ಬಾಬುಲ್ ಸುಪ್ರಿಯೋ 
ದೇಶ

ಬಾಬುಲ್ ಸುಪ್ರಿಯೋರಿಂದ ನಾಳೆ ಅಧಿಕೃತವಾಗಿ ಸಂಸದ ಸ್ಥಾನಕ್ಕೆ ರಾಜೀನಾಮೆ

ಇತ್ತೀಚಿಗೆ ಬಿಜೆಪಿ ತೊರೆದು ಟಿಎಂಸಿ ಸೇರಿರುವ ಮಾಜಿ ಕೇಂದ್ರ ಸಚಿವ ಬಾಬುಲ್ ಸುಪ್ರಿಯೋ ಅವರು ಮಂಗಳವಾರ ಅಧಿಕೃತವಾಗಿ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಟ್ವೀಟ್ ಮಾಡಿದ್ದಾರೆ.

ನವದೆಹಲಿ: ಇತ್ತೀಚಿಗೆ ಬಿಜೆಪಿ ತೊರೆದು ಟಿಎಂಸಿ ಸೇರಿರುವ ಮಾಜಿ ಕೇಂದ್ರ ಸಚಿವ ಬಾಬುಲ್ ಸುಪ್ರಿಯೋ ಅವರು ಮಂಗಳವಾರ ಅಧಿಕೃತವಾಗಿ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಟ್ವೀಟ್ ಮಾಡಿದ್ದಾರೆ.

ಲೋಕಸಭಾ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಲು ಅಪಾಯಿಂಟ್ಮೆಂಟ್ ನೀಡಿದ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಬಾಬುಲ್ ಸುಪ್ರಿಯೋ ಅವರು ಟ್ವೀಟ್ ಮೂಲಕ ಧನ್ಯವಾದ ಅರ್ಪಿಸಿದ್ದಾರೆ.

"ಸಂಸದ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಲು ನಾಳೆ ಬೆಳಗ್ಗೆ 11 ಗಂಟೆಗೆ ನನಗೆ ಸಮಯ ನೀಡಿದ್ದಕ್ಕಾಗಿ ಗೌರವಾನ್ವಿತ ಸ್ಪೀಕರ್ ಸರ್ ಓಂ ಬಿರ್ಲಾ ಅವರಿಗೆ ಧನ್ಯವಾದಗಳು. ನಾನು ಈ ಸ್ಥಾನವನ್ನು ಗೆದ್ದಿದ್ದೇನೆ. ಅದನ್ನು ಉಳಿಸಿಕೊಳ್ಳಲು ಮತ್ತೆ ಗೆಲ್ಲುತ್ತೇನೆ" ಎಂದು ಸುಪ್ರಿಯೋ ಟ್ವೀಟ್ ಮಾಡಿದ್ದಾರೆ.

ಸುಪ್ರಿಯೋ ಅವರು ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಸೇರಿಕೊಂಡ ಎರಡು ದಿನಗಳ ನಂತರ ಸೆಪ್ಟೆಂಬರ್ 20 ರಂದು ಬಿರ್ಲಾ ಅವರಿಗೆ ಪತ್ರ ಬರೆದು, ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಲು ಅಪಾಯಿಂಟ್ಮೆಂಟ್ ನೀಡುವಂತೆ ಕೋರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?