು ಕೊಂದ ಉಗ್ರರು ಭಾರೀ ಬೆಲೆ ತೆರಬೇಕಾಗುತ್ತದೆ" ಎಂದು ಲೆಫ್ಟಿನೆಂಟ್ ಗವರ್ನರ್ ಎಚ್ಚರಿಕೆ ನೀಡಿದ್ದಾರೆ.

"ಈ ಘೋರ ದಾಳಿಯ ಅಪರಾಧಿಗಳಿಗೆ ಶೀಘ್ರದಲ್ಲೇ ಶಿಕ್ಷೆಯಾಗಲಿದೆ. ನಾವು ಭಯೋತ್ಪಾದಕರನ್ನು ಮತ್ತು ಅವರ ಪರಿಸರವನ್ನು ಹತ್ತಿಕ್ಕುವ ಪ್ರಯತ್ನವನ್ನು ತೀವ್ರಗೊಳಿಸಿದ್ದೇವೆ. ಅವರು ಅಮಾಯಕ ನಾಗರಿಕರನ್ನು ಕೊಂದಿದ್ದಕ್ಕೆ ಭಾರೀ ಬೆಲೆ ತೆರಬೇಕಾಗುತ್ತದೆ. ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಕೈಜೋಡಿಸಬೇಕು ಎಂದು ನಾನು ಜನರಲ್ಲಿ ಮನವಿ ಮಾಡುತ್ತೇನೆ" ಎಂದು ಸಿನ್ಹಾ ಅವರು ಟ್ವೀಟ್ ಮಾಡಿದ್ದಾರೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ನಾಗರಿಕರ ಹತ್ಯೆ ಮುಂದುವರೆದಿದ್ದು, ಶ್ರೀನಗರ ಮತ್ತು ಪುಲ್ವಾಮಾ ಜಿಲ್ಲೆಗಳಲ್ಲಿ ಸ್ಥಳೀಯರಲ್ಲದ ಮತ್ತೆ ಇಬ್ಬರು ನಾಗರಿಕರನ್ನು ಉಗ್ರರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಿಹಾರದ ಬಂಕಾ ಪ್ರದೇಶದ ನಿವಾಸಿ ಅರವಿಂದ್ ಕುಮಾರ್ ಸಾಹ್(30) ಅವರನ್ನು ಶ್ರೀನಗರದ ಈದ್ಗಾದಲ್ಲಿರುವ ಉದ್ಯಾನವನದ ಹೊರಗೆ ಉಗ್ರರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

SCROLL FOR NEXT