ದೇಶ

17 ವರ್ಷದ ಯುವತಿ ಮೇಲೆ ಅತ್ಯಾಚಾರ: ಎಸ್ ಪಿ, ಬಿಎಸ್ ಪಿ ಜಿಲ್ಲಾಧ್ಯಕ್ಷ ಸೇರಿ ಏಳು ಮಂದಿ ಬಂಧನ

Nagaraja AB

ಲಖನೌ: ಲಲಿತ್ ಪುರದಲ್ಲಿ 17 ವರ್ಷದ ಯುವತಿ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ  ಸಮಾಜವಾದಿ ಪಕ್ಷ ಮತ್ತು ಬಹುಜನ ಸಮಾಜ ಪಕ್ಷದ ಜಿಲ್ಲಾಧ್ಯಕ್ಷರು ಸೇರಿದಂತೆ ಇಲ್ಲಿಯವರೆಗೂ ಏಳು ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ನಗರದ ವಿವಿಧ ಕಡೆಗಳಲ್ಲಿ ಐದು ವರ್ಷ ತಮ್ಮ ಮೇಲೆ ಅತ್ಯಾಚಾರವಾಗಿರುವುದಾಗಿ ಯುವತಿ ನೀಡಿದ ದೂರಿನ ಆಧಾರದ ಮೇಲೆ ಇವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಮಹಾನಿರ್ದೇಶಕ ನಿಖಿಲ್ ಪಠಕ್ ಹೇಳಿದ್ದಾರೆ. ಮೂವರು ಅಪರಿಚಿತರು ಸೇರಿದಂತೆ 25 ಜನರ ಹೆಸರನ್ನು ಯುವತಿ ದೂರಿನಲ್ಲಿ ಉಲ್ಲೇಖಿಸಿದ್ದಳು.

ಸಂತ್ರಸ್ತೆಯ ತಂದೆ, ಚಿಕ್ಕಪ್ಪ ಸೇರಿದಂತೆ 25 ಮಂದಿ ವಿರುದ್ಧ ಅಕ್ಟೋಬರ್ 12 ರಂದು ಸದಾರ್ ಕೊಟ್ವಾಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಶುಕ್ರವಾರ ಎಸ್ ಪಿ ಹಾಗೂ ಬಿಎಸ್ ಪಿ ಜಿಲ್ಲಾಧ್ಯಕ್ಷರು ತಂಗಿದ್ದ ಹೋಟೆಲ್ ವೊಂದರ ಮೇಲೆ  ದಾಳಿ ನಡೆಸಿ ಅವರನ್ನು ಬಂಧಿಸಲಾಯಿತು ಎಂದು ಎಸ್ ಪಿ ತಿಳಿಸಿದ್ದಾರೆ. 

ಮೂವರನ್ನು ಸ್ಥಳೀಯ ನ್ಯಾಯಾಲಯವೊಂದರ ಮುಂದೆ ಹಾಜರುಪಡಿಸಿದ್ದು, 14 ದಿನಗಳ ಕಾಲ ನ್ಯಾಯಾಂಗ ಕಸ್ಟಡಿಗೆ ಒಪ್ಪಿಸಲಾಯಿತು. ಈ ಹಿಂದೆ ಇದೇ ಪ್ರಕರಣದಲ್ಲಿ ನಾಲ್ವರನ್ನು ಬಂಧಿಸಲಾಗಿತ್ತು.

SCROLL FOR NEXT